More

    ವಿದ್ಯಾರ್ಥಿಗಳಿಗೆ ಗುಣಮಟ್ಟ ಆಹಾರ ಪೂರೈಸಿ

    ಅಳವಂಡಿ: ಸಮೀಪದ ಕವಲೂರು ಗ್ರಾಮದ ಶ್ರೀಮತಿ ಗಿರಿಯಮ್ಮ ಪರಪ್ಪ ಹೆಬ್ಬಾಳ ಸರ್ಕಾರಿ ಪ್ರೌಢಶಾಲೆಗೆ ಜಿಲ್ಲಾ ಪಂಚಾಯಿತಿ ಅಕ್ಷರ ದಾಸೋಹದ ಶಿಕ್ಷಣಾಧಿಕಾರಿ ಎ.ಅನಿತಾ ಹಾಗೂ ತಾಪಂ ಅಕ್ಷರ ದಾಸೋಹದ ಸಹಾಯಕ ನಿರ್ದೇಶಕ ಎಚ್.ಹನುಮಂತಪ್ಪ ಶುಕ್ರವಾರ ಭೇಟಿ ನೀಡಿದರು.

    ಇತ್ತೀಚೆಗೆ ಗ್ರಾಮಸ್ಥರು ಶಾಲೆಗಳ ಸಮಸ್ಯೆಗಳನ್ನು ಸರಿಪಡಿಸಲು ಆಗ್ರಹಿಸಿ ಪ್ರತಿಭಟಿಸಿದ್ದರು. ಈ ಹಿನ್ನೆಲೆ ಅಧಿಕಾರಿಗಳು ಶಾಲೆಗೆ ಭೇಟಿ ನೀಡಿ ಮಾಹಿತಿ ಕಲೆಹಾಕಿದರು.

    ಪ್ರೌಢಶಾಲೆಯ ಮುಖ್ಯಶಿಕ್ಷಕ ವರ್ತನೆಗೆ ಆಕ್ರೋಶ

    ಪ್ರೌಢಶಾಲೆಯಲ್ಲಿ ಮುಖ್ಯ ಶಿಕ್ಷಕರ ವರ್ತನೆಯಿಂದ ವಿದ್ಯಾರ್ಥಿಗಳು ಬೇಸತ್ತು ಹೋಗಿದ್ದಾರೆ. ಅಲ್ಲದೆ ಶಾಲೆಯಲ್ಲಿ ಶೌಚಗೃಹ, ಬಿಸಿಯೂಟ, ಶುದ್ಧ ಕುಡಿಯುವ ನೀರಿನ ವ್ಯವಸ್ಥೆ ಸಮರ್ಪಕವಾಗಿಲ್ಲ. ಹೀಗಾಗಿ ವಿದ್ಯಾರ್ಥಿಗಳು ಪ್ರತಿನಿತ್ಯ ಸಮಸ್ಯೆಯನ್ನು ಎದುರಿಸುವಂತಾಗಿದೆ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದರು.

    ಇದನ್ನೂ ಓದಿ: ನ್ಯಾಚುರಲ್ ಸ್ಕ್ರಬ್ ‘ಸಾಸಿವೆ’ ಈ ಸಮಸ್ಯೆಗೂ ಸಹಕಾರಿ

    ಶಾಲೆಯಲ್ಲಿನ ಅವ್ಯವಹಾರದ ಬಗ್ಗೆ ಸಮಗ್ರವಾಗಿ ತನಿಖೆ ಮಾಡಬೇಕು. ಶಾಲೆಯಲ್ಲಿ ಅವ್ಯವಸ್ಥೆಗೆ ಮೂಲ ಕಾರಣರಾದ ಮುಖ್ಯ ಶಿಕ್ಷಕರನ್ನು ವರ್ಗಾವಣೆ ಮಾಡಬೇಕು. ಎಸ್ಡಿಎಂಸಿ ಸದಸ್ಯರಿಗೆ ಹಾಗೂ ಗ್ರಾಮಸ್ಥರಿಗೆ ಶಾಲೆಯ ಸಮಸ್ಯೆ ಬಗ್ಗೆ ಸರಿಯಾಗಿ ಮಾಹಿತಿ ನೀಡುತ್ತಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು.

    ಅಧಿಕಾರಿ ಎ.ಅನಿತಾ ಅವರು ಮಾತನಾಡಿ, ವಿದ್ಯಾರ್ಥಿಗಳಿಗೆ ಬಿಸಿಯೋಜನೆಯಡಿ ಗುಣಮಟ್ಟದ ಆಹಾರವನ್ನು ನೀಡಬೇಕು. ಮುಖ್ಯ ಶಿಕ್ಷಕರು, ಅಡುಗೆ ತಯಾರಿಸುವವರು ಸಾರ್ವಜನಿಕರ ಕಡೆ ಗೌರವಯುತವಾಗಿ ನಡೆದುಕೊಳ್ಳಬೇಕು. ಶಿಕ್ಷಣದಲ್ಲಿ ಗುಣಮಟ್ಟವೇ ಮುಖ್ಯವಾಗಿರುತ್ತದೆ. ಹೆಣ್ಣು ಮಕ್ಕಳಿಗೆ ಶೌಚಗೃಹ ಇಲ್ಲದಿರುವುದು ನೋವಿನ ಸಂಗತಿಯಾಗಿದೆ. ಶಾಲೆಗೆ ಮೂಲ ಸೌಕರ್ಯ ಒದಗಿಸಲು ಮೇಲಧಿಕಾರಿಗಳಿಗೆ ಗಮನಕ್ಕೆ ತರಲಾಗುವುದು ಎಂದರು.

    ಪ್ರಮುಖರಾದ ಮುಖಂಡ ರಣದಪ್ಪ ಸುಂಕಣ್ಣವರ, ಮಲ್ಲಪ್ಪ ಹೊಸಮನಿ, ನಿಂಗಪ್ಪ ತಳಕಲ್, ಚನ್ನಪ್ಪ, ರಮಜಾನ್, ಹನುಮಂತ, ಗೋವಿಂದಪ್ಪ, ಮಹೇಶ ಸೇರಿ ಗ್ರಾಮಸ್ಥರು ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts