More

    ಅರ್ಧ ದಿನದಲ್ಲೇ 38 ಹೊಸ ಸೋಂಕು ಪತ್ತೆ: 353ರತ್ತ ಸೋಂಕಿತರ ಸಂಖ್ಯೆ- 82 ಮಂದಿ ಬಿಡುಗಡೆ

    ಬೆಂಗಳೂರು: ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 353ಕ್ಕೆ ಏರಿದೆ. ನಿನ್ನೆ ಸಂಜೆಯಿಂದ ಇಲ್ಲಿಯವರೆಗೆ 38 ಹೊಸ ಕೇಸ್‌ಗಳು ಪತ್ತೆಯಾಗಿದ್ದು, ಇದುವರೆಗೆ 82 ಮಂದಿ ಬಿಡುಗಡೆ ಹೊಂದಿದ್ದಾರೆ. ಇಲ್ಲಿಯವರೆಗೆ ಸೋಂಕಿನಿಂದ ಮೃತಪಟ್ಟವರ ಸಂಖ್ಯೆ 13ಕ್ಕೆ ಸ್ಥಿರವಾಗಿದೆ.

    ಹೊಸದಾಗಿ ಸೋಂಕು ಪತ್ತೆಯಾದವರ ವಿವರ ಹೀಗಿದೆ:
    ಬೆಂಗಳೂರು ನಗರ 9, ಮೈಸೂರು ಜಿಲ್ಲೆಯ ನಂಜನಗೂಡು 10, ಮಂಡ್ಯ ಜಿಲ್ಲೆಯ ಮಳವಳ್ಳಿ 3, ದಕ್ಷಿಣ ಕನ್ನಡ ಜಿಲ್ಲೆಯ ಉಪ್ಪಿನಂಗಡಿ 1, ಬೀದರ್‌ 1, ವಿಜಯಪುರ 2, ಬಳ್ಳಾರಿ ಜಿಲ್ಲೆಯ ಹೊಸಪೇಟೆ 7, ಚಿಕ್ಕಬಳ್ಳಾಪುರ 3, ಮೈಸೂರು 2.

    ಕರೊನಾ ಸೋಂಕು ತಡೆಗಟ್ಟಲು ಮಸೀದಿಯಲ್ಲಿ ಯಾವುದೇ ಸಭೆ, ಪ್ರಾರ್ಥನೆ ನಡೆಸದಂತೆ ಹಾಗೂ ಮೃತ ವ್ಯಕ್ತಿಗಳನ್ನು ದಫನ್‌ ಮಾಡಲು ಅನುಮತಿ ನೀಡದಂತೆ ಕರ್ನಾಟಕ ರಾಜ್ಯ ವಕ್ಫ್‌ ಮಂಡಳಿಯು ರಾಜ್ಯದ ಎಲ್ಲ ವ್ಯವಸ್ಥಾಪಕರಿಗೆ ನಿರ್ದೇಶನ ನೀಡಿರುತ್ತದೆ.

    ಸೋಂಕಿತರ ಪ್ರಯಾಣದ ಮಾಹಿತಿ ಬೇಕಿದ್ದರೆ www.karnataka.gov.in. ಮೊಬೈಲ್‌ ಅಪ್ಲಿಕೇಷ್‌ ಡೌನ್‌ಲೋಡ್‌ ಮಾಡಿಕೊಳ್ಳುವಂತೆ ಸರ್ಕಾರದ ಪ್ರಕಟಣೆ ತಿಳಿಸಿದೆ. ಕರೊನಾ ವೈರಸ್‌ ಉಚಿತ ಆರೋಗ್ಯ ಸಹಾಯವಾಣಿ ಸಂಖ್ಯೆ: 104/ 9745697456.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts