ಶರಣರ ಜಯಂತಿಯಲ್ಲಿ ಭಾಗವಹಿಸುವುದು ಪುಣ್ಯದ ಕೆಲಸ

10 Dwd 3
Published on

ವಿಜಯವಾಣಿ ಸುದ್ದಿಜಾಲ ಧಾರವಾಡ

ಶರಣರನ್ನು ನಾವು ನೋಡಿಲ್ಲ. ಆದರೆ, ಅವರ ಜಯಂತಿಯಲ್ಲಿ ಭಾಗವಹಿಸುವುದೇ ನಮ್ಮ ಪುಣ್ಯ. ಮಹಾನ್ ಪುಣ್ಯವಂತ ಶರಣರ ಸಂದೇಶಗಳನ್ನು ಸದಾಕಾಲ ಸಾರಬೇಕು ಎಂದು ಶಾಸಕ ಎನ್.ಎಚ್. ಕೋನರಡ್ಡಿ ಹೇಳಿದರು.

ನಗರದ ಆಲೂರು ವೆಂಕಟರಾವ್ ಸಾಂಸ್ಕೃತಿಕ ಭವನದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಯೋಗದಲ್ಲಿ ಸೋಮವಾರ ಆಯೋಜಿಸಿದ್ದ ಕಾಯಕ ಶರಣರ ಜಯಂತಿ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಹುಡಾ ಅಧ್ಯಕ್ಷ ಶಾಕೀರ ಸನದಿ ಮಾತನಾಡಿ, ಶಿವಶರಣರ ಪ್ರತಿಯೊಂದು ವಚನಗಳು ಅರ್ಥಗರ್ಭಿತವಾಗಿವೆ. ಶರಣ ತತ್ವಗಳನ್ನು ಅಧ್ಯಯನ ಮಾಡಿ ಅರ್ಥ ಮಾಡಿಕೊಂಡು ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದರು.

ಕಾಯಕ ಶರಣರಾದ ಮಾದಾರ ಚನ್ನಯ್ಯ, ಮಾದಾರ ಧೂಳಯ್ಯ, ಡೋಹರ ಕಕ್ಕಯ್ಯ, ಸಮಗಾರ ಹರಳಯ್ಯ, ಉರಿಲಿಂಗ ಪೆದ್ದಿ ಕುರಿತು ಸಂಪನ್ಮೂಲ ವ್ಯಕ್ತಿಗಳು ಉಪನ್ಯಾಸ ನೀಡಿದರು.

ಅಪರ ಜಿಲ್ಲಾಽಕಾರಿ ಗೀತಾ ಸಿ.ಡಿ. ಪ್ರಾಸ್ತಾವಿಕವಾಗಿ ಮಾತನಾಡಿದರು. ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಕುಮಾರ ಬೆಕ್ಕೇರಿ ಸ್ವಾಗತಿಸಿದರು. ಆರತಿ ದೇವಶಿಕಾಮಣಿ ವಂದಿಸಿದರು.

ಸಮಾಜದ ಮುಖಂಡರಾದ ಡಾ. ನೀಲಕಂಠ ಮಿಶ್ರಿಕೋಟಿ, ಲಕ್ಷ÷್ಮಣ ಬಕ್ಕಾಯಿ, ಮಹೇಶ ಹುಲ್ಲಣ್ಣವರ, ಅಣ್ಣಪ್ಪ ಕರಾಠೆ, ಯಲ್ಲಪ್ಪ ಸವಣೂರ ಹಾಗೂ ಕಾಯಕ ಸಮಾಜದ ಪದಾಽಕಾರಿಗಳು ಭಾಗವಹಿಸಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net