ಲಡಾಖ್​ನ ಲೆಫ್ಟಿನೆಂಟ್ ಗವರ್ನರ್ ಆಗಿ ಕವಿಂದರ್ ಗುಪ್ತಾ ಪ್ರಮಾಣವಚನ ಸ್ವೀಕಾರ | Kavinder Gupta

Kavinder Gupta
Published on

Kavinder Gupta: ಕೇಂದ್ರಾಡಳಿತ ಪ್ರದೇಶ ಲಡಾಖ್​ನ 3ನೇ ಲೆಫ್ಟಿನೆಂಟ್ ಗವರ್ನರ್ ಆಗಿ ಇಂದು (ಜು.18) ಬಿಜೆಪಿಯ ಹಿರಿಯ ನಾಯಕ ಕವಿಂದರ್ ಗುಪ್ತಾ ಪ್ರಮಾಣ ವಚನ ಸ್ವೀಕರಿಸಿದರು.

ಲೇಹ್​ನ ರಾಜ್​ ನಿವಾಸದಲ್ಲಿ ನಡೆದ ಸಮಾರಂಭದಲ್ಲಿ ಕವಿಂದರ್ ಗುಪ್ತಾಗೆ ಲಡಾಖ್​ ಹೈಕೋರ್ಟ್​ನ ನ್ಯಾಯಾಮೂರ್ತಿ ಅರುಣ್ ಪಲ್ಲಿ ಪ್ರತಿಜ್ಞಾವಿಧಿ ಬೋಧಿಸಿದರು. ನಾಲ್ಕು ದಿನಗಳ ಹಿಂದೆ ಕವಿಂದರ್ ಗುಪ್ತಾರನ್ನು ಲಡಾಖ್​ನ ಲೆಫ್ಟಿನೆಂಟ್ ಗವರ್ನರ್ ಆಗಿ ರಾಷ್ಟ್ರಪತಿ ದ್ರೌಪದಿ ಮುರ್ಮು ನೇಮಿಸಿದ್ದರು.

ಕವಿಂದರ್ ಗುಪ್ತಾ ಜಮ್ಮು-ಕಾಶ್ಮೀರದ ಬಿಜೆಪಿಯ ಹಿರಿಯ ನಾಯಕರಾಗಿದ್ದಾರೆ. 2018ರಲ್ಲಿ ಬಿಜೆಪಿ-ಪಿಡಿಪಿ ಸಮ್ಮಿಶ್ರ ಸರ್ಕಾರದ ಅವಧಿಯಲ್ಲಿ 51 ದಿನಗಳ ಉಪಮುಖ್ಯಮಂತ್ರಿಯಾಗಿ ಸೇವೆ ಸಲ್ಲಿಸಿದ್ದರು. ಮುಫ್ತಿ ಸರ್ಕಾರಕ್ಕೆ ನೀಡಿದ್ದ ಬೆಂಬಲವನ್ನು ಬಿಜೆಪಿ ಹಿಂಪಡೆದ ಬಳಿಕ ಆ ಹುದ್ದೆಯನ್ನು ತೊರೆದಿದ್ದರು,(ಏಜೆನ್ಸೀಸ್).

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net