ಸಿನಿಮಾ

ಫ್ಯಾಷನ್ ಡಿಸೈನರ್ ಜತೆ ಪ್ರೀತಿಯನ್ನು ಅಧಿಕೃತಗೊಳಿಸಿದ ನಟ ಜೆಕೆ

ಬೆಂಗಳೂರು: ಸ್ಯಾಂಡಲ್‌ವುಡ್ ನಟ ಕಾರ್ತಿಕ್ ಜಯರಾಮ್‌ ಸಿನಿಮಾ ಹಾಗೂ ಕ್ರಿಕೆಟ್​​ ವಿಚಾರವಾಗಿ ಸುದ್ದಿಯಲ್ಲಿರುತ್ತಾರೆ. ಇದೀಗ ಮದುವೆ ವಿಚಾರವಾಗಿ ಮತ್ತೇ ಸುದ್ದಿಯಲ್ಲಿದ್ದಾರೆ.

ಇತ್ತೀಚೆಗಷ್ಟೆ ಹುಟ್ಟುಹಬ್ಬ ಆಚರಿಸಿಕೊಂಡ ನಟ ಜೆಕೆಗೆ ಫ್ಯಾಷನ್ ಡಿಸೈನರ್ ಅಪರ್ಣಾ ಸಮಂತಾ ಫೋಟೋ ಶೇರ್ ಮಾಡಿ ಪ್ರೀತಿಯ ವಿಶ್ ಮಾಡಿದ್ದಾರೆ. ಈ ಮೂಲಕ ಅಪರ್ಣ ಮತ್ತು ಜೆಕೆ ಇಬ್ಬರ ಪ್ರೀತಿ ವಿಚಾರವನ್ನು ಅಧಿಕೃತ ಗೊಳಿಸಿದ್ದಾರೆ.

ಇದನ್ನೂ ಓದಿ: ಚಾಕಲೇಟ್‌ ರ್‍ಯಾಪರ್​​​ನಲ್ಲಿ ಬಚ್ಚಿಟ್ಟು ಸಾಗಿಸುತ್ತಿದ್ದ 16.5 ಲಕ್ಷ ರೂ. ಮೌಲ್ಯದ ಚಿನ್ನ ವಶಕ್ಕೆ!

‘ನನ್ನ ಜೀವನದ ಪ್ರೀತಿಗೆ ಜನ್ಮದಿನದ ಶುಭಾಶಯಗಳು. ಅತ್ಯಂತ ಪ್ರೀತಿಯ ಗೆಳೆಯ ಮತ್ತು ಸ್ನೇಹಿತನಾಗಿದ್ದಕ್ಕಾಗಿ ಧನ್ಯವಾದಗಳು. ನನ್ನ ಎಲ್ಲಾ ಹಂತಗಳು ಮತ್ತು ನನ್ನನ್ನು ಪ್ರೀತಿಸಿದ್ದಕ್ಕಾಗಿ’ ಎಂದು ಹೇಳಿದ್ದಾರೆ. ಕೆಲವು ಫೋಟೋಗಳನ್ನು ಶೇರ್​ ಮಾಡಿಕೊಂಡಿದ್ದಾರೆ.

ಈ ಪೋಸ್ಟ್ ಹಾಕುತ್ತಿದ್ದಂತೆ ಅಭಿಮಾನಿಗಳು ಜೆಕೆ ಮದುವೆಯಾಗುತ್ತಿದ್ದಾರೆ ಎಂದು ಕಾಮೆಂಟ್‌ ಮಾಡುತ್ತಾ ಶುಭಕೋರಿದ್ದಾರೆ.

ವೆಸ್ಟೆಂಡ್ ಹೋಟೆಲ್​​ನಲ್ಲಿ ಇದ್ಕೊಂಡು ಬೆಳಗ್ಗೆಯಿಂದ ರಾತ್ರಿ 1 ಗಂಟೆವರೆಗೂ ಕೆಲಸ ಮಾಡ್ತಿದ್ದೆ: ಎಚ್​ಡಿಕೆ

Latest Posts

ಲೈಫ್‌ಸ್ಟೈಲ್