ಕಾರವಾರ: ಜಿಲ್ಲಾಡಳಿತ ಜಿಲ್ಲಾ ಪಂಚಾಯಿತಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಇವರ ಸಂಯುಕ್ತ ಆಶ್ರಯದಲ್ಲಿ ಕಾಯಕ ಶರಣರ ಜಯಂತಿ ಕಾರ್ಯಕ್ರಮದ ಅಂಗವಾಗಿ ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ಕಾಯಕ ಶರಣರಾದ ಮಾದಾರ ಚೆನ್ನಯ್ಯ ಮಾದರ ಧೂಳಯ್ಯ, ಡೋಹರ ಕಕ್ಕಯ್ಯ, ಸಮಗಾರ ಹರಳಯ್ಯ ಮತ್ತು ಉರಿಲಿಂಗಪೆದ್ದಿ ಅವರ ಭಾವ ಚಿತ್ರಕ್ಕೆ ಪುಷ್ಪ ನಮನ ಸಲ್ಲಿಸುವ ಮೂಲಕ ಸೋಮವಾರ ಆಚರಿಸಲಾಯಿತು. ಶಿವಾಜಿ ಕಲಾ, ವಾಣಿಜ್ಯ ಮತ್ತು ಬಿ.ಸಿ.ಎ ಮಹಾವಿದ್ಯಾಲಯ ಬಾಡದ ನಿವೃತ್ತ ಪಾಚಾರ್ಯ ಎ.ಜಿ. ಕೆರಲೇಕರ ಕಾಯಕ ಶರಣರ ಕುರಿತು ವಿಶೇಷ ಉಪನ್ಯಾಸ ನೀಡಿದರು.
ಕಾರ್ಯಕ್ರಮದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕಿ ನಿರ್ದೇಶಕಿ ಮಂಗಲಾ ನಾಯ್ಕ, ಸರಸ್ಪತಿ ವಿದ್ಯಾಲಯ ಶಿಕ್ಷಕ ಮಹಾದೇವ ರಾಣೆ, ಸಮುದಾಯದ ಮುಖಡರು, ಕನ್ನಡ ಸಂಸ್ಕೃತಿ ಇಲಾಖೆಯ ಅಧಿಕಾರಿಗಳು, ಸಿಬ್ಬಂದಿಗಳು, ಸರಸ್ಪತಿ
ವಿದ್ಯಾಲಾಯದ ವಿದ್ಯಾರ್ಥಿಗಳು ಮತ್ತಿತರರು ಉಪಸ್ಥಿತರಿದ್ದರು.