More

    ಮಕ್ಕಳಲ್ಲಿ ಸಾಹಿತ್ಯಾಭಿರುಚಿ ಬೆಳೆಸಿ

    ಚಿಕ್ಕಮಗಳೂರು: ಮಕ್ಕಳು ಪಠ್ಯದ ಜತೆಗೆ ಸಾಹಿತ್ಯಾಭಿರುಚಿ ಹಾಗೂ ಉತ್ತಮ ಜೀವನಶೈಲಿ ರೂಢಿಸಿಕೊಂಡಲ್ಲಿ ಆರೋಗ್ಯವಂತರಾಗಿ ಬದುಕಬಹುದು ಎಂದು ಕಸಾಪ ಜಿಲ್ಲಾಧ್ಯಕ್ಷ ಸೂರಿ ಶ್ರೀನಿವಾಸ್ ಹೇಳಿದರು.
    ನಗರದ ಹಿರೇಮಗಳೂರು ಗ್ರಾಮದ ಶ್ರೀದೇವಿ ಭವನದಲ್ಲಿ ಮಂಗಳವಾರ ಕನ್ನಡ ಸಾಹಿತ್ಯ ಪರಿಷತ್ ತಾಲೂಕು ಘಟಕದಿಂದ ಆಯೋಜಿಸಿದ್ದ ಆರೋಗ್ಯ ತಪಾಸಣಾ ಶಿಬಿರ, ಮಹಿಳಾ ದಿನಾಚರಣೆ ಹಾಗೂ ದತ್ತಿ ಉಪನ್ಯಾಸ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಮಕ್ಕಳಲ್ಲಿ ಸಾಹಿತ್ಯ ಕಲಿಕೆಯ ಆಸಕ್ತಿ ಮರೆಯಾಗುತ್ತಿರುವುದು ಆತಂಕದ ವಿಷಯ. ಮಕ್ಕಳಲ್ಲಿ ನಾಡು, ನುಡಿ ಹಾಗೂ ಸಂಸ್ಕೃತಿಯ ಅರಿವು ಮೂಡಿಸಬೇಕು. ಪ್ರತಿನಿತ್ಯ ವ್ಯಾಯಾಮ, ನಡಿಗೆ ಹಾಗೂ ಕ್ರೀಡಾಚಟುವಟಿಕೆಗಳಲ್ಲಿ ಪಾಲ್ಗೊಂಡರೆ ಸದೃಢ ಶರೀರ ಹೊಂದಲು ಪೂರಕ ಎಂದು ತಿಳಿಸಿದರು.
    ತಾಲೂಕು ಆರೋಗ್ಯಾಧಿಕಾರಿ ಡಾ. ಸೀಮಾ ಮಾತನಾಡಿ, ಇಂದಿನ ಆಹಾರ ಪದ್ಧತಿ, ವ್ಯಾಯಾಮ ರಹಿತ ಹಾಗೂ ಒತ್ತಡದಿಂದ ಆರೋಗ್ಯ ಹೆದಗೆಡುತ್ತಿದೆ. ಉತ್ತಮ ಆಹಾರಪದ್ಧತಿ ಅಳವಡಿಸಿಕೊಳ್ಳಬೇಕು ಎಂದು ಸಲಹೆ ಮಾಡಿದರು.
    ಕಸಾಪ ತಾಲೂಕು ಅಧ್ಯಕ್ಷ ಬಿಸಲೇನಹಳ್ಳಿ ಸೋಮಶೇಖರ್ ಮಾತನಾಡಿ, ಮಕ್ಕಳಲ್ಲಿ ಸಾಹಿತ್ಯದ ಜ್ಞಾನವನ್ನು ವೃದ್ಧಿಸುವ ಸಲುವಾಗಿ ಶಾಲಾ-ಕಾಲೇಜುಗಳಲ್ಲಿ ಕಾರ್ಯಕ್ರಮ ನಡೆಸಲಾಗುತ್ತಿದೆ ಎಂದರು. ಕಸಾಪ ಮಹಿಳಾ ಘಟಕದ ತಾಲೂಕು ಅಧ್ಯಕ್ಷೆ ಎಚ್.ಕೆ.ವಿಜಯಲಕ್ಷ್ಮೀ ವಿಶ್ವನಾಥ್, ಕಸಾಪ ಗೌರವ ಕಾರ್ಯದರ್ಶಿ ಬಿ.ಜಿ.ಪವನ್, ಎಸ್.ಎಸ್.ವೆಂಕಟೇಶ್, ಹೋಬಳಿ ಅಧ್ಯಕ್ಷೆ ವೀಣಾ ಮಲ್ಲಿಕಾರ್ಜುನ್, ಪ್ರಧಾನ ಕಾರ್ಯದರ್ಶಿ ರೂಪಾ ನಾಯಕ್, ನಗರ ಘಟಕದ ಅಧ್ಯಕ್ಷ ಸಚಿನ್ ಸಿಂಗ್, ಮುಖಂಡರಾದ ವೀಣಾ ಅರವಿಂದ್, ಎಚ್.ಆರ್.ಕಾಂತರಾಜು ಇತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts