

ವಿಜಯವಾಣಿ ಸುದ್ದಿಜಾಲ ಕಟೀಲು
ಯಕ್ಷಗಾನ ನಮ್ಮಲ್ಲಿ ಉತ್ತಮ ಚಿಂತನೆ ಬೆಳೆಸುವುದರಿಂದ ಮಕ್ಕಳಲ್ಲಿ ಕಲಾಸಕ್ತಿ ಮೂಡಿಸಬೇಕು ಎಂದು ಕೊಂಡೆವೂರು ಶ್ರೀ ಯೋಗಾನಂದ ಸರಸ್ವತೀ ಸ್ವಾಮೀಜಿ ಹೇಳಿದರು.
ಕಟೀಲು ಶ್ರೀ ದುರ್ಗಾಮಕ್ಕಳ ಮೇಳದ ವಾರ್ಷಿಕ ಕಲಾಪರ್ವದ ಸಮಾರೋಪದಲ್ಲಿ ಮಾತನಾಡಿದರು.
ಯಕ್ಷಗಾನ ಅಕಾಡೆಮಿ ಅಧ್ಯಕ್ಷ ತಲ್ಲೂರು ಶಿವರಾಮ ಶೆಟ್ಟಿ ಮಾತನಾಡಿ, ಮಕ್ಕಳಿಗೆ ಸಂಸ್ಕೃತಿ, ಸಂಸ್ಕಾರವನ್ನು ಯಕ್ಷಗಾನದ ಮೂಲಕ ಕಲಿಸುವ ಅವಕಾಶ ಇದೆ ಎಂದರು.
ಯಕ್ಷಗಾನ ವಿದ್ವಾಂಸ ಕೆ.ಎಲ್.ಕುಂಡಂತಾಯ ಅವರಿಗೆ ಕಟೀಲು ಸದಾನಂದ ಆಸ್ರಣ್ಣ ಪ್ರಶಸ್ತಿ ಹಾಗೂ ಹಿಮ್ಮೇಳ ವಾದಕ ಮಣಿಮುಂಡ ಸುಬ್ರಹ್ಮಣ್ಯ ಶಾಸ್ತ್ರಿ ಅವರಿಗೆ ಕಟೀಲು ಕೃಷ್ಣ ಆಸ್ರಣ್ಣ ಪ್ರಶಸ್ತಿ ನೀಡಲಾಯಿತು.
ಕಟೀಲಿನ ಅರ್ಚಕರಾದ ವೆಂಕಟರಮಣ ಆಸ್ರಣ್ಣ, ಅನಂತ ಆಸ್ರಣ್ಣ, ಕಮಲಾದೇವೀಪ್ರಸಾದ ಆಸ್ರಣ್ಣ, ಅಖಿಲ ಕರ್ನಾಟಕ ಬ್ರಾಹ್ಮಣ ಸವಾಜ ಸಂಟನೆಯ ಸುಬ್ರಹ್ಮಣ್ಯ ಪ್ರಸಾದ್, ವಕೀಲ ಪಿ.ಎಸ್.ರಾಜಗೋಪಾಲ್, ಉದ್ಯಮಿ ಪ್ರದ್ಯುಮ್ನ ರಾವ್, ಲೋಕಯ್ಯ ಸಾಲ್ಯಾನ್, ಗುರುರಾಜ ಮಲ್ಲಿಗೆಯಂಗಡಿ, ಕಟೀಲು ಮೇಳಗಳ ಸಂಚಾಲಕ ಕಲ್ಲಾಡಿ ದೇವೀಪ್ರಸಾದ ಶೆಟ್ಟಿ, ವಾಜಿ ಸಚಿವ ಅಭಯಚಂದ್ರ ಜೈನ್, ಸಿಎ ಚಂದ್ರಶೇಖರ ಶೆಟ್ಟಿ, ರಾಧಾಕೃಷ್ಣ ನಾಯಕ್, ನಿತಿನ್ ಹೆಗ್ಡೆ ಎಕ್ಕಾರು, ಸೀತಾರಾಮ ಶೆಟ್ಟಿ, ಕೊಡೆತ್ತೂರು ದಿವಾಕರ ಶೆಟ್ಟಿ, ಕುಕ್ಕುಂದೂರು ಚಂದ್ರಶೇಖರ ಶೆಟ್ಟಿ, ಶ್ರೀಧರ ಶೆಟ್ಟಿ ಪುಳಿಂಚ, ಅಲಂಗಾರು ದೇಗುಲದ ಸುಬ್ರಹ್ಮಣ್ಯ ಭಟ್, ಕಟೀಲು ಕಾಲೇಜಿನ ಕುಸುವಾವತಿ, ಮುಖ್ಯಶಿಕ್ಷಕಿ ಸರೋಜಿನಿ ಮತ್ತಿತರರಿದ್ದರು.
ದುರ್ಗಾ ಮಕ್ಕಳ ಮೇಳದ ಶ್ರೀಹರಿನಾರಾಯಣದಾಸ ಆಸ್ರಣ್ಣ ಸ್ವಾಗತಿಸಿದರು. ವಾಸುದೇವ ಶೆಣೈ ನಿರೂಪಿಸಿದರು. ಪಶುಪತಿ ಶಾಸ್ತ್ರಿ ವಂದಿಸಿದರು.