25.1 C
Bangalore
Friday, December 6, 2019

ನಾಳೆ ಹೈಕೋರ್ಟ್ ತೀರ್ಪು ನಿರೀಕ್ಷೆ

Latest News

ಯೋಗ ತರಬೇತಿಗೆ ಆಸ್ಟ್ರೇಲಿಯಾದಿಂದ ಆಹ್ವಾನ, ಬಳ್ಳಾರಿ ಸಾಧನಾ ಯೋಗ ಕೇಂದ್ರದ ರೂಪಾ ಮುರಳೀಧರ್ ಹೇಳಿಕೆ

ಬಳ್ಳಾರಿ: ಆಸ್ಟ್ರೇಲಿಯಾದ ಜನರಿಗೆ ಯೋಗ ಪದ್ಧತಿ ಬಗ್ಗೆ ತುಂಬಾ ಆಸಕ್ತಿ ಇದೆ. ಸೇವಾ ಆಸ್ಟ್ರೇಲಿಯಾ ಸಂಸ್ಥೆ ಮೂಲಕ ಆಸ್ಟ್ರೇಲಿಯಾದಲ್ಲಿ ಯೋಗ ತರಬೇತಿ ನೀಡಲು...

ಸೆನ್ಸೆಕ್ಸ್​ 334 ಅಂಶಕ್ಕೂ ಹೆಚ್ಚು ಕುಸಿತ: ನಿಫ್ಟಿ 12,000ಕ್ಕೂ ಕೆಳಕ್ಕೆ…

ಮುಂಬೈ: ಷೇರುಪೇಟೆಯ ವಾರಾಂತ್ಯದ ದಿನದ ವಹಿವಾಟಿನ ಕೊನೆಗೆ ಬಾಂಬೆ ಸ್ಟಾಕ್​ ಎಕ್ಸ್​ಚೇಂಜ್​ (ಬಿಎಸ್​ಇ) ಸೂಚ್ಯಂಕ ಸೆನ್ಸೆಕ್ಸ್​ 334 ಅಂಶ ಕುಸಿತ ಮತ್ತು ನ್ಯಾಷನಲ್...

ಬಳ್ಳಾರಿ ಜಿಲ್ಲೆಯಲ್ಲಿ ನರೇಗಾ ಕಾಮಗಾರಿ ಪರಿಶೀಲಿಸಿದ ಕೇಂದ್ರ ಅಧ್ಯಯನ ತಂಡ

ಬಳ್ಳಾರಿ: ನರೇಗಾ ರಾಷ್ಟ್ರೀಯ ಪ್ರಶಸ್ತಿ ಶಿಫಾರಸಿಗೆ ದೇಶದ ಒಂಬತ್ತು ಜಿಲ್ಲೆಗಳ ಪೈಕಿ ಕರ್ನಾಟಕದಿಂದ ಆಯ್ಕೆಯಾಗಿರುವ ಬಳ್ಳಾರಿ ಜಿಲ್ಲೆಗೆ ಕೇಂದ್ರ ಅಧ್ಯಯನ ತಂಡ ಶುಕ್ರವಾರ...

ಹಂಪಿ ವಿವಿ ಕೇಂದ್ರ ಸ್ಥಳಾಂತರ ಕೈಬಿಡಿ

ಬಾದಾಮಿ: ಬನಶಂಕರಿಯಲ್ಲಿರುವ ಹಂಪಿ ಕನ್ನಡ ವಿಶ್ವವಿದ್ಯಾಲಯದ ಕೇಂದ್ರವನ್ನು ಸ್ಥಳಾಂತರ ಮಾಡಬಾರದು ಎಂದು ಆಗ್ರಹಿಸಿ ವಿವಿಧ ಸಂಘ ಸಂಸ್ಥೆಗಳ ಪದಾಧಿಕಾರಿಗಳು ಪಟ್ಟಣದಲ್ಲಿ ಮಾಜಿ ಮುಖ್ಯಮಂತ್ರಿ...

ಅವೈಜ್ಞಾನಿಕ ಉಳುಮೆಯಿಂದ ಮಣ್ಣಿನ ಸವಕಳಿ, ಹೊಸಪೇಟೆ ಕೃಷಿ ಇಲಾಖೆ ಡಿಡಿ ಸಹದೇವ ಯರಗುಪ್ಪ ಹೇಳಿಕೆ

ಕೂಡ್ಲಿಗಿ: ರೈತರ ಜೀವನಕ್ಕೆ ಆಧಾರವಾಗಿರುವ ಮಣ್ಣಿನ ಸಂರಕ್ಷಣೆ ಮಾಡಬೇಕಾದ ಅಗತ್ಯವಿದೆ ಎಂದು ಕೃಷಿ ಇಲಾಖೆ ಹೊಸಪೇಟೆ ವಿಭಾಗದ ಉಪನಿರ್ದೇಶಕ ಸಹದೇವ ಯರಗುಪ್ಪ ಹೇಳಿದರು. ಪಟ್ಟಣದ...

ಮಂಗಳೂರು: ಕಟೀಲು ಶ್ರೀ ದುರ್ಗಾಪರಮೇಶ್ವರಿ ಯಕ್ಷಗಾನ ಮೇಳಗಳ ಏಲಂ ಕುರಿತ ಪ್ರಕರಣದ ವಿಚಾರಣೆ ಹೈಕೋರ್ಟ್‌ನಲ್ಲಿ ಸೋಮವಾರ ಪೂರ್ಣಗೊಂಡಿದ್ದು, ನ.20ರಂದು ಅಂತಿಮ ಆದೇಶ ಹೊರಬೀಳಲಿದೆ.
ಈ ನಡುವೆ ನ.22ರಂದು ಕಟೀಲು ಮೇಳಗಳ ತಿರುಗಾಟ ಆರಂಭಗೊಳ್ಳುವುದಾಗಿ ಈಗಾಗಲೇ ಪ್ರಕಟಿಸಿದ್ದು, ಅದರ ವ್ಯವಸ್ಥೆ ಮೇಲೆ ಆದೇಶ ಯಾವ ರೀತಿ ಪರಿಣಾಮ ಬೀರಲಿದೆ ಎಂಬ ಕುತೂಹಲ ವ್ಯಕ್ತವಾಗಿದೆ.

ಸೋಮವಾರದ ವಿಚಾರಣೆ ವೇಳೆ ದೇವಸ್ಥಾನದ ಆಡಳಿತ ಟ್ರಸ್ಟಿಗಳ ಪರವಾಗಿ ವಾದ ಮಂಡನೆಯಾಗಿದ್ದು, ಯಕ್ಷಗಾನವನ್ನು ವಹಿಸಿಕೊಡುವ ಜವಾಬ್ದಾರಿ ಟ್ರಸ್ಟಿಗಳದ್ದೇ ಆಗಿದೆ; ಅಲ್ಲದೆ ಯಕ್ಷಬೋಧಿನಿ ಟ್ರಸ್ಟ್ ಎಂಬುದು ಪ್ರಸ್ತುತ ಕಟೀಲು ಮೇಳಗಳ ಸಂಯೋಜಕ ಕಲ್ಲಾಡಿ ದೇವಿಪ್ರಸಾದ ಶೆಟ್ಟಿ ಅವರಿಗೆ ಸೇರಿದ್ದು ಎಂಬ ವಾದ ಸರಿಯಿಲ್ಲ, ಅಂತಹ ಟ್ರಸ್ಟ್ ಕೂಡ ಇಲ್ಲ. ಅಲ್ಲದೆ ಜಿಲ್ಲಾಧಿಕಾರಿ ಈ ಕುರಿತು ನಡೆಸಿರುವ ತನಿಖೆ ಸರಿಯಿಲ್ಲ ಎಂಬಿತ್ಯಾದಿ ವಾದಗಳನ್ನು ದೇವಳ ಟ್ರಸ್ಟಿಗಳ ಪರ ವಕೀಲರು ಮುಂದಿಟ್ಟರು.

ಕರ್ನಾಟಕ ಧರ್ಮಾದಾಯ ಮತ್ತು ದತ್ತಿ ಕಾಯ್ದೆ ರೂಲ್ 33ರ ಪ್ರಕಾರ ಟ್ರಸ್ಟಿಗಳಿಗೆ ಯಕ್ಷಗಾನ ಮೇಳಗಳನ್ನು ಯಾರಿಗೆ ಆದರೂ ವಹಿಸುವುದಕ್ಕೆ ಅವಕಾಶ ಇದೆ. ಇದು ಸಂಪ್ರದಾಯವಾದ್ದರಿಂದ ಇದನ್ನು ರದ್ದು ಮಾಡಿ ಏಲಂ ಮಾಡಿದರೆ ತೊಂದರೆಯಾಗುತ್ತದೆ ಎಂದೂ ವಾದಿಸಿದರು. ಆಗ ನ್ಯಾಯಾಧೀಶರು, ಏಲಂ ಮಾಡಿದಾಗ ಹೆಚ್ಚು ಆದಾಯ ಬರುವುದಾದರೆ ಯಾಕೆ ಮಾಡಬಾರದು ಎಂಬ ಪ್ರಶ್ನೆಯನ್ನು ವಕೀಲರ ಮುಂದಿಟ್ಟರು.
ಇನ್ನೊಂದೆಡೆ ಸರ್ಕಾರದ ಪರವಾಗಿ ವಾದಿಸಿದ ಹೆಚ್ಚುವರಿ ಅಡ್ವೊಕೇಟ್ ಜನರಲ್ ಕೂಡ, ಈ ಹಿಂದೆ ಆಗಿರುವುದು ತಾತ್ಕಾಲಿಕ ವ್ಯವಸ್ಥೆಯಷ್ಟೇ. ಸೆಕ್ಷನ್ 40ಡಿ ಪ್ರಕಾರ ಯಕ್ಷಗಾನ ಮೇಳಗಳ ಏಲಂ ಆಗಲೇಬೇಕಾಗಿದೆ ಎಂದರು. ಈ ಬಗ್ಗೆ ಪ್ರತಿಕ್ರಿಯಿಸಿದ ನ್ಯಾಯಾಧೀಶರು, 2017ರ ವರೆಗೂ ಇಲಾಖೆ ಸುಮ್ಮನಿದ್ದುದು ಯಾಕಾಗಿ ಎಂದು ಪ್ರಶ್ನಿಸಿದರು.

ಪ್ರಕರಣದಲ್ಲಿ ವಿಚಾರಣೆ ಅಂತ್ಯಗೊಂಡಿದ್ದು, ನ.20ರಂದು ನ್ಯಾಯಾಲಯ ಅಂತಿಮ ಆದೇಶ ಹೊರಡಿಸುವ ನಿರೀಕ್ಷೆ ಇದೆ.

Stay connected

278,739FansLike
580FollowersFollow
620,000SubscribersSubscribe

ವಿಡಿಯೋ ನ್ಯೂಸ್

VIDEO: ಎನ್​ಕೌಂಟರ್ ನಡೆಸಿದ ಪೊಲೀಸರನ್ನು ಹೆಗಲ ಮೇಲೆ ಹೊತ್ತು ಸಂಭ್ರಮಿಸಿದ...

ಹೈದರಾಬಾದ್​​: ಪಶುವೈದ್ಯೆ ದಿಶಾ ಅತ್ಯಾಚಾರ ಮತ್ತು ಕೊಲೆ ಆರೋಪಿಗಳನ್ನು ಎನ್​ಕೌಂಟರ್​​ನಲ್ಲಿ ಹತ್ಯೆಗೈದ ಪೊಲೀಸರನ್ನು ಹೈದರಾಬಾದ್​​ ಜನತೆ ಹೆಗಲ ಮೇಲೆ ಹೊತ್ತು ಜಯಘೊಷ ಕೂಗಿ ಸಂಭ್ರಮಿಸಿದ್ದಾರೆ. ಶುಕ್ರವಾರ ಬೆಳಗ್ಗೆ ಆರೋಪಿಗಳ ಎನ್​ಕೌಂಟರ್​ ಸುದ್ಧಿ...

ಉಪಚುನಾವಣೆ ಮತದಾನ ಅಂತ್ಯ: ಮತಗಟ್ಟೆ ಸಮೀಕ್ಷೆಯಲ್ಲಿ ಬಿಜೆಪಿಯದ್ದೇ ಮೇಲುಗೈ

ಬೆಂಗಳೂರು: ರಾಜ್ಯದ 15 ಕ್ಷೇತ್ರಗಳ ಉಪಚುನಾವಣೆಯ ಮತದಾನ ಪ್ರಕ್ರಿಯೆ ಗುರುವಾರ ಸಂಜೆ 6 ಗಂಟೆಗೆ ಪೂರ್ಣಗೊಂಡಿತು. ಸಣ್ಣಪುಟ್ಟ ಗಲಾಟೆಗಳು ಹಾಗೂ ಅಲ್ಲಲ್ಲಿ ಕೆಲ ಇವಿಎಂಗಳ ದೋಷ ಹೊರತುಪಡಿಸಿದರೆ ಉಪಚುನಾವಣೆಯ ಮತದಾನ...

VIDEO| ವಿಕೆಟ್​ ಕಿತ್ತ ಖುಷಿಯಲ್ಲಿ ಕರವಸ್ತ್ರವನ್ನು ಕಡ್ಡಿಯನ್ನಾಗಿಸಿ ಸಂಭ್ರಮ: ಬೌಲರ್​ನ...

ನವದೆಹಲಿ: ಯಾವುದೇ ಆಟವಾಗಿರಲಿ ಆಟಗಾರರಿಗೆ ತಮ್ಮ ಸಂಭ್ರಮದ ಕ್ಷಣ ಸ್ಮರಣೀಯವಾಗಿರುತ್ತದೆ. ಹಲವರು ವಿಭಿನ್ನ ರೀತಿಯಲ್ಲಿ ಸಂಭ್ರಮಿಸುವ ಪ್ರಯತ್ನವನ್ನು ಮೈದಾನದಲ್ಲಿ ಮಾಡುತ್ತಿರುತ್ತಾರೆ. ಇದೀಗ ದಕ್ಷಿಣ ಆಫ್ರಿಕಾ ಬೌಲರ್​ ಒಬ್ಬರು ವಿಕೆಟ್​ ಪಡೆದ...

VIDEO| 3ನೇ ಮಹಡಿಯಿಂದ ಬಿದ್ದರೂ ಗಾಯವಾಗದೇ ಬದುಕುಳಿದ 2 ವರ್ಷದ...

ಪಂಜಿಮ್​: ದಮನ್ ಮತ್ತು ದಿಯುನಲ್ಲಿರುವ ಹೌಸಿಂಗ್​ ಕಾಂಪ್ಲೆಕ್ಸ್​ನ ಮೂರನೇ ಮಹಡಿಯಿಂದ ಕೆಳಗೆ ಬಿದ್ದ ಎರಡು ವರ್ಷದ ಮಗುವೊಂದು ಪವಾಡ ರೀತಿಯಲ್ಲಿ ಬದುಕುಳಿದಿರುವ ಘಟನೆ ನಡೆದಿದ್ದು, ಇದಕ್ಕೆ ಸಂಬಂಧಪಟ್ಟ ವಿಡಿಯೋ ಸಾಮಾಜಿಕ...

‘ಅಬುಧಾಬಿ ಯುವರಾಜ ಮತ್ತು ಪುಟ್ಟ ಬಾಲಕಿ’ಯ ಭಾವನಾತ್ಮಕ ಕತೆಯಿದು…; ನಿರಾಸೆಗೊಂಡ...

ಈ ಸುದ್ದಿ ಓದಿ, ವಿಡಿಯೋ ನೋಡಿದರೆ ಒಂದು ಕ್ಷಣ ಹೃದಯಕ್ಕೆ ತಟ್ಟುತ್ತದೆ. ಪುಟ್ಟ ಹುಡುಗಿಯ ನಿರಾಸೆ ಮತ್ತು ಅಬುಧಾಬಿಯ ಯುವರಾಜ ಶೇಖ್​ ಮೊಹಮ್ಮದ್​ ಬಿನ್​​ ಜಾಯೇದ್​ ಅವರ ಮೃದು ಮನಸು ಇಲ್ಲಿ ಅನಾವರಣಗೊಂಡಿದೆ. ಸೌದಿ...

VIDEO| ಪಶುವೈದ್ಯೆ ಅತ್ಯಾಚಾರ, ಕೊಲೆ ಪ್ರಕರಣದ ಆರೋಪಿಗಳ ವಿಚಾರವಾಗಿ ಪ್ರಧಾನಿ...

ಮುಂಬೈ: ತೆಲಂಗಾಣದಲ್ಲಿ ನಡೆದ ಮಹಿಳಾ ಪಶುವೈದ್ಯಾಧಿಕಾರಿಯ ಅತ್ಯಾಚಾರ ಮತ್ತು ಕೊಲೆ ಪ್ರಕರಣವನ್ನು ಇಡೀ ದೇಶವೇ ಖಂಡಿಸಿದ್ದು, ಆರೋಪಿಗಳಿಗೆ ಘೋರ ಶಿಕ್ಷೆಯಾಗಬೇಕೆಂಬ ಒಕ್ಕೊರಲು ಅಭಿಪ್ರಾಯ ವ್ಯಕ್ತವಾಗುತ್ತಿದೆ. ಭಾರತೀಯ ಸಿನಿಮಾ ರಂಗದ ತಾರೆಯರು ಕೂಡ...