ಕವಲೂರು: ಗ್ರಾಮದಲ್ಲಿ ಶ್ರೀ ದುರ್ಗಾದೇವಿ ಹಾಗೂ ಪಾರ್ವತಿ ಪರಮೇಶ್ವರ ಜಾತ್ರೆ ಅಂಗವಾಗಿ ಅಡ್ಡ ಪಲ್ಲಕ್ಕಿ ಮೆರವಣಿಗೆ ಗ್ರಾಮದ ಪ್ರಮುಖ ಬೀದಿಗಳಲ್ಲಿ ಮಂಗಳವಾರ ಅದ್ದೂರಿಯಾಗಿ ಜರುಗಿತು.

ದೇವಸ್ಥಾನವನ್ನು ಹೂ, ವಿದ್ಯುತ್ ದೀಪಗಳಿಂದ ಅಲಂಕರಿಸಲಾಗಿತ್ತು. ಬೆಳಗ್ಗೆ ದೇವರಿಗೆ ವಿಶೇಷ ಪೂಜೆ ಸಲ್ಲಿಸಲಾಯಿತು. ನಂತರ ಹೂಗಳಿಂದ ಅಲಂಕರಿಸಿದ್ದ ಅಡ್ಡ ಪಲ್ಲಕ್ಕಿಯಲ್ಲಿ ಶ್ರೀ ದುರ್ಗಾದೇವಿ ಹಾಗೂ ಪಾರ್ವತಿದೇವಿ ಮೂರ್ತಿಯನ್ನು ಇರಿಸಿ ದೇವಸ್ಥಾನದಿಂದ ಪ್ರಾರಂಭಿಸಿ ಗ್ರಾಮದ ಬೀದಿಗಳಲ್ಲಿ ಮೆರವಣಗೆ ಮಾಡಲಾಯಿತು.
ಮಹಿಳೆಯರ ಕಳಸ, ಸಕಲ ವಾದ್ಯಮೇಳಗಳು ಪಾಲ್ಗೊಂಡಿದ್ದವು. ನಂತರ ಅಗ್ನಿ ಹಾಯುವ ಕಾರ್ಯಕ್ರಮ ಮತ್ತು ದಾಸೋಹ ಸೇವೆ ನಡೆಯಿತು.