More

    ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ; ಇಂದಿನಿಂದ ಏಪ್ರಿಲ್​ 17ರವರೆಗೆ ಮಳೆ ಸಾಧ್ಯತೆ

     ಬೆಂಗಳೂರು:   ರಾಜ್ಯದಲ್ಲಿ ಮಳೆ ಕಾಣದೇ ಬಿಸಿಲ ಬೇಗೆಗೆ ಜನ ಕಂಗೆಟ್ಟಿದ್ದಾರೆ. ರಾಜ್ಯಾದ್ಯಂತ ಬಿಸಿಲ ಧಗೆ ಹೆಚ್ಚಿದೆ, ಕುಡಿಯುವ ನೀರಿಗೂ ಪರದಾಡುವ ಸ್ಥಿತಿ ನಿರ್ಮಾಣವಾಗಿದೆ.  ನಿನ್ನೆ ಕೆಲವು ಕಡೆ ಮಳೆಯಾಗಿದೆ. ಇಂದಿನಿಂದ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

    ಮೂರು ವಾರಗಳಿಂದ ರಾಜ್ಯದ ಬಹುತೇಕ ಪ್ರದೇಶಗಳು ಅತಿಯಾದ ಬಿಸಿಲು ಮತ್ತು ಬಿಸಿಗಾಳಿಗೆ ಜನ ಹೈರಾಣಾಗುತ್ತಿದ್ದಾರೆ. ಇಂದಿನಿಂದ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

    ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಮೂರು ದಿನ ಒಣಹವೆ ಮುಂದುವರೆಯಲಿದ್ದು, ಏಪ್ರಿಲ್​ 17ರಿಂದ ಎರಡು ದಿನಗಳ ಕಾಲ ಮಳೆಯಾಗಲಿದೆ.

    ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಹಾಸನ, ಕೊಡಗು, ಮಂಡ್ಯ, ಮೈಸೂರು, ಶಿವಮೊಗ್ಗ, ತುಮಕೂರು, ರಾಮನಗರ, ವಿಜಯನಗರದಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ.

    ಮಕ್ಕಳನ್ನ ಸಾಕುವುದಕ್ಕೆ ಕಷ್ಟವಾಗುತ್ತಿದೆ ಎಂದು ತಲೆ ದಿಂಬಿನಿಂದ ಉಸಿರುಗಟ್ಟಿಸಿ ಕೊಲೆಗೈದ ತಾಯಿ

    ಅಮಾಯಕ ಪತಿಗೆ ಯಾಕೆ ಮೋಸ ಮಾಡಿದ್ದೀರಿ? ಮುಟ್ಟಿ ನೋಡಿ ಕೊಳ್ಳುವ ಉತ್ತರ ಕೊಟ್ರು ಸಮಂತಾ

    ಅವಕಾಶ ಸಿಗದ್ದಕ್ಕೆ ವೇಶ್ಯಾವಾಟಿಕೆ ಮಾಡಿಕೊಂಡಿದ್ದ ಸ್ಟಾರ್ ಹೀರೋಯಿನ್ ಸತ್ತಿದ್ದು ಮಾತ್ರ ಹಸಿವಿನಿಂದ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts