More

    ರಾಜ್ಯ ಹಿರಿಯರ ತಂಡಕ್ಕೆ ಶಿವಮೊಗ್ಗದ ಅದಿತಿ ಆಯ್ಕೆ

    ಶಿವಮೊಗ್ಗ: ಕರ್ನಾಟಕ ಮಹಿಳಾ ಕ್ರಿಕೆಟ್‌ನ ಹಿರಿಯರ ತಂಡಕ್ಕೆ ಶಿವಮೊಗ್ಗದ ಪ್ರತಿಭಾನ್ವಿತೆ ಅದಿತಿ ರಾಜೇಶ್ ಆಯ್ಕೆಯಾಗಿದ್ದಾರೆ.
    ಜ.18ರಿಂದ 28ರವರೆಗೆ ಮುಂಬೈನಲ್ಲಿ ನಡೆಯುವ ಪಂದ್ಯಾವಳಿಯಲ್ಲಿ ರಾಜ್ಯ ಹಿರಿಯ ತಂಡವನ್ನು ಪ್ರತಿನಿಧಿಸಲಿದ್ದಾರೆ. ಕಳೆದ ವರ್ಷವಷ್ಟೇ ಏ.18ರಿಂದ ಗುಜರಾತ್‌ನ ರಾಜ್‌ಕೋಟ್‌ನಲ್ಲಿ ನಡೆದಿದ್ದ ಹಿರಿಯ ಮಹಿಳಾ ಟಿ-20 ಕ್ರಿಕೆಟ್ ಪಂದ್ಯಾವಳಿಗೆ ಆಯ್ಕೆಯಾಗಿದ್ದರು.
    ಭಾರತೀಯ ಮಹಿಳಾ ಕ್ರಿಕೆಟ್ ತಂಡದ ಆಟಗಾರ್ತಿ ವೇದಾ ಕೃಷ್ಣಮೂರ್ತಿ ತಂಡವನ್ನು ಮುನ್ನಡೆಸಿದ್ದರು. ವಿನೋಬನಗರದ ಡಿವಿಎಸ್ ಕಾಲೇಜಿನಲ್ಲಿ ಅದಿತಿ ರಾಜೇಶ್ ಪದವಿ ಪೂರ್ಣಗೊಳಿಸಿದ್ದು ಸಹ್ಯಾದ್ರಿ ಕಾಲೇಜಿನ ಕ್ರೀಡಾಂಗಣದಲ್ಲಿ 9 ವರ್ಷಗಳಿಂದ ಪಿ.ವಿ.ನಾಗರಾಜ್ ಬಳಿ ತರಬೇತಿ ಪಡೆಯುತ್ತಿದ್ದಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts