More

    ಬಿಡುಗಡೆಯಾಗುತ್ತಿದ್ದಂತೆ ಜೈಲ್‌ ಗೇಟ್‌ನಲ್ಲಿ ಮತ್ತೆ ಕರವೇ ನಾರಾಯಣಗೌಡ ಅರೆಸ್ಟ್‌

    ಬೆಂಗಳೂರು: ಕನ್ನಡ ನಾಮಫಲಕ ಹೋರಾಟ ಪ್ರಕರಣದಲ್ಲಿ  ಬಂಧನಕ್ಕೆ ಒಳಗಾಗಿದ್ದ ಕರ್ನಾಟಕ ರಕ್ಷಣಾ ವೇದಿಕೆ ಅಧ್ಯಕ್ಷ (ಕರವೇ) ನಾರಾಯಣ ಗೌಡಾಗೆ ಜಾಮೀನು‌ ಮಂಜೂರು ಆದ ಹಿನ್ನೆಲೆಯಲ್ಲಿ ಮಂಗಳವಾರ (ಜ.09) ಬಿಡುಗಡೆಯಾಗಿದ್ದಾರೆ. ನಾರಯಣಗೌಡ ಅವರು ಬಿಡುಗಡೆಯಾಗುತ್ತಿದ್ದಂತೆ ಕುಮಾರಸ್ವಾಮಿ ಲೇಔಟ್ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

    ಕಳೆದ ವರ್ಷ ಡಿಸೆಂಬರ್ 27 ರಂದು ಕನ್ನಡ ನಾಮಫಲಕ ಹೋರಾಟದ ವೇಳೆ ಪೊಲೀಸರ ಮೇಲೆ ಹಲ್ಲೆ, ಕರ್ತವ್ಯ ನಿರ್ವಹಣೆಗೆ ಅಡ್ಡಿ, ಸಾರ್ವಜನಿಕ ಆಸ್ತಿಗೆ ಹಾನಿ, ದೊಂಬಿ, ಅನುಮತಿ ಪಡೆಯದೆ ಪ್ರತಿಭಟನೆ ಮಾಡಿದ ಆರೋಪದಡಿ ಪೊಲೀಸರು ನಾರಾಯಣಗೌಡ ಹಾಗೂ ಕಾರ್ಯಕರ್ತರನ್ನು ಬಂಧಿಸಿದ್ದರು. ಈ ಪ್ರಕರಣದಲ್ಲಿ ಜೈಲಿನಿಂದ ಬಿಡುಗಡೆ ಯಾಗುತ್ತಿದ್ದಂತೆ ಮತ್ತೆ ಅರೆಸ್ಟ್​ ಮಅಡಲಾಗಿದೆ.

    ನಾರಾಯಣಗೌಡ ಅವರ ಜೊತೆ ಬಿಡುಗಡೆಯಾದ 28 ಮಂದಿ ಕರವೇ ಕಾರ್ಯಕರ್ತರನ್ನು ಬಿಎಂಟಿಸಿ ಬಸ್ ಮೂಲಕ ಮನೆಗಳಿಗೆ ಕಳುಹಿಸಲಾಗಿದೆ. ಯಾವುದೇ ಅಹಿತಕರ ಘಟನೆ ನಡೆಯದಂತೆ ಮುಂಜಾಗ್ರತಾ ಕ್ರಮ ಕೈಗೊಳ್ಳಲಾಗಿದೆ.

    ಪೊಲೀಸರು ಇದೀಗ ಮಾರ್ಥಾಸ್ ಆಸ್ಪತ್ರೆಯಲ್ಲಿ ನಾರಾಯಣಗೌಡ ಅವರನ್ನು ಆರೋಗ್ಯ ಪರೀಕ್ಷೆಗೆ ಒಳಪಡಿಸಲಿದ್ದಾರೆ. ಬಳಿಕ ನೃಪತುಂಗ ರಸ್ತೆಯ ಮ್ಯಾಜಿಸ್ಟ್ರೇಟ್ ಕೋರ್ಟ್​ಗೆ ಹಾಜರು ಪಡಿಸಲಿದ್ದಾರೆ. 2017ರ ಹಳೇ ಕೇಸ್ ಸಂಬಂಧ ಪೊಲೀಸರು ನಾರಾಯಣಗೌಡ ಅವರನ್ನು ವಶಕ್ಕೆ ಪಡೆದಿದ್ದಾರೆ.

    2017ರಲ್ಲಿ ಸಾರ್ವಜನಿಕ ಆಸ್ತಿಪಾಸ್ತಿಗಳಿಗೆ ಹಾನಿ ಮಾಡಿದ ಹಿನ್ನೆಲೆಯಲ್ಲಿ ಕುಮಾರಸ್ವಾಮಿ‌ ಲೇಔಟ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಪ್ರಕರಣ ಸಂಬಂಧ ಜಾಮೀನು ರಹಿತ ವಾರೆಂಟ್ ಜಾರಿಯಾಗಿತ್ತು. ಆ ಹಿನ್ನೆಲೆಯಲ್ಲಿ ಕುಮಾರಸ್ವಾಮಿ‌ ಲೇಔಟ್ ಪೊಲೀಸ್ ಠಾಣೆ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಕೊರೊನಾ ಸಮಯದಲ್ಲಿ ರಾಷ್ಟ್ರೀಯ ವಿಪ್ಪತ್ತು ನಿರ್ವಹಣ ಕಾಯ್ದೆಯಡಿ ಹಲಸೂರ್ ಗೇಟ್ ಪೊಲೀಸ್ ಠಾಣೆಯಲ್ಲಿ ಒಂದು ಪ್ರಕರಣ ದಾಖಲಾಗಿತ್ತು. ಪ್ರಕರಣಕ್ಕೆ ವಿಚಾರಣಗೆ ನ್ಯಾಯಾಲಯಕ್ಕೆ ಹಾಜರಾಗದ ಹಿನ್ನೆಲೆ ವಾರಂಟ್ ಜಾರಿಯಾಗಿತ್ತು. ಹೀಗಾಗಿ ಹಲಸೂರ್ ಗೇಟ್ ಠಾಣೆ ಪೊಲೀಸರು ನಾರಾಯಣಗೌಡ ಅವರನ್ನು ವಶಕ್ಕೆ ಪಡೆಯಲು ಮುಂದಾಗಿದ್ದಾರೆ.

    ರಾಕಿಂಗ್ ಸ್ಟಾರ್​​ ಬರ್ತಡೇ; ಯಶ್ ನೋಡಲು ಬರುತ್ತಿದ್ದ ಮತ್ತೊಬ್ಬ ಅಭಿಮಾನಿ ಸಾವು

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts