More

  ಕರ್ನಾಟಕ ಪತ್ರಕರ್ತೆಯರ ಸಂಘದ ವಾರ್ಷಿಕ ಪ್ರಶಸ್ತಿ ಪ್ರಕಟ

  ಬೆಂಗಳೂರು: ಕರ್ನಾಟಕ ಪತ್ರಕರ್ತೆಯರ ಸಂಘವು ಪ್ರಥಮ ವರ್ಷದ ವಾರ್ಷಿಕ ಪ್ರಶಸ್ತಿಯನ್ನು ಪ್ರಕಟಿಸಿದ್ದು, ಮಾಧ್ಯಮ ಕ್ಷೇತ್ರೆದ ಸಾಧನೆಗಾಗಿ ಇಬ್ಬರು ಹಾಗೂ ಸಾಮಾಜಿಕ ಕ್ಷೇತ್ರದಲ್ಲಿನ ಸಾಧನೆಗಾಗಿ ಒಬ್ಬರು ಸೇರಿ ಮೂವರನ್ನು ಪ್ರಶಸ್ತಿಗೆ ಆಯ್ಕೆ ಮಾಡಿದೆ.

  ದೂರದರ್ಶನದಲ್ಲಿ ಸೇವೆ ಸಲ್ಲಿಸಿರುವ ಹಿರಿಯ ಪತ್ರಕರ್ತೆ ಗಾಯತ್ರಿ ಚಂದ್ರಶೇಖರ್, ಕಿರಿಯ ಪತ್ರಕರ್ತೆ ಅನಿತಾ. ಎಚ್ ಹಾಗೂ ಸಾಮಾಜಿಕ ಕ್ಷೇತ್ರದಲ್ಲಿನ ವಾರ್ಷಿಕ ಪ್ರಶಸ್ತಿಗೆ ಇಸ್ರೋ ಚಂದ್ರಯಾನ-3 ಡೆಪ್ಯೂಟಿ ಪ್ರಾಜೆಕ್ಟ್ ಡೈರೆಕ್ಟರ್ ಎಂ.ವಿ. ರೂಪಾ ಪ್ರಶಸ್ತಿಗೆ ಭಾಜನರಾಗಿದ್ದಾರೆ.

  ನಗರದ ಜ್ಞಾನಜ್ಯೋತಿ ಸಭಾಂಗಣದ (ಬೆಂಗಳೂರು ನಗರ ವಿವಿ) ಸೆಮಿನಾರ್ ಹಾಲ್‌ನಲ್ಲಿ ಏಪ್ರಿಲ್ 3ರಂದು ಬೆಳಗ್ಗೆ 10.30ಕ್ಕೆ ನಡೆಯಲಿರುವ ಮಹಿಳಾ ದಿನಾಚರಣೆ ಸಮಾರಂಭದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು. ಇದೇ ಸಂದರ್ಭದಲ್ಲಿ ಬೆಂಗಳೂರು ನಗರ ವಿಶ್ವವಿದ್ಯಾಲಯ ಸಮೂಹ ಸಂವಹನ ಮತ್ತು ಪತ್ರಿಕೋದ್ಯಮ ವಿಭಾಗದ ವತಿಯಿಂದ ಸಾಮಾಜಿಕ ಕಾರ್ಯಕರ್ತೆ ಕಾತ್ಯಾಯಿನಿ ಚಾಮರಾಜ ಅವರಿಗೂ ಮಹಿಳಾ ಸಾಧಕಿ ಪ್ರಶಸ್ತಿ ಪ್ರದಾನ ಮಾಡಲಾಗುತ್ತಿದೆ ಎಂದು ಪತ್ರಕರ್ತೆಯರ ಸಂಘದ ಅಧ್ಯಕ್ಷೆ ಪದ್ಮಾ ಶಿವಮೊಗ್ಗ ತಿಳಿಸಿದ್ದಾರೆ.

  ಸಿನಿಮಾ

  ಲೈಫ್‌ಸ್ಟೈಲ್

  ಟೆಕ್ನಾಲಜಿ

  Latest Posts