More

    ಕಾರವಾರ, ಅಂಕೋಲಾಕ್ಕೆ ಇನ್ನು ಮೂರು ದಿನಕ್ಕೊಮ್ಮೆ ನೀರು

    ಕಾರವಾರ: ಗಂಗಾವಳಿ ನದಿಯಲ್ಲಿ ನೀರಿನ ಹರಿವು ತೀವ್ರ ಇಳಿಕೆಯಾಗಿದ್ದು, ಅದೇ ನದಿಯಿಂದ ನೀರು ಪಡೆಯುವ ಅಂಕೋಲಾ ಮತ್ತು ಕಾರವಾರ ಶಹರಕ್ಕೆ ಏಪ್ರಿಲ್ 8 ರಿಂದ 3 ದಿನಗಳಿಗೊಮ್ಮೆ ನೀರು ಸರಬರಾಜು ಮಾಡಲಾಗುವುದು ಎಂದು ಜಿಲ್ಲಾಧಿಕಾರಿ ಗಂಗೂಬಾಯಿ ಮಾನಕರ್ ತಿಳಿಸಿದರು.
    ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಬರ ನಿರ್ವಹಣೆ ಕುರಿತ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಏಪ್ರಿಲ್ 8 ರಂದು ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಮಳೆಯಾದರೆ ಸಮಸ್ಯೆ ಕೊಂಚ ಬಗೆಹರಿಯಲಿದೆ ಎಂದರು.
    6 ಕೋಟಿ ರೂ.ಗಳನ್ನು ತಹಸೀಲ್ದಾರ್‌ಗಳ ಪಿಡಿ ಖಾತೆಗಳಿಗೆ ಜಮಾ ಮಾಡಲಾಗಿದೆ. ಟ್ಯಾಂಕರ್ ಮೂಲಕ ಕುಡಿಯುವ ನೀರು ಪೂರೈಸುವ ಸಂಬಂಧ ಟೆಂಡರ್ ಕರೆಯಲು ಚುನಾವಣಾ ಆಯೋಗ ವಿನಾಯಿತಿ ನೀಡಿದೆ. ಟ್ಯಾಂಕರ್ ಮೂಲಕ ನೀರು ಪೂರೈಕೆಗೆ ಎಲ್ಲ ಸಿದ್ದತೆ ಮಾಡಿಕೊಳ್ಳಿ ಎಂದು ಸೂಚಿಸಿದರು. ನೀರು ಸರಬರಾಜು ಮಾಡುವ ಎಲ್ಲ ವಾಹನಗಳಿಗೆ ಕಡ್ಡಾಯವಾಗಿ ಜಿಪಿಎಸ್ ಅಳವಡಿಸಿ ಎಂದರು. ಪ್ರತಿ ವಾಹನಗಳ ಟ್ರಿಪ್ ಶೀಟ್ ವಿವರ ದಾಖಲಿಸಿ ಎಂದು ತಹಸೀಲ್ದಾರ್, ತಾಪಂ ಇಒಗಳಿಗೆ ಸೂಚಿಸಿದರು. ಜಿಲ್ಲೆಯಾದ್ಯಂತ ಒಟ್ಟು 1446 ಗೋಕಟ್ಟೆಗಳಿದ್ದು, ಈ ಎಲ್ಲ ಗೋಕಟ್ಟೆಗಳಲ್ಲಿ ಜಾನುವಾರುಗಳಿಗೆ ಅಗತ್ಯ ಪ್ರಮಾಣದ ಕುಡಿಯುವ ನೀರಿನ ವ್ಯವಸ್ಥೆ ಮಾಡುವಂತೆ ತಿಳಿಸಿದರು. ಅಪರ ಜಿಲ್ಲಾಽಕಾರಿ ಪ್ರಕಾಶ್ ರಜಪೂತ್, ಉಪ ವಿಭಾಗಾಧಿಕಾರಿ ಕನಿಷ್ಕ ಇದ್ದರು.

    ಇದನ್ನೂ ಓದಿ: ಲೋಕಸಭೆ ಚುನಾವಣೆ: ಕಾಗೇರಿಗೆ ಹತ್ತಾರು ಸವಾಲು

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts