More

    ತಮಿಳುನಾಡು ಮಾದರಿಯಲ್ಲಿ ರಾಜ್ಯದಲ್ಲೂ ಕನ್ನಡ ಭಾಷೆ ಕಡ್ಡಾಯಗೊಳಿಸುವಂತೆ ಕಸಾಪ ಆಗ್ರಹ

    ಬೆಂಗಳೂರು: ತಮಿಳುನಾಡು ಮಾದರಿಯಲ್ಲಿ ರಾಜ್ಯದಲ್ಲೂ ಕನ್ನಡ ಭಾಷೆಯನ್ನು ಕಡ್ಡಾಯ ಮಾಡಬೇಕು ಎಂದು ಸರ್ಕಾರಕ್ಕೆ ಕನ್ನಡ ಸಾಹಿತ್ಯ ಪರಿಷತ್ತು ಆಗ್ರಹಿಸಿದೆ. ಭಾಷೆಯ ಬಗೆಗಿನ ಗಂಭೀರತೆಯನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಅರಿತು, ಕನ್ನಡಿಗರ ಬಹುನಿರೀಕ್ಷಿತ ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ ಮಸೂದೆ-2022ಅನ್ನು ಸುಗ್ರೀವಾಜ್ಞೆಯ ಮೂಲಕ ಜಾರಿಗೊಳಿಸಬೇಕು ಎಂದು ಪರಿಷತ್ತಿನ ಅಧ್ಯಕ್ಷ ನಾಡೋಜ ಡಾ. ಮಹೇಶ ಜೋಶಿ ಒತ್ತಾಯಿಸಿದ್ದಾರೆ.

    2016ರ ತಮಿಳುನಾಡು ರಾಜ್ಯ ಸಾರ್ವಜನಿಕ ಸೇವಾ ಕಾಯ್ದೆಗೆ ತಿದ್ದುಪಡಿ ತರುವ ಪ್ರಸ್ತಾವಕ್ಕೆ ತಮಿಳುನಾಡು ವಿಧಾನಸಭೆ ಧ್ವನಿ ಮತದ ಮೂಲಕ ಅನುಮೋದಿಸಿದೆ. ತಮಿಳುನಾಡು ರಾಜ್ಯ ಸರ್ಕಾರಿ ಸೇವೆಗಳ ನೇಮಕಾತಿಗೆ ತಮಿಳು ಭಾಷಾ ಪತ್ರಿಕೆಯಲ್ಲಿ ತೇರ್ಗಡೆ ಆಗುವುದನ್ನು ಕಡ್ಡಾಯಗೊಳಿಸಲಾಗಿದೆ. ಇದರಿಂದಾಗಿ ತಮಿಳು ಭಾಷೆಯ ಅಗತ್ಯ ಜ್ಞಾನವಿದ್ದರೂ, ಅಂತಹ ವ್ಯಕ್ತಿ ನೇರ ನೇಮಕಾತಿ ಮೂಲಕ ಯಾವುದೇ ಸೇವೆಗೆ ಅರ್ಹನಾಗಿರುವುದಿಲ್ಲ. ಬದಲಿಗೆ ತಮಿಳು ಭಾಷೆಯಲ್ಲಿ ಉತ್ತೀರ್ಣರಾದರೆ ಮಾತ್ರ ಸರ್ಕಾರಿ ಸೇವೆಗೆ ಅವಕಾಶ. ರಾಜ್ಯದಲ್ಲಿಯೂ ಈ ರೀತಿ ಕಾನೂನು ಜಾರಿಗೊಳಿಸಬೇಕು ಎಂದು ಆಗ್ರಹಿಸಿದ್ದಾರೆ.

    ಕನ್ನಡ ಮಸೂದೆಯನ್ನು ಜಾರಿಗೆ ತರಬೇಕೆಂದು ಕಳೆದ ಒಂದು ವರ್ಷದಿಂದ ಒತ್ತಾಯ ಮಾಡಲಾಗುತ್ತಿದೆ. ಕಳೆದ ಎರಡು ಅಧಿವೇಶನಗಳಲ್ಲಿ ಈ ಮಸೂದೆಯನ್ನು ಚರ್ಚೆಗೆ ತೆಗೆದುಕೊಳ್ಳದೆ ಇರುವುದು ಬೇಸರದ ಸಂಗತಿ. ಈಗಲಾದರೂ ಸುಗ್ರೀವಾಜ್ಞೆ ಮೂಲಕ ಕಾನೂನು ಜಾರಿಗೊಳಿಸಬೇಕು ಎಂದು ತಿಳಿಸಿದ್ದಾರೆ.

    ‘ಸತ್ತು ಹೋದವ’ ಸತ್ತ ಮರುದಿನವೇ ತಾನು ಮೃತಪಟ್ಟಿದ್ದ ಆ ಸ್ಥಳದಲ್ಲೇ ಮತ್ತೆ ಕಾಣಿಸಿಕೊಂಡಿದ್ದ!; ಆಗಿದ್ದಾದರೂ ಏನು, ಏಕೆ?

    ಶಾಲೆಯಲ್ಲಿ ಹೃದಯಾಘಾತಕ್ಕೊಳಗಾಗಿ ಸಾವಿಗೀಡಾದ್ಲು 8ನೇ ತರಗತಿ ವಿದ್ಯಾರ್ಥಿನಿ

    ಕೆಯುಡಬ್ಲ್ಯುಜೆ ಪ್ರಶಸ್ತಿ ಪ್ರಕಟ; ವಿಜಯವಾಣಿ-ದಿಗ್ವಿಜಯ ಬಳಗದ 7 ಮಂದಿಗೆ ಪುರಸ್ಕಾರ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts