More

    ಕಟೀಲ್ ಅವಿರೋಧ ಆಯ್ಕೆ ಘೋಷಣೆ ಇಂದು

    ಬೆಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷ ಹುದ್ದೆಗೆ ನಳಿನ್​ಕುಮಾರ್ ಕಟೀಲ್ ಅವರೊಬ್ಬರು ಮಾತ್ರವೇ ನಾಮಪತ್ರ ಸಲ್ಲಿಸಿರುವ ಕಾರಣ ಅವರ ಅವಿರೋಧ ಆಯ್ಕೆಯನ್ನು ಗುರುವಾರ ಅಧಿಕೃತವಾಗಿ ಘೋಷಣೆ ಮಾಡಲಾಗುವುದು.

    ಬಿಜೆಪಿ ಕಚೇರಿಯಲ್ಲಿ ರಾಜ್ಯ ಚುನಾವಣಾಧಿಕಾರಿಯಾಗಿದ್ದ ಸಚಿವ ಸಿ.ಟಿ.ರವಿ ಈ ಘೋಷಣೆ ಮಾಡಲಿದ್ದಾರೆ. ಮುಖ್ಯಮಂತ್ರಿಯಾಗಿ ಬಿ.ಎಸ್.ಯಡಿಯೂರಪ್ಪ ಅಧಿಕಾರ ಸ್ವೀಕಾರ ಮಾಡಿದ ಬಳಿಕ, ಬಿಜೆಪಿ ರಾಜ್ಯಾಧ್ಯಕ್ಷ ಹುದ್ದೆಗೆ ಸಂಸದ ನಳಿನ್​ಕುಮಾರ್ ಕಟೀಲ್ ಅವರನ್ನು ನೇಮಕಗೊಳಿಸಿ ಹೈಕಮಾಂಡ್ ಆದೇಶ ಹೊರಡಿಸಿತ್ತು.

    ಬಿಜೆಪಿ ಸಾಂಸ್ಥಿಕ ಚುನಾವಣೆಗಳು ಘೋಷಣೆಯಾದ ಹಿನ್ನೆಲೆ ಅಧ್ಯಕ್ಷ ಹುದ್ದೆಗೆ ನಿಯಮಾವಳಿ ಪ್ರಕಾರವೇ ನಾಮಪತ್ರ ಸಲ್ಲಿಸಿ, ಚುನಾವಣೆ ಪ್ರಕ್ರಿಯೆ ಮೂಲಕ ಆಯ್ಕೆಯಾಗಬೇಕು ಎನ್ನುವ ನಿಯಮಾವಳಿ ಇರುವುದರಿಂದ ಈಗ ಕಟೀಲ್ ಅಧ್ಯಕ್ಷರಾಗಿ ಮತ್ತೊಮ್ಮೆ ಆಯ್ಕೆಗೊಳ್ಳಲಿದ್ದಾರೆ.

    ಅಭಿನಂದನೆ: ಅರಮನೆ ಆವರಣದಲ್ಲಿ ಗುರುವಾರ ಮಧ್ಯಾಹ್ನ 3ಕ್ಕೆ ನಡೆಯ ಲಿರುವ ಸಮಾರಂಭದಲ್ಲಿ ನೂತನ ಅಧ್ಯಕ್ಷರನ್ನು ಅಭಿನಂದಿಸಲಾಗುವುದು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts