22.5 C
Bengaluru
Sunday, January 19, 2020

ಜಮ್ಮು ಮತ್ತು ಕಾಶ್ಮೀರದ ದಶಕಗಳ ವಿವಾದದ ಪರಿಹಾರದ ಕ್ಷಣಗಳು ಹತ್ತಿರಾಗಿವೆ… ಟ್ವೀಟ್​ ಮಾಡಿದ ಅನುಪಮ್​ ಖೇರ್​

Latest News

ಕುಸಿದು ಬಿದ್ದ ಕಾಲುವೆ ಸಂಪರ್ಕ ಸೇತುವೆ ಪರಿಶೀಲನೆ

ಮುದ್ದೇಬಿಹಾಳ: ತಾಲೂಕಿನ ಸರೂರ, ಕವಡಿಮಟ್ಟಿ, ನೆರಬೆಂಚಿ ಗ್ರಾಮದ ಭಾಗದಲ್ಲಿ ಹಾಯ್ದು ಹೋಗಿರುವ ಕಾಲುವೆ ಕಾಮಗಾರಿ ಕಳಪೆಮಟ್ಟದಿಂದ ಕೂಡಿದ್ದು, ಕೂಡಲೇ ದುರಸ್ತಿಗೆ ಅಧಿಕಾರಿಗಳು ಕ್ರಮ...

400 ಲೀಟರ್ ಹಾಲು ಮಣ್ಣು ಪಾಲು

ಬಸರಾಳು: ಚಾಲಕನ ನಿಯಂತ್ರಣ ತಪ್ಪಿ ಹಾಲಿನ ಲಾರಿ ಉರುಳಿಬಿದ್ದ ಪರಿಣಾಮ 300 ರಿಂದ 400 ಲೀಟರ್ ಹಾಲು ಮಣ್ಣುಪಾಲಾಗಿದೆ.ನಾಗಮಂಗಲ, ಬಸರಾಳು ಹೋಬಳಿಯ ವಿವಿಧ...

ಪಲ್ಸ್ ಪೋಲಿಯೋದಲ್ಲಿ ಶೇ.95ರಷ್ಟು ಸಾಧನೆ

ಮಂಡ್ಯ: ಜಿಲ್ಲಾದ್ಯಂತ ಭಾನುವಾರ ಜಿಲ್ಲಾ ಆರೋಗ್ಯ ಇಲಾಖೆಯಿಂದ ಮೊದಲ ದಿನವೇ 1,18663 ಮಕ್ಕಳಿಗೆ ಪಲ್ಸ್ ಪೋಲಿಯೋ ಲಸಿಕೆ ಹಾಕಲಾಗಿದೆ. ಜ.19ರಿಂದ 22ರವರೆಗೆ ಪಲ್ಸ್ ಪೋಲಿಯೋ...

ಬಲೆಯಲ್ಲಿ ಸಿಲುಕಿದ್ದ ಹೆಬ್ಬಾವು ರಕ್ಷಣೆ

ಕೆ.ಎಂ.ದೊಡ್ಡಿ: ಕೆರೆಯಲ್ಲಿ ಮೀನು ಹಿಡಿಯಲು ಹಾಕಿದ್ದ ಬಲೆಯಲ್ಲಿ ಹೆಬ್ಬಾವು ಸಿಲುಕಿ ಹಾಕಿಕೊಂಡಿದ್ದ ಹಿನ್ನೆಲೆಯಲ್ಲಿ ಮದ್ದೂರಿನ ಉರಗ ಸಂರಕ್ಷಕ ಮಾ.ನ. ಪ್ರಸನ್ನಕುಮಾರ್ ಹಾವನ್ನು ರಕ್ಷಿಸಿ...

ವೇಮನ ಒಬ್ಬ ಸಮಾಜ ಸುಧಾರಕ

ವಿಜಯಪುರ : ಜೀವನವೆಂಬ ಸಂತೆಯೊಳಗಿದ್ದುಕೊಂಡೇ ಸಂತನಾಗಿ ಬೆಳೆದ ಮಹಾಯೋಗಿ ವೇಮನ ಅವರು ಒಬ್ಬ ಸಮಾಜ ಸುಧಾರಕ ಎಂದು ಜಿಲ್ಲಾಧಿಕಾರಿ ವೈ.ಎಸ್.ಪಾಟೀಲ ಹೇಳಿದರು. ನಗರದ ಕಂದಗಲ್...

ನವದೆಹಲಿ: ಹಲವು ದಶಕಗಳಿಂದ ಮಗ್ಗಲ ಮುಳ್ಳಾಗಿ ಕಾಡುತ್ತಿರುವ ಜಮ್ಮು ಮತ್ತು ಕಾಶ್ಮೀರದ ವಿವಾದ ಪರಿಹಾರಗೊಳ್ಳುವ ಕ್ಷಣಗಳು ಹತ್ತಿರಾಗುತ್ತಿದೆ ಎಂದು ಬಾಲಿವುಡ್​ನ ಹಿರಿಯ ನಟ ಹಾಗೂ ಬಿಜೆಪಿ ಮುಖಂಡ ಅನುಪಮ್​ ಖೇರ್​ ಟ್ವೀಟ್​ ಮಾಡಿದ್ದಾರೆ.

ಕಾಶ್ಮೀರ ಪಂಡಿತರಾಗಿರುವ ಅವರು ತಮ್ಮ ಸಮುದಾಯದವರು ಮೂಲ ಸ್ಥಾನಕ್ಕೆ ಮರಳುವ ಕ್ಷಣಗಳು ಹತ್ತಿರಾಗುತ್ತಿದೆ ಎಂದು ಹರ್ಷ ವ್ಯಕ್ತಪಡಿಸಿದ್ದಾರೆ. ಕಾಶ್ಮೀರ ಕಣಿವೆಯಲ್ಲಿ ಸದ್ಯ ಮೂಡಿರುವ ಅನಿಶ್ಚಿತ ಪರಿಸ್ಥಿತಿ ನಡುವೆಯೇ ಅನುಪಮ್​ ಖೇರ್​ ಈ ಟ್ವೀಟ್​ ಮಾಡಿರುವುದು ವಿಶೇಷವಾಗಿದೆ.

ಸಂವಿಧಾನದ 370ನೇ ಪರಿಚ್ಛೇದ ಹಿಂಪಡೆಯಲು ಬೆಂಬಲ
ಜಮ್ಮು ಮತ್ತು ಕಾಶ್ಮೀರಕ್ಕೆ ಸ್ವಾಯತ್ತ ಸ್ಥಾನಮಾನ ನೀಡುವ ಸಂವಿಧಾನದ 370ನೇ ಪರಿಚ್ಛೇದವನ್ನು ಹಿಂಪಡೆಯಬೇಕು ಎಂದು ಅನುಪಮ್​ ಖೇರ್​ ಮೊದಲಿನಿಂದಲೂ ಪ್ರತಿಪಾದಿಸಿಕೊಂಡು ಬರುತ್ತಿದ್ದಾರೆ. ಈ ವಿವಾದದ ಮೂಲ ಪರಿಹಾರ ಅದರಲ್ಲಿ ಅಡಗಿದೆ ಎಂಬುದು ಅವರ ಬಲವಾದ ನಂಬಿಕೆಯಾಗಿದೆ.

ಸದ್ಯ ಇವರ ಪತ್ನಿ ಕಿರಣ್​ ಖೇರ್​ ಬಿಜೆಪಿಯ ಸಂಸತ್​ ಸದಸ್ಯೆಯಾಗಿದ್ದು, ಅವರು ಕೂಡ ಸಂವಿಧಾನದ 370ನೇ ಪರಿಚ್ಛೇದವನ್ನು ರದ್ದುಗೊಳಿಸುವ ನಿರ್ಧಾರವನ್ನು ಬೆಂಬಲಿಸುತ್ತಿದ್ದಾರೆ.

ಕೇಂದ್ರ ಸರ್ಕಾರ ದಿಢೀರನೆ ಅಮರನಾಥ ಯಾತ್ರೆ ರದ್ದುಗೊಳಿಸಿದ್ದಲ್ಲದೆ, ಜಮ್ಮು ಮತ್ತು ಕಾಶ್ಮೀರದಲ್ಲಿ ನೆಲೆಸಿರುವ ಹೊರರಾಜ್ಯದವರು, ಪ್ರವಾಸಿಗರೆಲ್ಲರಿಗೂ ತಕ್ಷಣವೇ ಕಣಿವೆ ರಾಜ್ಯದಿಂದ ಮರಳುವಂತೆ ಸೂಚನೆ ನೀಡಿತ್ತು. ಜತೆಗೆ ಹೆಚ್ಚಿನ ಸಂಖ್ಯೆಯಲ್ಲಿ ಯೋಧರನ್ನು ಭದ್ರತಾ ಕಾರ್ಯಕ್ಕೆ ನಿಯೋಜಿಸಿತ್ತು. ಇದಾದ ನಂತರದಲ್ಲಿ ಹಿಂಸಾಪೀಡಿತ ರಾಜ್ಯದಲ್ಲಿನ ಪರಿಸ್ಥಿತಿ ತೀವ್ರ ಉದ್ವಿಗ್ನಗೊಂಡಿತ್ತು.

ಜಮ್ಮು ಮತ್ತು ಕಾಶ್ಮೀರವನ್ನು ಮೂರು ಭಾಗಗಳಾಗಿ ವಿಂಗಡಿಸುವುದು, ಸಂವಿಧಾನದ 35ಎ ಮತ್ತು 370 ಪರಿಚ್ಛೇದಗಳನ್ನು ರದ್ದುಗೊಳಿಸುವ ಸಾಧ್ಯತೆ ಕುರಿತು ಶಂಕೆ ವ್ಯಕ್ತವಾಗುತ್ತಿತ್ತು. ಸೋಮವಾರ ನಡೆಯಲಿರುವ ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ ಈ ಕುರಿತು ಸ್ಪಷ್ಟ ನಿರ್ಧಾರ ಕೈಗೊಳ್ಳುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ. (ಏಜೆನ್ಸೀಸ್​)

ವಿಡಿಯೋ ನ್ಯೂಸ್

Fact Check| ಮಹಿಳೆ, ಮಕ್ಕಳ ಮೇಲೆ ಪೊಲೀಸ್​ ದೌರ್ಜನ್ಯ: ವೈರಲ್...

ನವದೆಹಲಿ: ಪುರುಷ, ಮಹಿಳೆ ಹಾಗೂ ಮಕ್ಕಳ ಮೇಲೆ ಪೊಲೀಸ್​ ಸಿಬ್ಬಂದಿ ಹಲ್ಲೆ ಮಾಡುತ್ತಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ ರಾಷ್ಟ್ರೀಯ ಪೌರತ್ವ ನೋಂದಣಿ ಅಡಿಯಲ್ಲಿ ಜನರನ್ನು ಮನೆಯಿಂದ ಒಕ್ಕಲೆಬ್ಬಿಸಲಾಗುತ್ತಿದೆ ಎಂದು...

VIDEO| ಉಪಮುಖ್ಯಮಂತ್ರಿಗಳ ಕೈಬಿಡುವ ವಿಚಾರ ವರಿಷ್ಠರಿಗೆ ಬಿಟ್ಟದ್ದು, ಸಿಎಂ ವಾಪಸ್​...

ಬೆಂಗಳೂರು: ಹಾಲಿ ಇರುವ ಇಬ್ಬರು ಉಪ ಮುಖ್ಯಮಂತ್ರಿಗಳನ್ನು ಕೈ ಬಿಟ್ಟು ಹೊಸ ಡಿಸಿಎಂಗಳ ನೇಮಕ ವಿಚಾರವಾಗಿ ಪಕ್ಷದ ವರಿಷ್ಠರು ಮತ್ತು ಮುಖ್ಯಮಂತ್ರಿ ಯಡಿಯೂರಪ್ಪ ಅವರು ನಿರ್ಧಾರ ತೆಗೆದುಕೊಳ್ಳಲಿದ್ದಾರೆ ಎಂದು ಡಿಸಿಎಂ ಡಾ. ಅಶ್ವತ್ಥ...

VIDEO| ವಂದೇ ಮಾತರಂ ಹೇಳದವರಿಗೆ ಭಾರತದಲ್ಲಿ ಬದುಕುವುದಕ್ಕೆ ಹಕ್ಕಿಲ್ಲ: ಕೇಂದ್ರ...

ಅಹಮದಾಬಾದ್​: ಒಂದೊಮ್ಮೆ ನೀವು ವಂದೇಮಾತರಂ ಹೇಳುವುದಿಲ್ಲ ಎಂದಾದರೆ ಭಾರತದಲ್ಲಿ ಬದುಕುವ ಹಕ್ಕು ಇರುವುದಿಲ್ಲ ಎಂದು ಕೇಂದ್ರ ಸಚಿವ ಪ್ರತಾಪ್ ಚಂದ್ರ ಸಾರಂಗಿ ಸೂರತ್​ನಲ್ಲಿ ಹೇಳಿದ್ದು ಈಗ ವಿವಾದಕ್ಕೀಡಾಗಿದೆ.    ಅವರು ಶನಿವಾರ ಪೌರತ್ವ...

VIDEO| ಜಮ್ಮು-ಕಾಶ್ಮೀರದ ಉಧಂಪುರದಲ್ಲೊಂದು ಚೈಲ್ಡ್ ಫ್ರೆಂಡ್ಲಿ ಪೊಲೀಸ್ ಸ್ಟೇಷನ್ !

ಉಧಂಪುರ: ಜಮ್ಮು-ಕಾಶ್ಮೀರದ ಉಧಂಪುರದಲ್ಲಿ ಇದೇ ಮೊದಲ ಬಾರಿಗೆ ಚೈಲ್ಡ್ ಫ್ರೆಂಡ್ಲಿ ಪೊಲೀಸ್ ಸ್ಟೇಷನ್ ಕಾರ್ಯಾಚರಣೆ ಆರಂಭಿಸಿದೆ. ಈ ವಿಶೇಷ ಜುವೆನಿಲ್ ಪೊಲೀಸ್ ಘಟಕವನ್ನು ಭಾನುವಾರ ಉದ್ಘಾಟಿಸಲಾಗಿದೆ. ಮಕ್ಕಳಲ್ಲಿ ಪೊಲೀಸ್ ಠಾಣೆ...

VIDEO| ತನ್ನ ಆಹಾರವನ್ನು ಮೀನು ಬಾಯಿಗಿಡುವ ಬಾತುಕೋಳಿ: ವೈರಲ್​ ವಿಡಿಯೋ...

ನವದೆಹಲಿ: ಪ್ರಾಣಿಗಳ ನಡುವಿನ ಅನ್ಯೋನ್ಯತೆಗೆ ಸಂಬಂಧಿಸಿದ ಸಾಕಷ್ಟು ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ನೋಡಿದ್ದೇವೆ. ಅದರಲ್ಲೂ ಪರಸ್ಪರ ವೈರುಧ್ಯವುಳ್ಳ ಜೀವಿಗಳೆರಡು ಒಂದಕ್ಕೊಂದು ಪೋಷಿಸುವುದನ್ನು ನೋಡಿದರೆ ಅಚ್ಚರಿಯಾಗದೇ ಇರದು. ಅಂತಹದ್ದೇ ವಿಡಿಯೋವೊಂದು ಇದೀಗ...

VIDEO| ನಾವೆಲ್ಲ ಕಾಳಿಯನ್ನು ಪೂಜಿಸುವವರು, ನಮಗೆ ಮೃತ್ಯು ಬಹಳ ದೊಡ್ಡ...

ಬೆಂಗಳೂರು: ಯುವ ಬ್ರಿಗೇಡ್​ ಸಂಸ್ಥಾಪಕ ಚಕ್ರವರ್ತಿ ಸೂಲಿಬೆಲೆ ಹಾಗೂ ಸಂಸದ ತೇಜಸ್ವಿಸೂರ್ಯ ಸೇರಿದಂತೆ ಹಿಂದು ಮುಖಂಡರ ಹತ್ಯೆಗೆ ಸಂಚು ನಡೆಸಿರುವ ಆಘಾತಕಾರಿ ಘಟನೆ ಬಯಲಾಗಿ, 6 ಮಂದಿಯನ್ನು ಬಂಧಿಸದ ಬೆನ್ನಲ್ಲೇ...