ಬೆಂಗಳೂರು: ಕನ್ನಡ ಜಲ ಸಂರಕ್ಷಣಾ ಸಮಿತಿ ನೀಡಿರುವ ಬೆಂಗಳೂರು ಬಂದ್ ಕರೆಗೆ ಕನ್ನಡ ಸಾಹಿತ್ಯ ಪರಿಷತ್ತು ಬೆಂಬಲ ವ್ಯಕ್ತಪಡಿಸಿದೆ.
ಕನ್ನಡ ಸಾಹಿತ್ಯ ಪರಿಷತ್ತು ನಾಡು-ನುಡಿ-ಜಲ-ನೆಲದ ಪ್ರಶ್ನೆ ಬಂದಾಗ ಸದಾ ಕನ್ನಡಿಗರ ಪರವಾಗಿ ನಿಲ್ಲಲಿದೆ. ಈ ಬಂದ್ ಶಾಂತಿಯುತವಾಗಿ ನಡೆದು ಕಾವೇರಿ ಜಲ ವಿವಾದ ತಾರ್ಕಿಕ ಅಂತ್ಯ ಕಾಣುವಂತಾಗಲಿ ಎಂದು ಪರಿಷತ್ತು ಅಧ್ಯಕ್ಷ ನಾಡೋಜ ಡಾ. ಮಹೇಶ ಜೋಶಿ ಆಶಯ ವ್ಯಕ್ತಪಡಿಸಿದ್ದಾರೆ.
ಬಂದ್ ವೇಳೆ ಸಾರ್ವಜನಿಕರ ಆಸ್ತಿ ಪಾಸ್ತಿಗಳಿಗೆ ನಷ್ಟವಾಗದ ರೀತಿಯಲ್ಲಿ ಅಗತ್ಯ ಕ್ರಮ ಕೈಗೊಳ್ಳಬೇಕು. ಆರೋಗ್ಯ ಸೇವೆಯಲ್ಲಿ ಯಾವುದೇ ಸಮಸ್ಯೆ ಆಗದಂತೆ ಸೌಲಭ್ಯ ಒದಗಿಸಬೇಕು ಎಂದು ಸರ್ಕಾರಕ್ಕೆ ಮನವಿ ಮಾಡಿದ್ದಾರೆ.