

ವಿಜಯವಾಣಿ ಸುದ್ದಿಜಾಲ ಪಡುಬಿದ್ರಿ
ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನದ ಪ್ರತಿಷ್ಠಾಪನಾ ಬ್ರಹ್ಮಕಲಶೋತ್ಸವಕ್ಕೆ ಋತ್ವಿಜರ ಸ್ವಾಗತ ಹಾಗೂ ದೇವತಾ ಪ್ರಾರ್ಥನೆಯೊಂದಿಗೆ ಮಂಗಳವಾರ ಚಾಲನೆ ನೀಡಲಾಯಿತು.
ಶ್ರೀ ಹೊಸ ಮಾರಿಗುಡಿ ದೇವಸ್ಥಾನ ಅಭಿವೃದ್ಧಿ ಸಮಿತಿ, ಬ್ರಹ್ಮಕಲಶೋತ್ಸವ ಸಮಿತಿ, ಅಭಿವೃದ್ಧಿ ಸಮಿತಿ ವ್ಯವಸ್ಥಾಪನಾ ಸಮಿತಿ ನೇತೃತ್ವದಲ್ಲಿ ಋತ್ವಿಜರನ್ನು ಸ್ವಾಗತಿಸಿ, ಬರಮಾಡಿಕೊಳ್ಳಲಾಯಿತು. ಬಳಿಕ ಕೊರಂಗ್ರಪಾಡಿ ಕೆ.ಜಿ.ರಾಘವೇಂದ್ರ ತಂತ್ರಿಗಳ ಮಾರ್ಗದರ್ಶನದಲ್ಲಿ, ಕ್ಷೇತ್ರದ ಪ್ರಧಾನ ತಂತ್ರಿ ಕೊರಂಗ್ರಪಾಡಿ ಕೆ.ಪಿ.ಕುಮಾರ ಗುರು ತಂತ್ರಿಗಳ ನೇತೃತ್ವದಲ್ಲಿ, ಪ್ರಧಾನ ಅರ್ಚಕ ಕಲ್ಯ ಶ್ರೀನಿವಾಸ ತಂತ್ರಿಗಳ ಸಹಯೋಗದೊಂದಿಗೆ ಮಾರಿಯಮ್ಮ ಮತ್ತು ಉಚ್ಚಂಗಿ ದೇವಿಯ ಸನ್ನಿಧಾನದಲ್ಲಿ ಸಾಮೂಹಿಕ ಪ್ರಾರ್ಥನೆ ಸಲ್ಲಿಸಿ ಧಾರ್ಮಿಕ ಕಾರ್ಯಕ್ರಮಗಳಿಗೆ ಚಾಲನೆ ನೀಡಲಾಯಿತು.
ಶ್ರೀ ಹೊಸ ಮಾರಿಗುಡಿ ದೇವಸ್ಥಾನ ಅಭಿವೃದ್ಧಿ ಸಮಿತಿ ಅಧ್ಯಕ್ಷ ಕೆ.ವಾಸುದೇವ ಶೆಟ್ಟಿ, ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷ ಡಾ.ಕೆ.ಪ್ರಕಾಶ್ ಶೆಟ್ಟಿ, ಅಭಿವೃದ್ಧಿ ಸಮಿತಿ ಕಾರ್ಯಾಧ್ಯಕ್ಷ ಗುರ್ಮೆ ಸುರೇಶ್ ಶೆಟ್ಟಿ, ಗೌರವಾಧ್ಯಕ್ಷ ರವಿಸುಂದರ್ ಶೆಟ್ಟಿ, ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ನಡಿಕೆರೆ ರತ್ನಾಕರ ಶೆಟ್ಟಿ, ಅಭಿವೃದ್ಧಿ ಸಮಿತಿ ಗೌರವಾಧ್ಯಕ್ಷರಾದ ಸುಧಾಕರ ಹೆಗ್ಡೆ ಮೂಳೂರು, ಅನಿಲ್ ಬಲ್ಲಾಳ್, ಲಾಲಾಜಿ ಆರ್.ಮೆಂಡನ್, ನವದುರ್ಗಾ ಲೇಖನ ಯಜ್ಞ ಸಮಿತಿ ಅಧ್ಯಕ್ಷ ಕೆ.ರಘುಪತಿ ಭಟ್, ಕಾರ್ಯನಿರ್ವಹಣಾಧಿಕಾರಿ ರವಿಕಿರಣ್, ಉಪಾಧ್ಯಕ್ಷರಾದ ಕಾಪು ದಿವಾಕರ ಶೆಟ್ಟಿ, ಮಾಧವ ಆರ್.ಪಾಲನ್, ದೇವಿಪ್ರಸಾದ್ ಶೆಟ್ಟಿ ಬೆಳಪು, ಗಂಗಾಧರ ಸುವರ್ಣ, ಪ್ರಧಾನ ಕಾರ್ಯದರ್ಶಿ ರಮೇಶ್ ಹೆಗ್ಡೆ ಕಲ್ಯ, ದಾನಿ ತೋನ್ಸೆ ಆನಂದ ಎಂ.ಶೆಟ್ಟಿ ದಂಪತಿ, ಬ್ರಹ್ಮಕಲಶೋತ್ಸವ ಸಮಿತಿ ಕಾರ್ಯಾಧ್ಯಕ್ಷರಾದ ಉದಯ್ ಸುಂದರ್ ಶೆಟ್ಟಿ, ಭಗವಾನ್ದಾಸ್ ಶೆಟ್ಟಿಗಾರ್, ಯೋಗೀಶ್ ಶೆಟ್ಟಿ, ಕಾರ್ಯದರ್ಶಿ ಸುಹಾಸ್ ಹೆಗ್ಡೆ ನಂದಳಿಕೆ, ಜತೆ ಕಾರ್ಯದರ್ಶಿ ಅರುಣ್ ಶೆಟ್ಟಿ ಪಾದೂರು, ಕೋಶಾಧಿಕಾರಿ ಸುದೇಶ್ ರೈ, ಮಹಿಳಾ ವಿಭಾಗದ ಅಧ್ಯಕ್ಷೆ ಬೀನಾ ವಿ.ಶೆಟ್ಟಿ, ಸಂತೋಷ್ ಶೆಟ್ಟಿ ಇನ್ನಾ ಕುರ್ಕಿಲ್ ಬೆಟ್ಟು ಮತ್ತಿತರರು ಉಪಸ್ಥಿತರಿದ್ದರು.
ಋತ್ವಿಗ್ವರಣ, ವಿಶ್ವಕರ್ಮ ಪೂಜೆ, ಗರ್ಭಗೃಹ ಪರಿಗ್ರಹ, ಸಾಮೂಹಿಕ ಫಲನ್ಯಾಸ, ಆದ್ಯಶುದ್ಧಿ, ಗೌರ್ಯಾದಿ ಮಾತೃಕಾ ಪೂಜನಂ, ನಾಂದಿ ಸಮಾರಾಧನಂ, 24 ಕಾಯಿ ಗಣಪತಿ ಯಾಗ, ತೋರಣ ಮುಹೂರ್ತ, ದಕ್ಷಿಣಾಮೂರ್ತಿ ಯಾಗ, ಶಾರೀರಿಕ ಶುದ್ಯಂಗ ಬ್ರಹ್ಮಕೂರ್ಚಾ ಹೋಮ, ವೇದವ್ಯಾಸ ಮಂತ್ರ ಯಾಗ, ಸಪ್ತಶ್ರೀ ಪೂಜನಂ, ಪೂರ್ಣಮಾನ ನವಕುಂಡ ನವಗೃಹ ಹೋಮ, ಮಾಂಗಲಿಕ ಕಂಕಣ ಬಂಧನಂ, ನಾಮತ್ರಯ ಮಂತ್ರ ಹೋಮ, ವೇದ ಪಾರಾಯಣಾರಂಭ, ಮಾರ್ಕಂಡೇಯ ಪುರಾಣಾರಂಭ, ಶ್ರೀಮದ್ ಭಾಗವತ ಪಾರಾಯಣಾರಂಭ, ಶ್ರೀಮದ್ ದೇವಿ ಭಾಗವತಾ ಪಾರಾಯಣಾರಂಭ, ಸುಂದರ ಕಾಂಡ ಪಾರಾಯಣಾರಂಭ, ಕೂಪಶಾಂತಿ ಮತ್ತಿತರ ಧಾರ್ಮಿಕ ಕಾರ್ಯಕ್ರಮಗಳು ಸಂಪನ್ನಗೊಂಡವು.