ಅನಂತ್- ರಾಧಿಕಾ ಮದುವೆ ಮಂಟಪದಲ್ಲಿ ಕಾಶಿ ಬನಾರಸ್ ಘಾಟ್​ಗಳ ಮರುಸೃಷ್ಟಿ

Anant Kashi Ghat

ಮುಂಬೈ: ಮುಕೇಶ್​ ಅಂಬಾನಿ-ನೀತಾ ಅಂಬಾನಿ ಅವರ ಕಿರಿಯ ಪುತ್ರ ಅನಂತ್​ ಅಂಬಾನಿ ಹಾಗೂ ರಾಧಿಕಾ ಮರ್ಚೆಂಟ್​ ವಿವಾಹ ಸಮಾರಂಭವು ಜುಲೈ 12ರಂದು ಮುಂಬೈನ ಜಿಯೋ ವರ್ಲ್ಡ್​​ ಕನ್ವೆಂಷನ್​ ಸೆಂಟರ್​ನಲ್ಲಿ ನಡೆಯಲಿದ್ದು, ವಿವಾಹ ಮಹೋತ್ಸವು ಒಂದಿಲ್ಲೊಂದು ಕಾರಣಕ್ಕೆ ಸದ್ದು ಮಾಡುತ್ತಿದೆ. ಇದೀಗ ಮತ್ತೊಂದು ವಿಚಾರಕ್ಕೆ ಸದ್ದು ಮಾಡಿರುವ ಕಾರ್ಯಕ್ರಮವು ಇಡೀ ವಿಶ್ವದ ಗಮನ ಸೆಳೆದಿದೆ.

ಅನಂತ್-ರಾಧಿಕಾ ಮದುವೆಯನ್ನು ಇಂಡಿಯನ್​ ಥೀಮ್​ನಲ್ಲಿ ನಡೆಸಲು ಉದ್ದೇಶಿಸಲಾಗಿದ್ದು, ಅತಿಥಿಗಳಿಗೆ ಭಾರತೀಯ ಸಂಸ್ಕೃತಿಯನ್ನು ಪರಿಚಯಿಸುವುದಕ್ಕಾಗಿ ಇಡೀ ವೇದಿಕೆಯನ್ನು ಭಾರತೀಯ ಬಣ್ಣಗಳಲ್ಲಿ ಚಿತ್ರಿಸಲಾಗಿದೆ. ಡ್ರೆಸ್​ ಕೋಡ್​​, ಸಂಗೀತ, ಆಹಾರ ಸೇರಿದಂತೆ ಎಲ್ಲವೂ ಸಂಪೂರ್ಣವಾಗಿ ಭಾರತೀಯ ಮೌಲ್ಯಗಳಿಂದ ಕೂಡಿರಲಿವೆ. ಇದೀಗ ಮದುವೆ ಸಮಾರಂಭದಲ್ಲಿ ಕಾಶಿ ಹಾಗೂ ಬನಾರಸ್​ ಘಾಟ್​ಗಳನ್ನು ಮರುಸೃಷ್ಟಿಸಲಾಗಿದೆ.

ಮದುವೆ ಸಮಾರಂಭದ ಸ್ಥಳದಲ್ಲಿ ಕಾಶಿ ಬನಾರಸ್‌ ಘಾಟ್‌ಗಳನ್ನು ನಿಖರವಾಗಿ ಮರುಸೃಷ್ಟಿಸಲಾಗಿದೆ. ಈ ಘಾಟ್‌ಗಳಲ್ಲಿ ಅತಿಥಿಗಳು ನಗರದ ಚಾಟ್, ಕಚೋರಿ ಮತ್ತು ಪಾನ್​ಅನ್ನು ಆನಂದಿಸಲು ಸಾಧ್ಯವಾಗುತ್ತದೆ. ಬಾಬಾ ವಿಶ್ವನಾಥ ದೇವಸ್ಥಾನದ ಪ್ರತಿಕೃತಿ ಮತ್ತು ಬನಾರಸ್‌ನ ಶ್ರೀಮಂತ ಮತ್ತು ಪುರಾತನ ಸಂಪ್ರದಾಯಗಳ ಮಧ್ಯೆ ಈ ವಿವಾಹದ ವಿಧಿವಿಧಾನಗಳು ನೆರವೇರಲಿವೆ. ರುಚಿಯ ಜೊತೆಗೆ ಸಂಗೀತದ ಜುಗಲ್ಬಂಧಿಯೂ ಇರುತ್ತದೆ. ಕಾಶಿಯ ಸ್ಥಳೀಯ ಕಲಾವಿದರು ಮತ್ತು ಸಂಗೀತಗಾರರು ಅತಿಥಿಗಳಿಗೆ ಸಂಗೀತದ ರಸದೌತಣವನ್ನು ಉಣಬಡಿಸಲಿದ್ದಾರೆ. ಅನಂತ್ ಅವರ ತಾಯಿ ನೀತಾ ಅಂಬಾನಿ ಬನಾರಸ್ ಮತ್ತು ಬನಾರಸಿ ನೇಕಾರರೊಂದಿಗೆ ಹಳೆಯ ಪರಿಚಯ ಹಾಗೂ ಬಾಂಧವ್ಯವನ್ನು ಹೊಂದಿದ್ದಾರೆ. ಇತ್ತೀಚೆಗಷ್ಟೇ ನೀತಾ ಅಂಬಾನಿ ಕಾಶಿ-ವಿಶ್ವನಾಥ ದೇವರ ಪಾದದಡಿಯಲ್ಲಿ ಮದುವೆಯ ಆಮಂತ್ರಣವನ್ನು ಇಟ್ಟು, ಆಹ್ವಾನವನ್ನು ನೀಡಿದ್ದರು.

ಇದನ್ನೂ ಓದಿ: ಇವರ ಧ್ವನಿ ಎಂದಿಗೂ ಜೀವಂತ, ಕಣ್ಣು ಮುಚ್ಚಿ ಅವರ ಸ್ಪಷ್ಟ ಕನ್ನಡದ ಸವಿ ಸವಿಯಿರಿ; ಅಪಟ್ಟ ಕನ್ನಡತಿಗೆ ಸಂತಾಪ ಸೂಚಿಸಿದ BMRCL

ಅನಂತ್-ರಾಧಿಕಾ ವಿವಾಹದಲ್ಲಿ ಹಿಂದೂಸ್ತಾನಿ ಸಂಗೀತದ ಅತಿರಥ- ಮಹಾರಥರು ಭಾರತದ ಶ್ರೀಮಂತ ಸಂಗೀತ ಸಂಪ್ರದಾಯಗಳನ್ನು ಜಗತ್ತಿಗೆ ಪರಿಚಯಿಸಲಿದ್ದಾರೆ. ಸಿತಾರ್, ಷಹನಾಯಿ, ಸರೋದ್, ರಾಜಸ್ಥಾನಿ ಜನಪದ ಸಂಗೀತ, ಹಿಂದೂಸ್ತಾನಿ ಶಾಸ್ತ್ರೀಯ ಸಂಗೀತ ಮತ್ತು ಗಜಲ್ ಅನ್ನು ಸಹ ಅತಿಥಿಗಳು ಆನಂದಿಸುತ್ತಾರೆ. ಈ ಕೂಟದಲ್ಲಿ “ಭಜನ್ ನಿಂದ ಬಾಲಿವುಡ್”ವರೆಗಿನ ಸಂಗೀತವು ಆವರಿಸಿರುತ್ತದೆ. ಭಾರತದ ಖ್ಯಾತ ಸಂಗೀತ ಸಂಯೋಜಕರು ಮತ್ತು ಗಾಯಕರಾದ ಶಂಕರ್ ಮಹಾದೇವನ್, ಹರಿಹರನ್, ಸೋನು ನಿಗಮ್, ಶ್ರೇಯಾ ಘೋಷಾಲ್ ಮತ್ತು ಕೌಶಿಕಿ ಚಕ್ರವರ್ತಿ, ಅಮಿತ್ ತ್ರಿವೇದಿ, ನೀತಿ ಮೋಹನ್ ಮತ್ತು ಪ್ರೀತಮ್ ಕಾರ್ಯಕ್ರಮ ನೀಡಲಿದ್ದಾರೆ. ಜನಪದ ಗಾಯಕರಾದ ಮಾಮೆ ಖಾನ್ ಮತ್ತು ಗಜಲ್ ಕಲಾವಿದೆ ಕವಿತಾ ಸೇಠ್ ಕೂಡ ತಮ್ಮ ಗಾಯನದಿಂದ ಪ್ರೇಕ್ಷಕರನ್ನು ಪುಳಕಗೊಳಿಸಲಿದ್ದಾರೆ. ಅನಿಲ್ ಭಟ್, ಸುಮೀತ್ ಭಟ್ ಮತ್ತು ವಿವೇಕ್ ಭಟ್ ಸಂಗೀತಕ್ಕೆ ಪಂಜಾಬಿಯ ಸಂಭ್ರಮವನ್ನು ಸಹ ಸೇರಿಸುತ್ತಾರೆ.

ಅಂಬಾನಿ ಕುಟುಂಬಕ್ಕೆ ಹಿಂದೂ ಪದ್ಧತಿ ಮತ್ತು ಸನಾತನ ಧರ್ಮದಲ್ಲಿ ಅಪಾರ ನಂಬಿಕೆ ಇದೆ. ಈ ಕಾರಣಕ್ಕಾಗಿ ಕಾಶಿಯ ಥೀಮ್ ಆಯ್ಕೆ ಮಾಡಲಾಗಿದೆ. ಮದುವೆ ಸಮಾರಂಭದಲ್ಲಿ ವಿಷ್ಣುವಿನ ದಶಾವತಾರವನ್ನೂ ಪ್ರದರ್ಶಿಸಲಾಗಿದೆ. ವಿಷ್ಣುವಿನ ಹತ್ತು ಅವತಾರಗಳನ್ನು ಆಡಿಯೋ ದೃಶ್ಯದ ಮೂಲಕ ವಿವರಿಸಲಾಗಿದೆ. ಮದುವೆಯ ನಂತರವೂ ಈ ಪ್ರದರ್ಶನ ಮುಂದುವರಿಯುತ್ತದೆ.

Share This Article

ತೂಕ ಕಳೆದುಕೊಂಡಿದ್ದೀರಾ? ಲಘುವಾಗಿ ಪರಿಗಣಿಸಬೇಡಿ, ನಿಮಗೆ ಈ ಆರೋಗ್ಯ ಸಮಸ್ಯೆಗಳಿರಬಹುದು!

ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…

ಒಂದು ತಿಂಗಳು ಬೇಳೆಕಾಳುಗಳನ್ನು ತಿನ್ನೋದು ಬಿಟ್ಟರೆ ಏನಾಗುತ್ತೆ ಗೊತ್ತಾ? ಇಲ್ಲಿದೆ ಉಪಯುಕ್ತ ಮಾಹಿತಿ….

ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…

ಪೋಷಕರೇ ಹುಷಾರ್‌! ಅಪ್ಪಿತಪ್ಪಿಯೂ ಮಕ್ಕಳ ಮುಂದೆ ಪೋಷಕರು ಈ ಕೆಲಸಗಳನ್ನು ಮಾಡಬೇಡಿ

 ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…