

ಬೆಂಗಳೂರು: ರಾಜ್ಯದಲ್ಲಿ ಕರೊನಾ ಕೇಕೇ ಜೋರಾಗುತ್ತಲೇ ಇದೆ. ಮಹಾರಾಷ್ಟ್ರ ಸೇರಿದಂತೆ ವಿವಿಧ ರಾಜ್ಯಗಳಿಂದ ಕರ್ನಾಟಕಕ್ಕೆ ಬಂದಿರುವವರಲ್ಲಿ ಸೋಂಕಿನ ಪ್ರಮಾಣ ದಿನೇ ದಿನೇ ಹೆಚ್ಚುತ್ತಲೇ ಸಾಗಿದೆ. ಅದರಲ್ಲಂತೂ ಮುಂಬೈನಿಂದ ರಾಜ್ಯದ ವಿವಿಧ ಭಾಗಗಳಿಗೆ ಬಂದಿರುವವರಲ್ಲಿ ವಿಪರೀತ ಸಂಖ್ಯೆಯಲ್ಲಿ ಸೋಂಕು ಪತ್ತೆಯಾಗುತ್ತಿದೆ.
ನಿನ್ನೆ ಸಂಜೆ 5 ಗಂಟೆಯಿಂದ ಇಲ್ಲಿಯವರೆಗೆ 54 ಹೊಸ ಪ್ರಕರಣಗಳು ಕರ್ನಾಟಕದಲ್ಲಿ ಪತ್ತೆಯಾಗಿವೆ. ಈ ಮೂಲಕ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 1146ಕ್ಕೆ ಏರಿದೆ. ಈ ಪೈಕಿ 497 ಮಂದಿ ಆಸ್ಪತ್ರೆಗಳಿಂದ ಬಿಡುಗಡೆಯಾಗಿದ್ದರೆ, 611 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಕರೊನಾ ಮಾರಿ ಇಲ್ಲಿಯವರೆಗೆ 37 ಮಂದಿಯನ್ನು ಬಲಿ ಪಡೆದಿದೆ.
ನಿನ್ನೆ ಸಂಜೆಯಿಂದ ಇಲ್ಲಿಯವರೆಗೆ ಪತ್ತೆಯಾಗಿರುವ ಪ್ರಕರಣಗಳು ಈ ರೀತಿ ಇವೆ.
ಮಂಡ್ಯ 22, ಕಲಬುರಗಿ 10, ಹಾಸನ 6, ಧಾರವಾಡ 4, ಕೋಲಾರ 3, ಯಾದಗಿರಿ 3, ದಕ್ಷಿಣ ಕನ್ನಡ 2, ಶಿವಮೊಗ್ಗ 2, ಉಡುಪಿ 1, ವಿಜಯಪುರ 1
ನಿಜಾಮುದ್ದೀನ್ ಮರ್ಕಜ್ ಮಸೀದಿಯಲ್ಲಿ ನಡೆದ ಸಭೆಯಲ್ಲಿ ಭಾಗವಹಿಸಿರುವ ಪ್ರತಿಯೊಬ್ಬರೂ ಉಚಿತ ಆರೋಗ್ಯ ಸಹಾಯವಾಣಿ 080-29711171 ಸಂಪರ್ಕಿಸುವಂತೆ ಸರ್ಕಾರ ಸೂಚಿಸಿದೆ.
ಸೋಂಕಿತರ ಪ್ರಯಾಣದ ಮಾಹಿತಿ ಬೇಕಿದ್ದರೆ www.karnataka.gov.in. ಮೊಬೈಲ್ ಅಪ್ಲಿಕೇಷ್ ಡೌನ್‌ಲೋಡ್ ಮಾಡಿಕೊಳ್ಳುವಂತೆ ಸರ್ಕಾರದ ಪ್ರಕಟಣೆ ತಿಳಿಸಿದೆ. ಕರೊನಾ ವೈರಸ್ ಉಚಿತ ಆರೋಗ್ಯ ಸಹಾಯವಾಣಿ ಸಂಖ್ಯೆ: 104/ 9745697456.
ಸಂಪೂರ್ಣ ವಿವರ ಇಲ್ಲಿದೆ: