More

    ಕಸ್ತೂರಿ ರಂಗನ್ ವರದಿ ವಿರೋಧಿಸಿ ಮೂರು ಹಂತದ ಹೋರಾಟ

    ಚಿಕ್ಕಮಗಳೂರು: ಕಸ್ತೂರಿ ರಂಗನ್ ವರದಿ ಜಾರಿಯಾಗದಂತೆ ಕೇಂದ್ರ ಹಾಗೂ ರಾಜ್ಯ ಸರ್ಕಾರದ ಗಮನ ಸೆಳೆಯಲು ಡಿ.15 ರೊಳಗೆ ಮೂರು ಹಂತದ ಹೋರಾಟಕ್ಕೆ ಕಸ್ತೂರಿ ರಂಗನ್ ವರದಿ ವಿರೋಧಿ ಹೋರಾಟ ಸಮಿತಿ ಸಭೆ ನಿರ್ಣಯ ಕೈಗೊಂಡಿದೆ.

    ಕಸ್ತೂರಿ ರಂಗನ್ ವರದಿ ವಿರೋಧಿ ಹೋರಾಟ ಸಮಿತಿ ಸೋಮವಾರ ಡಾ.ಬಿ.ಆರ್.ಅಂಬೇಡ್ಕರ್ ಭವನದಲ್ಲಿ ಆಯೋಜಿಸಿದ್ದ ವಿವಿಧ ರಾಜಕೀಯ ಪಕ್ಷಗಳ ಮುಖಂಡರು, ಕಾಫಿ ಬೆಳೆಗಾರರು, ಪ್ರಗತಿಪರ ಮತ್ತು ಕನ್ನಡಪರ ಸಂಘಟನೆ ಮುಖಂಡರ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಯಿತು.

    ಪಶ್ಚಿಮ ಘಟ್ಟ ವ್ಯಾಪ್ತಿಯ ಎಲ್ಲಾ ಸಂಸದರು, ಶಾಸಕರು ಜನಪ್ರತಿನಿಧಿಗಳನ್ನು ಕರೆಸಿ ಅವರ ನಿಲುವೇನು ಎಂಬುದನ್ನು ಪರಿಗಣಿಸಿ ಮುಂದಿನ ಹೋರಾಟದ ರೂಪುರೇಷೆಗಳನ್ನು ನಿರ್ಧರಿಸುವುದು ಸೂಕ್ತ ಎಂಬ ಅಭಿಪ್ರಾಯಗಳು ವ್ಯಕ್ತವಾದವು.

    ಮಲೆನಾಡು ಉಳಿಯಬೇಕೆಂಬ ಕಾಳಜಿ ಇದ್ದರೆ ಕೆಜಿಎಫ್ ನಾಯಕತ್ವದಲ್ಲಿ ಕಾಫಿ ಬೆಳೆಗಾರರು, ದಲಿತ, ಪ್ರಗತಿಪರ, ಕನ್ನಡಪರ ಸಂಘಟನೆಗಳು ಕೈಜೋಡಿಸಿದಾಗ ಮಾತ್ರ ಹೋರಾಟಕ್ಕೆ ಶಕ್ತಿ ಬರುತ್ತದೆ. ಕೆಜಿಎಫ್ ಸಂಘಟಕರು ತುರ್ತು ಸಭೆ ಕರೆದು ಕಸ್ತೂರಿ ರಂಗನ್ ವರದಿ ವಿರೋಧಿ ಹೋರಾಟ ಸಮಿತಿ ಜೊತೆ ಕುಳಿತು ನಿರ್ಣಯ ಕೈಗೊಂಡರೆ ಹೋರಾಟ ಯಶಸ್ವಿಯಾಗುತ್ತದೆ. ಜಿಲ್ಲೆಯ ಕೆಲವು ಜನಪ್ರತಿನಿಧಿಗಳಿಗೆ ವೈಯುಕ್ತಿಕ ಬದುಕಿನ ಬಗ್ಗೆ ಕಾಳಜಿ ಇದೆ ಹೊರತು ಜಿಲ್ಲೆಯ ಬೆಳೆಗಾರರು, ಕಾರ್ವಿುಕರು, ರೈತರ ಬಗ್ಗೆ ಕಿಂಚಿತ್ತು ಕಾಳಜಿ ಇಲ್ಲ ಎಂದು ಹಲವರು ಹೇಳಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts