More

    ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್‌; ಈ 12 ಜಿಲ್ಲೆಗಳಲ್ಲಷ್ಟೆ ಮಳೆ…!

    ಬೆಂಗಳೂರು: ರಾಜ್ಯದ ಕರಾವಳಿ ಭಾಗದ ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಗುಡುಗು ಸಹಿತ ಧಾರಾಕಾರ ಮಳೆ ಮುಂದುವರಿಯುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

    ಮೇ 27 ಹಾಗೂ 28ರಂದು ಈ ಎರಡೂ ಜಿಲ್ಲೆಗಳಿಗೆ ‘ಯಲ್ಲೋ ಅಲರ್ಟ್​​​’ ಸೂಚನೆ ನೀಡಲಾಗಿದೆ. ಉಳಿದಂತೆ ಬಾಗಲಕೋಟೆ, ಬೆಳಗಾವಿ, ಬೀದರ್​​, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ಯಾದಗಿರಿ, ವಿಜಯಪುರ ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

    ದಕ್ಷಿಣ ಒಳನಾಡು, ಉತ್ತರ ಒಳನಾಡು ಭಾಗದ ಜಿಲ್ಲೆಗಳಲ್ಲಿ ಅಲ್ಲಲ್ಲಿ ಸಾಧಾರಣ ಮಳೆಯ ಸಾಧ್ಯತೆ ಇದೆ. ಮಲೆನಾಡಿನ ಶಿವಮೊಗ್ಗ, ಹಾಸನ, ಚಿಕ್ಕಮಗಳೂರು, ಕೊಡಗು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಇದೀಗ ಕರಾವಳಿಯ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡದಲ್ಲಿ ಮಳೆಯು ಸಾಧಾರಣವಾಗಿದೆ. ರಾಜಧಾನಿ ಬೆಂಗಳೂರಲ್ಲಿ ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆ ಇದೆ.

    ಮೇ 27 ಹಾಗೂ 28ರಂದು ದಕ್ಷಿಣ ಒಳನಾಡು, ಮಲೆನಾಡು ಮತ್ತು ಕರಾವಳಿ ಜಿಲ್ಲೆಗಳಲ್ಲಿ ಮಳೆಯಾಗಲಿದ್ದು, ಉತ್ತರ ಒಳನಾಡು ಭಾಗದಲ್ಲಿ ವ್ಯಾಪಕವಾಗಿ ಹಗುರದಿಂದ ಮಧ್ಯಮ ಮಳೆಯಾಗಲಿದೆ. ರಾಜ್ಯದ ಪ್ರತ್ಯೇಕ ಸ್ಥಳಗಳಲ್ಲಿ ಗುಡುಗು ಮಿಂಚಿನ ಜತೆಗೆ ಗಾಳಿ ವೇಗವು ಗಂಟೆಗೆ 30-40 ಕಿ.ಮೀ ಬೀಸುವ ಸಾಧ್ಯತೆಯಿದೆ.

    ರಾಜ್ಯಾದ್ಯಂತ ಮಳೆ ಮುಂದುವರಿದಿದ್ದು, 12 ಜಿಲ್ಲೆಗಳಲ್ಲಿ ಭಾರಿ ಮಳೆ ಜತೆಗೆ ಬಿರುಗಾಳಿ ಬೀಸಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು ನೀಡಿದೆ. ಈ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಯಲ್ಲೋ ಅಲರ್ಟ್​​ ನೀಡಲಾಗಿದೆ.

    ಉತ್ತರ ಕನ್ನಡ ಜಿಲ್ಲೆಯ ಬಹುತೇಕ ಕಡೆ ಮಳೆಯಾಗಲಿದ್ದು, ಕೆಲವು ಕಡೆ ಗುಡುಗು ಮಿಂಚು ಸಹಿತ ಮಳೆ ಬೀಳುವ ಸಾಧ್ಯತೆ ಇದೆ ಎಂದು ವರದಿ ಹೇಳಿದೆ.

    ಕರ್ನಾಟಕದ ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಗದಗ, ಹಾವೇರಿ ಜಿಲ್ಲೆಗಳ ಕೆಲವು ಕಡೆಗಳಲ್ಲಿ ಮಳೆಯಾಗಲಿದೆ. ಒಂದೆರಡು ಕಡೆಗಳಲ್ಲಿ ಗುಡುಗು ಮಿಂಚು ಸಹಿತ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಇನ್ನುಳಿದಂತೆ, ಬಾಗಲಕೋಟೆ, ಬೀದರ್, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ,ಯಾದಗಿರಿ ಜಿಲ್ಲೆಗಳಲ್ಲಿ ಒಣಹವೆ ಇರಲಿದೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts