

ವಿಜಯವಾಣಿ ಸುದ್ದಿಜಾಲ ಉಡುಪಿ
ಎಂಟು ಶತಮಾನದ ಹಿಂದೆ ದ್ವೈತ ತತ್ವದ ಬೆಳಕನ್ನು ವಿಶ್ವಕ್ಕೆ ಪಸರಿಸಿದ್ದ ಆಚಾರ್ಯ ಮಧ್ವರು ಉಡುಪಿಯಲ್ಲಿ ಶ್ರೀಕೃಷ್ಣನನ್ನು ಪ್ರತಿಷ್ಠಾಪಿಸಿದ್ದರು. ಅಂತಹ ಪ್ರಾಚಿನ ಉಡುಪಿಯ ಶ್ರೀಕೃಷ್ಣ ಮಠದ ಸೌಂದರ್ಯವನ್ನು ಆಧುನಿಕ ಬೆಳಕಿನ ಕಿಂಡಿಯಲ್ಲಿ ದರ್ಶಿಸಲು ಪರ್ಯಾಯ ಪುತ್ತಿಗೆ ಮಠದ ಸುಗುಣೇಂದ್ರ ತೀರ್ಥ ಶ್ರೀಪಾದರು ಅವಕಾಶ ಕಲ್ಪಿಸಿದ್ದಾರೆ.
ಇನ್ಫೋಸಿಸ್ ಫೌಂಡೇಷನ್ನ ಸುಧಾ ಮೂರ್ತಿ, ನಿವೃತ್ತ ಮುಖ್ಯ ನ್ಯಾಯಾಧೀಶ ದಿನೇಶಕುಮಾರ್ ಭಾಗವಹಿಸಲಿದ್ದಾರೆ. ಪರ್ಯಾಯ ಪುತ್ತಿಗೆ ಮಠದ ಸುಗುಣೇಂದ್ರ ಶ್ರೀ, ಪಟ್ಟದ ಕಿರಿಯ ಶಿಷ್ಯ ಸುಶ್ರೀಂದ್ರ ಶ್ರೀ, ಅದಮಾರು ಮಠದ ವಿಶ್ವಪ್ರಿಯ ತೀರ್ಥ ಶ್ರೀಪಾದರು ಸಾನ್ನಿಧ್ಯ ವಹಿಸಲಿದ್ದಾರೆ ಎಂದು ಶ್ರೀಮಠದ ದಿವಾನ ನಾಗರಾಜ ಆಚಾರ್ಯ ಹಾಗೂ ಅಂತಾರಾಷ್ಟ್ರೀಯ ಕಾರ್ಯದರ್ಶಿ ಪ್ರಸನ್ನ ಆಚಾರ್ಯ ತಿಳಿಸಿದ್ದಾರೆ.