ರಮೇಶ್ ಜಾರಕಿಹೊಳಿ ನಿವಾಸದ ಎದುರು ಕಾಂಗ್ರೆಸ್ ಪ್ರತಿಭಟನೆ

dks jarakiholi
Published on

ಬೆಂಗಳೂರು: ಅಶ್ಲೀಲ ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ವಿರುದ್ಧ ಹೇಳಿಕೆ ನೀಡಿರುವ ಬಿಜೆಪಿ ಶಾಸಕ ರಮೇಶ್ ಜಾರಕಿಹೊಳಿ ಅವರ ಸದಾಶಿವನಗರದ ಮನೆ ಮುಂದೆ ಪ್ರತಿಭಟನೆ ನಡೆಸುವುದಾಗಿ ಕಾಂಗ್ರೆಸ್ ಹೇಳಿದೆ.

ಇಂದು ರಾತ್ರಿ ಎಂಟು ಗಂಟೆಗೆ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ಯುವ ಕಾಂಗ್ರೆಸ್ ಅಧ್ಯಕ್ಷ ರಕ್ಷಾ ರಾಮಯ್ಯ ಹೇಳಿದ್ದಾರೆ.

'ನಮ್ಮ ಪಕ್ಷದ ನಾಯಕರು, ಕೆಪಿಸಿಸಿ ಅಧ್ಯಕ್ಷರಾದ  ಡಿ.ಕೆ. ಶಿವಕುಮಾರ್ ವಿರುದ್ಧ ಅವಾಚ್ಯ ಶಬ್ಧಗಳನ್ನು ಬಳಸಿ ನಿಂದಿಸಿ ತೇಜೋವಧೆ ಮಾಡಿರುವ ಬಜೆಪಿಯ ಶಾಸಕ ರಮೇಶ್ ಜಾರಕಿಹೊಳಿ ವಿರುದ್ಧ ಪ್ರದೇಶ ಯುವ ಕಾಂಗ್ರೆಸ್ ಘಟಕದಿಂದ ಪ್ರತಿಭಟನೆ ಹಮ್ಮಿಕೊಳ‍್ಳಲಾಗಿದೆ. ಸಿ.ಡಿ ಪ್ರಕರಣದಲ್ಲಿ ಸಿಕ್ಕಿಕೊಂಡಿರುವ ಅತೃಪ್ತ ಶಾಸಕ ರಮೇಶ ಜಾರಕಿಹೊಳಿ ಅವರನ್ನು ಬಂಧಿಸುವಂತೆ ಆಗ್ರಹಿಸಿ ಸದಾಶಿವನಗರದ ರಮೇಶ್ ಜಾರಕಿಹೊಳಿ ನಿವಾಸದ ಮುಂದೆ ಪ್ರತಿಭಟನೆ ನಡೆಸುತ್ತಿದೆ. ಬಿಜೆಪಿಯ ಅನೀತಿ ಮತ್ತು ಅಧರ್ಮ ರಾಜಕಾರಣದ ವಿರುದ್ಧ ಪ್ರತಿಭಟನೆ ನಡೆಸಲಾಗುತ್ತಿದೆ' ಎಂದು ಅವರು ಹೇಳಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net