ಕರ್ನಾಟಕದಲ್ಲಿ ಇಂದಿನಿಂದ ಮೂರು ದಿನ ಮಳೆ: ನಿಲ್ಲದ ವರುಣ, ತಮಿಳುನಾಡಿನಲ್ಲಿ ಇಂದು ಕೂಡ ಶಾಲೆಗಳಿಗೆ ರಜೆ

rain fall
Published on

ಬೆಂಗಳೂರು: ಕರಾವಳಿ ಮತ್ತು ದಕ್ಷಿಣ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಇಂದಿನಿಂದ ಮೂರು ದಿನಗಳ ಕಾಲ ಮಳೆಯಾಗುವ ಸಂಭವವಿದ್ದು, ಮೊದಲ ದಿನ ಚಿಕ್ಕಮಗಳೂರು ಮತ್ತು ಕೊಡಗು ಜಿಲ್ಲೆಗೆ ಹವಾಮಾನ ಇಲಾಖೆ ಯೆಲ್ಲೊ ಅಲರ್ಟ್‌ ಘೋಷಿಸಿದೆ. 

ಉತ್ತರ ಕನ್ನಡ, ದಕ್ಷಿಣ ಕನ್ನಡ ಮತ್ತು ಉಡುಪಿ ಹಾಗೂ ದಕ್ಷಿಣ ಒಳನಾಡಿನ ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು ಮತ್ತು ವಿಜಯನಗರ ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಉತ್ತರ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಹಗುರದಿಂದ ಕೂಡಿದ ಸಾಧಾರಣ ಮಳೆಯಾಗಲಿದೆ.

ನಿನ್ನೆಯೂ ಸಿಲಿಕಾನ್ ಸಿಟಿಯಲ್ಲಿ ಮಳೆಯಾಗಿದ್ದು, ಬೆಂಗಳೂರಿನಲ್ಲಿ 2 ದಿನಗಳ ಕಾಲ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.   

ತಮಿಳುನಾಡಿನಲ್ಲಿ ಮಳೆ ನಿಲ್ಲುತ್ತಿಲ್ಲ

ತಮಿಳುನಾಡಿನಲ್ಲಿ ಹಲವು ದಿನಗಳಿಂದ ಸುರಿಯುತ್ತಿರುವ ಭಾರೀ ಮಳೆಗೆ ಅಂತ್ಯ ಕಾಣುವ ಲಕ್ಷಣಗಳೇ ಕಾಣುತ್ತಿಲ್ಲ. ಇಂದು ಕೂಡ ಭಾರೀ ಮಳೆಯಿಂದಾಗಿ ಕುನ್ನೂರು ಮತ್ತು ಕೋಟಗಿರಿಯ ಎಲ್ಲಾ ಸರ್ಕಾರಿ ಮತ್ತು ಖಾಸಗಿ ಶಾಲೆಗಳಿಗೆ ರಜೆ ಘೋಷಿಸಲಾಗಿದೆ. 

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net