ಕರುಣಾನಿಧಿ ಆರೋಗ್ಯ ಸ್ಥಿರವಾಗಿದೆ: ವೆಂಕಯ್ಯ ನಾಯ್ಡು

ಚೆನ್ನೈ: ಡಿಎಂಕೆ ವರಿಷ್ಠ ಹಾಗೂ ತಮಿಳುನಾಡಿನ ಮಾಜಿ ಮುಖ್ಯಮಂತ್ರಿ ಎಂ.ಕರುಣಾನಿಧಿ ಅವರ ಆರೋಗ್ಯ ಸ್ಥಿರವಾಗಿದೆ ಎಂದು ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು ತಿಳಿಸಿದ್ದಾರೆ.

ಕಾವೇರಿ ಆಸ್ಪತ್ರೆಗೆ ಭಾನುವಾರ ತೆರಳಿ ಕರುಣಾನಿಧಿ ಅವರ ಆರೋಗ್ಯ ವಿಚಾರಿಸಿ ಟ್ವೀಟ್​ ಮಾಡಿದ್ದಾರೆ.

ಟ್ವೀಟ್​ನಲ್ಲಿ, ವೈದ್ಯರ ತಂಡ ನಿರಂತರ ಮೇಲ್ವಿಚಾರಣೆ ನಡೆಸಿ ಅವರಿಗೆ ಚಿಕಿತ್ಸೆ ನೀಡುತ್ತಿದೆ. ಕರುಣಾನಿಧಿ ಅವರನ್ನು ಭೇಟಿ ಮಾಡಿ ಅವರ ಕುಟುಂಬಸ್ಥರು ಮತ್ತು ವೈದ್ಯರ ಬಳಿ ಅವರ ಆರೋಗ್ಯ ವಿಚಾರಿಸಿದ್ದೇನೆ. ವೈದ್ಯರು ಅವರ ಆರೋಗ್ಯ ಸ್ಥಿರವಾಗಿದೆ ಎಂದಿದ್ದಾರೆ. ಅವರು ಭೇಗ ಗುಣಮುಖರಾಗಲಿ’ ಎಂದು ತಿಳಿಸಿದ್ದಾರೆ

94 ವರ್ಷದ ಕರುಣಾನಿಧಿ ಅವರು ಮೂತ್ರನಾಳದ ಸೋಂಕು ತಗುಲಿ ಜ್ವರದಿಂದ ಬಳಲುತ್ತಿದ್ದರು. ನಂತರ ರಕ್ತದೊತ್ತಡ ಕಡಿಮೆಯಾಗಿ ಕಾವೇರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. (ಏಜೆನ್ಸೀಸ್​)