More

    ಶ್ರೀಲಂಕಾದಲ್ಲಿ ಹೃದಯಾಘಾತಕ್ಕೆ ಒಳಗಾಗಿದ್ದ ಕಸ್ತೂರಿರಂಗನ್​ಗೆ ಬೆಂಗಳೂರಲ್ಲಿ ಸ್ಟೆಂಟ್ ಅಳವಡಿಕೆ

    ಆನೇಕಲ್: ಶ್ರೀಲಂಕಾದ ಕೊಲಂಬೊದಲ್ಲಿ ನಿನ್ನೆ ಹೃದಯಾಘಾತಕ್ಕೆ ಒಳಗಾಗಿದ್ದ ಇಸ್ರೋ ಮಾಜಿ ಅಧ್ಯಕ್ಷ ಡಾ.ಕೆ.ಕಸ್ತೂರಿರಂಗನ್ ಅವರನ್ನು ನಿನ್ನೆಯೇ ತುರ್ತಾಗಿ ಏರ್​ಲಿಫ್ಟ್​ ಮೂಲಕ ಬೆಂಗಳೂರಿಗೆ ಕರೆತರಲಾಗಿದ್ದು, ಇಂದು ಅವರಿಗೆ ಸ್ಟೆಂಟ್​ ಅಳವಡಿಕೆ ಮಾಡಲಾಗಿದೆ. ಬೆಂಗಳೂರಿನ ನಾರಾಯಣ ಹೆಲ್ತ್ ಸಿಟಿಯಲ್ಲಿ ಅವರಿಗೆ ಚಿಕಿತ್ಸೆ ನೀಡಲಾಗಿದೆ.

    ನಿನ್ನೆ ಶ್ರೀಲಂಕಾದಲ್ಲಿ ಹೃದಯಾಘಾತಕ್ಕೆ ಒಳಗಾಗುತ್ತಿದ್ದಂತೆ ಅವರನ್ನು ವಿಮಾನದಲ ಮೂಲಕ ಎಚ್​ಎಎಲ್ ವಿಮಾನನಿಲ್ದಾಣಕ್ಕೆ ಕರೆತರಲಾಗಿತ್ತು. ನಂತರ ಅಲ್ಲಿಂದ ಗ್ರೀನ್ ಕಾರಿಡಾರ್ ಮೂಲಕ ತ್ವರಿತವಾಗಿ ಬೆಂಗಳೂರಿನ ದೊಮ್ಮಸಂದ್ರದ ನಾರಾಯಣ ಹೆಲ್ತ್ ಸಿಟಿಗೆ ಕರೆದೊಯ್ದು ದಾಖಲಿಸಲಾಗಿತ್ತು.

    ಇದನ್ನೂ ಓದಿ: ನಾಚಿಕೆ-ಅವಮಾನ ಸಹಿಸಿಕೊಂಡು ಬಯಲಲ್ಲೇ ದೇಹದ ಒತ್ತಡ ನಿವಾರಿಸಿಕೊಂಡೆ: ಟಾಯ್ಲೆಟ್ ಇರದೆ ಪಟ್ಟ ಕಷ್ಟದ ಬಗ್ಗೆ ರಾಷ್ಟ್ರಪತಿಗೇ ಪತ್ರ ಬರೆದ ಮಹಿಳೆ

    ನಾರಾಯಣ ಹೆಲ್ತ್ ಸಿಟಿ ಮುಖ್ಯಸ್ಥ ಡಾ.ದೇವಿ ಶೆಟ್ಟಿ ಅವರ ಮಾರ್ಗದರ್ಶನದಲ್ಲಿ ನಿನ್ನೆ ಅವರಿಗೆ ಪ್ರಾಥಮಿಕ ಚಿಕಿತ್ಸೆ ನೀಡಲಾಗಿತ್ತು. ಇಂದು ಡಾ.ದೇವಿ ಶೆಟ್ಟಿ ಸಲಹೆಯಂತೆ ಡಾ.ಭಗೀರಥ್ ರಘುರಾಮನ್, ಡಾ.ಉದಯ್ ಖನೋಲ್ಕರ್, ಡಾ.ಪ್ರವೀಣ್ ಕುಮಾರ್ ನೇತೃತ್ವದ ವೈದ್ಯರ ತಂಡದಿಂದ ಸ್ಟೆಂಟ್ ಅಳವಡಿಕೆ ಮಾಡಿ ಚಿಕಿತ್ಸೆ ನೀಡಲಾಗಿದೆ. ಅವರ ಆರೋಗ್ಯದಲ್ಲಿ ಚೇತರಿಕೆ ಕಂಡುಬಂದಿದ್ದು, ಮುಂದಿನ ವಾರದ ಹಾಗೆ ಆಸ್ಪತ್ರೆಯಿಂದ ಬಿಡುಗಡೆ ಮಾಡುವ ಸಾಧ್ಯತೆ ಇದೆ ಎಂದು ವೈದ್ಯರು ತಿಳಿಸಿದ್ದಾರೆ.

    ಕಂಪನಿ ಎಂಡಿ, ಸಿಇಒ ಇಬ್ಬರನ್ನೂ ಹಾಡಹಗಲೇ ಬರ್ಬರವಾಗಿ ಕೊಂದ ಮಾಜಿ ಉದ್ಯೋಗಿ!

    ಒಂದೇ ಹಗ್ಗದಲ್ಲಿ ಕೊನೆಯಾಯ್ತು ಯೋಧನ ಪತ್ನಿ-ಪುತ್ರಿಯ ಬದುಕು: ಮಗಳೊಂದಿಗೆ ನೇಣು ಬಿಗಿದುಕೊಂಡ ತಾಯಿ!

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts