ಕಾಸರಗೋಡು ಮೀನುಗಾರಿಕಾ ಬಂದರು ಕಾಮಗಾರಿಗೆ ಚಾಲನೆ

bandaru
Published on

ವಿಜಯವಾಣಿ ಸುದ್ದಿಜಾಲ ಕಾಸರಗೋಡು

ಕಾಸರಗೋಡು ಮೀನುಗಾರಿಕಾ ಬಂದರು ನಿರ್ಮಾಣ ಕಾಮಗಾರಿಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಆನ್‌ಲೈನ್ ಮೂಲಕ ಚಾಲನೆ ನೀಡಿದರು. ರಾಜ್ಯ ಮೀನುಗಾರಿಕೆ, ಸಂಸ್ಕೃತಿ ಮತ್ತು ಯುವಜನ ಖಾತೆ ಸಚಿವ ಸಜಿ ಚೆರಿಯನ್ ಅಧ್ಯಕ್ಷತೆ ವಹಿಸಿದ್ದರು.

ಕೇಂದ್ರ ಮೀನುಗಾರಿಕೆ, ಪಶುಸಂಗೋಪನೆ ಮತ್ತು ಹೈನುಗಾರಿಕೆ ಸಚಿವ ರಾಜೀವ್ ರಂಜನ್ ಸಿಂಗ್ ಮುಖ್ಯ ಭಾಷಣ ಮಾಡಿದರು. ಕೇಂದ್ರ ಮೀನುಗಾರಿಕೆ, ಪಶುಸಂಗೋಪನೆ ಮತ್ತು ಹೈನುಗಾರಿಕೆ ಖಾತೆ ರಾಜ್ಯ ಸಚಿವ ಜಾರ್ಜ್ ಕುರಿಯನ್, ಕಾಸರಗೋಡು ಶಾಸಕ ಎನ್.ಎ ನೆಲ್ಲಿಕುನ್ನು, ಜಿಲ್ಲಾಧಿಕಾರಿ ಕೆ.ಇನ್ಬಾಶೇಖರ್, ಕಾಸರಗೋಡು ನಗರಸಭಾ ಅಧ್ಯಕ್ಷ ಅಬ್ಬಾಸ್ ಬೀಗಂ, ನಗರಸಭೆ ಸ್ಥಾಯಿ ಸಮಿತಿ ಅಧ್ಯಕ್ಷರಾದ ಸಾಹಿರ್ ಆಸಿಫ್, ಖಾಲಿದ್ ಪಚ್ಚಕ್ಕಾಡ್, ರಜಿನಿ ಪ್ರಭಾಕರನ್ ಹಾಗೂ ನಗರಸಭಾ ಸದಸ್ಯರಾದ ಅಜಿತ್ ಕುಮಾರ್, ಎಂ.ಉಮಾ. , ವಿವಿಧ ರಾಜಕೀಯ ಪಕ್ಷದ ಪ್ರತಿನಿಧಿಗಳಾದ ಆರ್.ಗಂಗಾಧರನ್, ಅಂಜು ಜೋಶ್, ಎ.ಅಬ್ದುಲ್ ರಹಮಾನ್, ಅಜೀಜ್ ಕಡಪುರಂ, ಕುರಿಯಾಕೋಸ್ ಪ್ಲಾಪರಂಬಿಲ್, ಮೀನುಗಾರಿಕಾ ನಿರ್ದೇಶಕ ಕೆ.ಎ.ಲಬೀಬ್ ಉಪಸ್ಥಿತಿರಿದ್ದರು. ಕಾಸರಗೋಡು ಹಾರ್ಬರ್ ಇಂಜಿನಿಯರಿಂಗ್ ವಿಭಾಗದ ಕಾರ್ಯಪಾಲಕ ಅಭಿಯಂತರ ಸುನೀಲ್ ಸ್ಯಾಮ್ಯುಯೆಲ್ ವಂದಿಸಿದರು. ಶಾಸಕ ಎನ್.ಎ ನೆಲ್ಲಿಕುನ್ನು ನಿರ್ಮಾಣ ಕಾಮಗಾರಿ ಶಿಲಾಫಲಕವನ್ನು ಅನಾವರಣಗೊಳಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net