More

    ಕರ್ನಾಟಕದ ಬಸ್​ಗಳಿಗೆ ಕಪ್ಪು ಬಣ್ಣ ಬಳಿದ ಪ್ರತಿಭಟನಾಕಾರರು; ಮಹಾರಾಷ್ಟ್ರ ಸರ್ಕಾರ ಕಾನೂನು ಕ್ರಮ ಕೈಗೊಳ್ಳಲಿ ಎಂದ ಬೊಮ್ಮಾಯಿ

    ಮಹಾರಾಷ್ಟ್ರ: ಗಡಿ ವಿವಾದದ ಕುರಿತು ಕರ್ನಾಟಕ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿಕೆ ಖಂಡಿಸಿ ಮರಾಠ ಮಹಾಸಂಘ ಕರ್ನಾಟಕದ ಬಸ್​ಗಳಿಗೆ ಕಪ್ಪು ಬಣ್ಣ ಬಳಿದು ಪ್ರತಿಭಟನೆ ನಡೆಸಿದೆ. ಮಹಾರಾಷ್ಟ್ರಕ್ಕೆ ತೆರಳುವ ಕರ್ನಾಟಕದ ಬಸ್​ಗಳಿಗೆ ಕಪ್ಪು ಬಣ್ಣ ಬಳಿದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

    ಇದೀಗ ಈ ಘಟನೆಗೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪ್ರತಿಕ್ರಿಯೆ ನೀಡಿದ್ದಾರೆ. ನಾವು ಒಕ್ಕೂಟ ವ್ಯವಸ್ಥೆಯಲ್ಲಿದ್ದೇವೆ, ಮಹಾರಾಷ್ಟ್ರ ಸರ್ಕಾರ ಕಾನೂನು ಸುವ್ಯವಸ್ಥೆ ಬಗ್ಗೆ ಅಗತ್ಯ ಕ್ರಮ ಕೈಗೊಳ್ಳಲಿ. ನಮ್ಮ ಗಡಿ ರಕ್ಷಣೆಗೆ ನಾವು ಬದ್ಧರಾಗಿದ್ದೇವೆ. ಕಾನೂನು ಸುವ್ಯವಸ್ಥೆಗೆ ಧಕ್ಕೆ ತರುವ ಕೆಲಸ ಮಾಡಿದರೆ ಸೂಕ್ತ ಕ್ರಮಕೈಗೊಳ್ಳುತ್ತೇವೆ ಎಂದು ಹೇಳಿದ್ದಾರೆ.

    ಪುಣೆ ಜಿಲ್ಲೆಯ ದೌಂಡ್​ನ ಬಸ್ ನಿಲ್ದಾಣದಲ್ಲಿ ಕರ್ನಾಟಕದ ಬಸ್​​ಗಳಿಗೆ ಮರಾಠ ಮಹಾಸಂಘದ ಕಾರ್ಯಕರ್ತರು ಕಪ್ಪು ಬಣ್ಣ ಬಳಿದಿದ್ದಾರೆ. ಕಾರ್ಯಕರ್ತರ ಈ ನಡೆಗೆ ಸಾಕಷ್ಟು ಆಕ್ರೋಶ ಕೇಳಿ ಬರುತ್ತಿದೆ.

    ಇತ್ತೀಚೆಗೆ ಮಹಾರಷ್ಟ್ರು ಹಾಗೂ ಕರ್ನಾಟಕದ ಗಡಿ ವಿವಾದದ ಸಮಸ್ಯೆ ಹೆಚ್ಚಾಗುತ್ತಿದೆ. ಮಹಾರಾಷ್ಟ್ರ ಉಪಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಮಾತನಾಡುತ್ತಾ, ಕರ್ನಾಟಕದಲ್ಲಿರುವ ನಿಪ್ಪಾಣಿ ಹಾಗೂ ಬೆಳಗಾವಿಯನ್ನು ಮಹಾರಷ್ಟ್ರಕ್ಕೆ ಸೇರಿಸುತ್ತೇವೆ ಎಂದು ಹೇಳಿದ್ದರು. ಇದಕ್ಕೆ ತಿರುಗೇಟು ನೀಡಿದ ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ದೇವೇಂದ್ರ ಫಡ್ನವೀಸ್ ಪ್ರಚೋದನಕಾರಿ ಹೇಳಿಕೆ ನೀಡಿದ್ದು, ಅವರ ಕನಸು ನನಸಾಗುವುದಿಲ್ಲ. ನೆಲ, ಜಲ ಹಾಗೂ ಗಡಿಯ ವಿಚಾರದಲ್ಲಿ ನಮ್ಮ ಸರ್ಕಾರ ಬದ್ಧವಾಗಿದೆ ಎಂದು ಹೇಳಿದ್ದರು.

    ಗಡಿ ವಿಚಾರವಾಗಿ ಮಹಾರಾಷ್ಟ್ರ ಸಿಎಂ, ಡಿಸಿಎಂ ಹೇಳಿಕೆ ವಿಚಾರವಾಗಿ ರಾಜ್ಯ.ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಪ್ರತಿಕ್ರಿಯೆ ನೀಡಿದ್ದು, ಮಹಾರಾಷ್ಟ್ರ ಹಾಗೂ ಕರ್ನಾಟಕದಲ್ಲಿ ಒಂದೇ ಪಕ್ಷದ ಸರ್ಕಾರ ಆಡಳಿತದಲ್ಲಿದೆ. ಇದೆಲ್ಲ ಮ್ಯಾಚ್ ಫಿಕ್ಸಿಂಗ್, ಇಲ್ಲಿನ ಮರಾಠಿಗರು ನಮ್ಮವರೆ. ಕನ್ನಡಿಗರೇ ಅವರಿಗೆ ಹಿಂದಿನಿಂದಲೂ ರಕ್ಷಣೆ ನೀಡುತ್ತಾ ಬಂದಿದ್ದೇವೆ. ಈ ಬಗ್ಗೆ ಯಾರೂ ಚಿಂತಿಸುವುದು ಬೇಡ. ಇವರೆಲ್ಲಾ ರಾಜಕೀಯ ಸಂದರ್ಭದಲ್ಲಿ ಮ್ಯಾಚ್ ಫಿಕ್ಸಿಂಗ್ ಮಾಡಿಕೊಂಡಿದ್ದಾರೆ ಎಂದು ಹೇಳಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts