More

    ಕಸಾಪ ಸಂಸ್ಥಾಪನಾ ದಿನಾಚರಣೆ

    ಪಾಂಡವಪುರ : ನಾಡು, ನುಡಿಗೆ ಕನ್ನಡ ಸಾಹಿತ್ಯ ಪರಿಷತ್ ಕೊಡುಗೆ ಅನನ್ಯ ಎಂದು ಕಸಾಪ ತಾಲೂಕು ಮಾಜಿ ಅಧ್ಯಕ್ಷ ಎಚ್.ಆರ್.ಧನ್ಯಕುಮಾರ್ ಹೇಳಿದರು. ಪಟ್ಟಣದ ಕಸಾಪ ಭವನದಲ್ಲಿ ಭಾನುವಾರ ಆಯೋಜಿಸಿದ್ದ 110ನೇ ಸಂಸ್ಥಾಪನಾ ದಿನಾಚರಣೆಯಲ್ಲಿ ಅವರು ಮಾತನಾಡಿದರು. ಕಸಾಪ ಕರ್ನಾಟಕ ಸೇರಿದಂತೆ ದೇಶ, ವಿದೇಶಗಳಲ್ಲಿ ಕನ್ನಡವನ್ನು ಬೆಳೆಸುವ ಕೆಲಸ ಮಾಡುತ್ತಿದೆ. ಅನೇಕ ಸಂಘ ಸಂಸ್ಥೆಗಳು ಕನ್ನಡ ಪರವಾಗಿ ಹೋರಾಟ ಮಾಡುತ್ತಿದ್ದರೂ, ಕಸಾಪ
    ಕೊಡುಗೆ ವಿಭಿನ್ನವಾಗಿದೆ. ನಾಲ್ವಡಿ ಕೃಷ್ಣರಾಜ ಒಡೆಯರ್ 1915ರಲ್ಲಿ ಸ್ಥಾಪಿಸಿದ ಕನ್ನಡಿಗರ ಪ್ರಾತಿನಿಧಿಕ ಸಂಸ್ಥೆ. ದೊಡ್ಡ ಕ್ರಾಂತಿಯನ್ನೇ ಮಾಡಿದೆ ಎಂದರು. ನಾಡಿನ ನೆಲ, ಜಲ, ಕಲೆ, ಸಾಹಿತ್ಯ, ಸಂಸ್ಕೃತಿ ಹಾಗೂ ಭಾಷೆ ಉಳಿಸಿ, ಬೆಳೆಸಿ, ಪಸರಿಸುವ ಜವಬ್ದಾರಿಯನ್ನು ಪರಿಷತ್ತು ಸಮರ್ಥವಾಗಿ ನಿರ್ವಹಿಸುತ್ತಿರುವುದು ಸಾಧನೆಯೇ ಸರಿ. ಹೋಬಳಿ, ತಾಲೂಕು, ಜಿಲ್ಲಾ ಮತ್ತು ಅಖಿಲ ಭಾರತ ಮಟ್ಟದ ಸಾಹಿತ್ಯ ಸಮ್ಮೇಳನಗಳನ್ನು ಆಯೋಜನೆ ಮಾಡಿ ಕನ್ನಡ ಸಾಹಿತಿಗಳಿಗೆ ಮತ್ತು ಕವಿಗಳಿಗೆ ಪ್ರೋತ್ಸಾಹ ನೀಡುತ್ತಿರುವುದು ವಿಶೇಷವಾಗಿದೆ. ಕನ್ನಡ ಪುಸ್ತಕಗಳ ಪ್ರಕಟಣೆ, ಕನ್ನಡ ಶಾಲೆಗಳ ಬೆಳವಣಿಗೆಗೆ ಹೋರಾಟ ಮುಂತಾದ ಹತ್ತು ಹಲವು ಕಾರ್ಯಕ್ರಮಗಳನ್ನು ಕಸಾಪ ನಿರಂತರವಾಗಿ ನಡೆಸಿಕೊಂಡು ಬಂದಿದೆ ಎಂದು ಧನ್ಯಕುಮಾರ್ ಮೆಚ್ಚುಗೆ ವ್ಯಕ್ತಪಡಿಸಿದರು.
    ಕಸಾಪ ತಾಲೂಕು ಅಧ್ಯಕ್ಷ ಮೇನಾಗರ ಪ್ರಕಾಶ್ ಮಾತನಾಡಿ, ಸಂಸ್ಥೆ ತನ್ನ ಗುರಿ, ಉದ್ದೇಶಗಳನ್ನು ಸಾಧಿಸುವ ನಿಟ್ಟಿನಲ್ಲಿ ಕಾರ್ಯ ಪ್ರವೃತವಾಗಿದೆ. ನವೆಂಬರ್‌ನಲ್ಲಿ ನಡೆಯುವ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಯಶಸ್ಸಿಗೆ ಎಲ್ಲರೂ ಸಕ್ರಿಯವಾಗಿ ಶ್ರಮಿಸೋಣ ಎಂದರು. ತಾಲೂಕು ಕಸಾಪ ಮಾಜಿ ಅಧ್ಯಕ್ಷ ಚೆಲುವೇಗೌಡ, ಉಪಾಧ್ಯಕ್ಷ ಶಿವರಾಜು, ಪುಟ್ಟೇಗೌಡ, ಶಿಕ್ಷಕ ನಾಗೇಂದ್ರ, ವೆಂಕಟೇಶ್, ಚಿಕ್ಕಾಡೆ ಶ್ರೀನಿವಾಸ, ಜಯರಾಮು, ಕರುಣಾಕರ, ಸ್ವಾಮಿಗೌಡ, ಕೃಷ್ಣೇಗೌಡ, ಸುನೀಲ್, ಲೋಕೇಶ್, ಮಹೇಶ್ ಇತರರು ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts