More

    ಕನ್ನಡ ನಾಡು ನುಡಿ ರಕ್ಷಣೆ ಪ್ರತಿಯೊಬ್ಬರ ಕರ್ತವ್ಯ, ಮಾಜಿ ಶಾಸಕ ಹಂಪಯ್ಯ ನಾಯಕ ಅಭಿಮತ

    ಕವಿತಾಳ: ಕನ್ನಡ ನಾಡು ನುಡಿ ರಕ್ಷಣೆ ಜವಾಬ್ದಾರಿಯನ್ನು ಪ್ರತಿಯೊಬ್ಬರು ನಿರ್ವಹಿಸಬೇಕಾಗಿದೆ ಎಂದು ಮಾಜಿ ಶಾಸಕ ಹಂಪಯ್ಯ ನಾಯಕ ಹೇಳಿದರು. ಪಟ್ಟಣದಲ್ಲಿ ಮಂಗಳವಾರ ಎ.ಪಿ.ಜೆ ಅಬ್ದುಲ್ ಕಲಾಂ ನವ ನಿರ್ಮಾಣ ಸಮಾಜ ಪರಿವರ್ತನೆಯ ಸಂಘದಿಂದ ಕರ್ನಾಟಕ ರಾಜ್ಯೋತ್ಸವ ಆಚರಣಾ ಕಾರ್ಯಕ್ರಮದಲ್ಲಿ ನಾಡದೇವಿಗೆ ಪೂಜೆ ಸಲ್ಲಿಸಿ ಮಾತನಾಡಿದರು.ಕರ್ನಾಟಕದಲ್ಲಿ ಕನ್ನಡ ಭಾಷೆಯ ಪ್ರಾಮುಖ್ಯತೆ ಪಡೆಯಬೇಕು. ಪ್ರತಿಯೊಬ್ಬರು ಕನ್ನಡದಲ್ಲಿಯೇ ವ್ಯವಹಾರ ಮಾಡಬೇಕು.ಕನ್ನಡ ಭಾಷೆಯನ್ನು ಉಳಿಸಿ ಬೆಳಸುವುದು ನಮ್ಮ ಆದ್ಯ ಕರ್ವ್ಯವಾಗಿದೆ ಎಂದರು.

    ಕರವೇ ಜಿಲ್ಲಾ ಅಧ್ಯಕ್ಷ (ಶಿವರಾಮೇಗೌಡ ಬಣ)ಅಶೋಕ ಜೈನ್ ಮಾತನಾಡಿ, ಕರ್ನಾಟಕದಲ್ಲಿ ಸರ್ಕಾರಿ ನೌಕರರು ಕನ್ನಡ ಉಳಿಸುವ ಪ್ರಯತ್ನ ಮಾಡಬೇಕು. ಮುಖ್ಯವಾಗಿ ಸರ್ಕಾರಿ ಕನ್ನಡ ಶಾಲೆಯ ಶಿಕ್ಷಕರು ತಮ್ಮ ಮಕ್ಕಳನ್ನು ಸರ್ಕಾರಿ ಶಾಲೆಗೆ ಸೇರಿಸಿದರೆ ಕನ್ನಡ ಅಭಿವೃದ್ಧಿಗೆ ಸಹಕಾರವಾಗುತ್ತದೆ ಎಂದರು. ನಾಡದೇವಿಯ ಭಾವಚಿತ್ರವನ್ನು ಪಟ್ಟಣದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ಮಾಡಲಾಯಿತು.

    ಜಿಪಂ ಮಾಜಿ ಸದಸ್ಯ ಕಿರಿಲಿಂಗಪ್ಪ, ಡಾ ಜಲಾಲುದ್ದಿನ್ ಲಿಂಗಸಗೂರು, ಎಂ.ಡಿ ಅಲೀಮ್, ಕೆ. ಶರಣಪ್ಪ ಗುಡದಿನ್ನಿ, ಕೆ.ಚಿನ್ನಪ್ಪ ನಕ್ಕುಂದಿ, ಅಲ್ಲಮಪ್ರಭು, ರಾಜು ಬನ್ನಿಗಿಡದ, ಮೌನೇಶ, ಹನುಮಂತ ಉಪಸ್ಥಿತರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts