More

    ಕಟೀಲು ಮೇಳಕ್ಕೂ ಕಾಲಮಿತಿ, ಇನ್ನು ರಾತ್ರಿ 10.30ರವರೆಗೆ ಮಾತ್ರ ಯಕ್ಷಗಾನ

    ಮಂಗಳೂರು: ಇದುವರೆಗೆ ಬೆಳಗ್ಗಿನವರೆಗೂ ನಡೆಯುತ್ತಿದ್ದ ಕಟೀಲು ಮೇಳದ ಯಕ್ಷಗಾನ ಇನ್ನು ಮುಂದೆ ಕಾಲಮಿತಿಯನ್ನು ಅಳವಡಿಸಿಕೊಳ್ಳಲಿದ್ದು, ರಾತ್ರಿ 10.30ಕ್ಕೆ ಪ್ರದರ್ಶನ ಕೊನೆಗೊಳ್ಳಲಿದೆ.

    ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನ ಅಧೀನದ ಆರು ಯಕ್ಷಗಾನ ಮೇಳಗಳ ಯಕ್ಷಗಾನ ಪ್ರದರ್ಶನ ಮುಂದಿನ ತಿರುಗಾಟದಿಂದ ಕಾಲಮಿತಿ ಅಳವಡಿಸಿಕೊಳ್ಳುವ ಕುರಿತು ಆಡಳಿತ ಮಂಡಳಿ ತೀರ್ಮಾನ ಕೈಗೊಂಡಿದೆ.

    ರಾತ್ರಿ 10.30ರ ನಂತರ 50 ಡೆಸಿಬಲ್‌ಗಿಂತ ಹೆಚ್ಚಿನ ಧ್ವನಿವರ್ಧಕ ಬಳಸದಂತೆ ಸರ್ಕಾರದಿಂದ ಸೂಚನೆ ಇರುವುದರಿಂದ ಯಕ್ಷಗಾನ ಪ್ರದರ್ಶನದ ಸಮಯ ಬದಲಾವಣೆ ಅನಿವಾರ್ಯವಾಗಿತ್ತು. ಈ ಕುರಿತು ದೇವರ ಎದುರು ಪ್ರಶ್ನೆ ಇಟ್ಟಾಗ ಒಪ್ಪಿಗೆ ದೊರೆತಿದೆ.

    ಶ್ರೀ ದುರ್ಗಾಪರಮೇಶ್ವರಿ ಪ್ರಸಾದಿತ ದಶಾವತಾರ ಯಕ್ಷಗಾನ ಮಂಡಳಿಯ ಯಕ್ಷಗಾನವನ್ನು ಕಾಲಮಿತಿಗೆ ಒಳಪಡಿಸುವ ಕುರಿತು ಮಂಗಳವಾರ ಆಡಳಿತ ಮಂಡಳಿ ನಿರ್ಧಾರ ಕೈಗೊಂಡಿದೆ. ಅದರಂದೆ ಸಂಜೆ 5 ಗಂಟೆಯಿಂದ ರಾತ್ರಿ 10.30ರವರೆಗೆ ಮಾತ್ರ ಯಕ್ಷಗಾನ ನಡೆಯಲಿದೆ. ಯಕ್ಷಗಾನ ಪ್ರದರ್ಶನದ ಸ್ವರೂಪ ಬಗ್ಗೆ ಮುಂದಿನ ದಿನಗಳಲ್ಲಿ ನಿರ್ಧರಿಸಲಾಗುವುದು ಎಂದು ದೇವಸ್ಥಾನದ ಆಡಳಿತ ಮಂಡಳಿ ಅಧ್ಯಕ್ಷರಾದ ಆನುವಂಶಿಕ ಮೊಕ್ತೇಸರ ಕೊಡೆತ್ತೂರುಗುತ್ತು ಸನತ್ ಕುಮಾರ್ ಶೆಟ್ಟಿ, ಆನುವಂಶಿಕ ಮೊಕ್ತೇಸರ-ಅರ್ಚಕ ವಾಸುದೇವ ಆಸ್ರಣ್ಣ ತಿಳಿಸಿದ್ದಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts