More

    ಕೇಂದ್ರದಿಂದಲೂ ಸಕಾರಾತ್ಮಕ ನೆರವು ದೊರಕುವಂತೆ ಒತ್ತಡ ಹಾಕೋಣ; ಬಿಜೆಪಿ ಸಂಸದ, ಸಚಿವರಿಗೆ ಡಿಕೆ ಪಾಠ!

    ಬೆಂಗಳೂರು: ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ ಎದುರಾಗಿರುವ ಸಂಕಷ್ಟ ಪರಿಸ್ಥಿತಿಯನ್ನು ಸಮರ್ಥವಾಗಿ ನಿರ್ವಹಿಸುವ ಸಂಬಂಧ ದೆಹಲಿಯಲ್ಲಿ ನಡೆಯುತ್ತಿರುವ ಕೇಂದ್ರದ ಸಚಿವರು, ಸರ್ವ ಪಕ್ಷ ಸಂಸತ್ ಸದಸ್ಯರ ಸಭೆಯಲ್ಲಿ ಡಿಸಿಎಂ ಡಿಕೆ ಶಿವಕುಮಾರ್ ಸರ್ವಪಕ್ಷಗಳ ನೆರವು ಯಾಚಿಸಿದ್ದಾರೆ.

    ಜಲ ಸಂಪನ್ಮೂಲ ಖಾತೆ ಸಚಿವರೂ ಆಗಿರುವ ಡಿ.ಕೆ.ಶಿವಕುಮಾರ್ ಅವರು ಪ್ರಸ್ತುತ ರಾಜ್ಯಕ್ಕೆ ಎದುರಾಗಿರುವ ಸಂದರ್ಭವನ್ನು ಆರಂಭದಲ್ಲಿ ಸಭೆಗೆ ವಿವರಿಸಿದರು.

    ರಾಜ್ಯದ ಹಿತಾಸಕ್ತಿ ಬಂದಾಗ ರಾಜಕಾರಣ ಮುಂದಕ್ಕೆ ಬರಬಾರದು. ಎಲ್ಲ ಸಂಸದರು, ರಾಜ್ಯ ಸಭಾ ಸದಸ್ಯರು ಒಟ್ಟಾಗಿ ನಿಂತು ರಾಜ್ಯದ ಪರವಾಗಿ ದೆಹಲಿಯಲ್ಲಿ, ಕೇಂದ್ರ ಸಚಿವರ ಎದುರು ಬೇಡಿಕೆ ಮಂಡಿಸಬೇಕು ಎಂದರು.

    ನಮ್ಮ ಅಧಿಕಾರಿಗಳು, ತಜ್ಞರು ಮತ್ತು ಕಾನೂನು ತಂಡ ಸಮರ್ಥವಾಗಿ ವಾಸ್ತವ ಪರಿಸ್ಥಿತಿಯನ್ನು ಕಾವೇರಿ ನೀರು ನಿರ್ವಹಣಾ ಮಂಡಳಿ ಸಭೆಯಲ್ಲೂ ಪ್ರಸ್ತುತ ಪಡಿಸಿದ್ದಾರೆ. ನಮಗೆ ಕೇಂದ್ರದಿಂದಲೂ ಸಕಾರಾತ್ಮಕ ನೆರವು ದೊರಕುವ ನಿಟ್ಟಿನಲ್ಲಿ ಬೇಡಿಕೆ, ಒತ್ತಡಗಳನ್ನು ಮಂಡಿಸಬೇಕು ಎಂದು ಹೇಳಿದರು.

    ನಮಗೆ ಸಮಸ್ಯೆ ಬಗೆಹರಿದು ರಾಜ್ಯದ ಹಿತಾಸಕ್ತಿ ಕಾಪಾಡಿಕೊಳ್ಳುವುದಷ್ಟೆ ಮುಖ್ಯ. ಇದಕ್ಕಾಗಿ ಎಲ್ಲರೂ ಒಟ್ಟಾಗಿ ಕೆಲಸ ಮಾಡೋಣ ಎಂದು ವಿನಂತಿಸಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts