More

  ಗಡಿನಾಡ ಹೋರಾಟಗಾರರ ಸ್ಮರಣೆ ಕರ್ತವ್ಯ : ಸುಕುಮಾರ ಕುದ್ರೆಪ್ಪಾಡಿ

  ವಿಜಯವಾಣಿ ಸುದ್ದಿಜಾಲ ಬದಿಯಡ್ಕ

  ಗಡಿನಾಡ ಸಾಹಿತ್ಯ ಸಾಂಸ್ಕೃತಿಕ ಅಕಾಡೆಮಿ ಕಾಸರಗೋಡು ಮತ್ತು ಕಯ್ಯರರ ಕುಟುಂಬ ಜಂಟಿ ಆಶ್ರಯದಲ್ಲಿ ಕಯ್ಯರರ ಕವಿತಾ ಕುಟೀರ ಉಞ್ಞಕ್ಕ ನಿವಾಸದಲ್ಲಿ ಕಯ್ಯರರ 109ನೇ ಜನ್ಮ ದಿನಾಚರಣೆ ಶನಿವಾರ ನಡೆಯಿತು. ಗಡಿನಾಡ ಸಾಹಿತ್ಯ ಸಾಂಸ್ಕೃತಿಕ ಅಕಾಡೆಮಿ ಅಧ್ಯಕ್ಷ ಚನಿಯಪ್ಪ ನಾಯ್ಕ ದೀಪ ಬೆಳಗಿಸಿ ಪುಷ್ಪಾರ್ಚನೆಗೈದರು.

  ಕಾಸರಗೋಡು ಬ್ಲಾಕ್ ಪಂಚಾಯಿತಿ ಸದಸ್ಯ ಸುಕುಮಾರ್ ಕುದ್ರೆಪ್ಪಾಡಿ ಮಾತನಾಡಿ, ನಾಡೋಜ ಡಾ.ಕಯ್ಯರ ಕಿಞ್ಞಣ್ಣ ರೈ ಅವರ ಬದುಕು ಹಾಗೂ ಬರಹ ಸದಾ ಸ್ಮರಣೀಯ. ರಾಜಕೀಯ, ಸಾಮಾಜಿಕ, ಸಾಹಿತ್ಯ, ಶೈಕ್ಷಣಿಕ ಕ್ಷೇತ್ರದಲ್ಲಿ ಅವರು ತೋರಿದ ಅಸಾಮಾನ್ಯ ಸಾಧನೆ ಯುವಜನರಿಗೆ ಮಾದರಿಯಾಗಬೇಕು. ಕಯ್ಯರರ ಬಗ್ಗೆ, ಅವರ ರೀತಿ ನೀತಿಗಳ ಬಗ್ಗೆ ಮಾಹಿತಿ ನೀಡುವ ಮೂಲಕ ಕನ್ನಡಿಗರು ಕನ್ನಡಕ್ಕಾಗಿ ಹೋರಾಡಿದ ಧೀಮಂತ ವ್ಯಕ್ತಿತ್ವವನ್ನು ಸದಾ ಸ್ಮರಿಸಬೇಕು. ಅವರು ತೋರಿದ ಹಾದಿಯಲ್ಲಿ ಮುನ್ನಡೆಯಬೇಕು ಎಂದು ತಿಳಿಸಿದರು.

  ಬದಿಯಡ್ಕ ಗ್ರಾಪಂ ಮಾಜಿ ಅಧ್ಯಕ್ಷ ಮಾಹಿನ್ ಕೇಳೋಟ್ ಮಾತನಾಡಿ, ಮುಚ್ಚಿರುವ ಕಯ್ಯರರ ಹೆಸರಲ್ಲಿರುವ ಬದಿಯಡ್ಕ ಪಂಚಾಯಿತಿ ಗ್ರಂಥಾಲಯವನ್ನು ತೆರೆದು, ಇನ್ನಷ್ಟು ಸುಸಜ್ಜಿತಗೊಳಿಸಿ ಅದರ ಪ್ರಯೋಜನ ಓದುಗರಿಗೆ ಲಭ್ಯವಾಗುವಂತೆ ಮಾಡಬೇಕೆಂದು ಪಂಚಾಯಿತಿ ಅಧ್ಯಕ್ಷರನ್ನು ಒತ್ತಾಯಿಸುವುದಾಗಿ ಹೇಳಿದರು.

  ನಿವೃತ್ತ ಪ್ರಾಂಶುಪಾಲ, ಸಂಘಟಕ ಪ್ರೊ.ಎ.ಶ್ರೀನಾಥ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಬದಿಯಡ್ಕ ಗ್ರಾಪಂ ಸದಸ್ಯ ಶ್ಯಾಂ ಪ್ರಸಾದ್ ಮಾನ್ಯ, ಕುಂಬ್ಡಾಜೆ ಗ್ರಾಪಂ ಸದಸ್ಯ ಹರೀಶ್ ಗೋಸಾಡ, ತುಳು ಸಂಘಟಕ ಕೃಷ್ಣ ಡಿ ಬೆಳಿಂಜ, ನಿರಂಜನ್ ರೈ ಪೆರಡಾಲ, ಬದಿಯಡ್ಕ ರೋಟರಿ ಕ್ಲಬ್‌ನ ಪ್ರತಿಕ್ ಆಳ್ವ, ಕಯ್ಯರರ ಕುಟುಂಬದ ಪ್ರದೀಪ್ ರೈ, ಆರತಿ ಮುಂತಾದವರು ಉಪಸ್ಥಿತರಿದ್ದರು.

  ಚಂದ್ರಹಾಸ ಮಾಸ್ತರ್, ವಸಂತ ಬಾರಡ್ಕ ಕಯ್ಯರರು ರಚಿಸಿದ ಕವನ ವಾಚಿಸಿದರು. ಧನರಾಜ್ ಪೆರ್ಲ ಸ್ವಾಗತಿಸಿ, ಸುಶ್ಮಿತಾ ಗೋಸಾಡ ವಂದಿಸಿದರು. ಗಡಿನಾಡ ಸಾಹಿತ್ಯ ಸಾಂಸ್ಕೃತಿಕ ಅಕಾಡೆಮಿಯ ಪ್ರಧಾನ ಕಾರ್ಯದರ್ಶಿ ಅಖಿಲೇಶ್ ನಗುಮುಗಂ ಕಾರ್ಯಕ್ರಮ ನಿರೂಪಿಸಿದರು.

  See also  ನಾಲ್ವರು ಕಾಂಗ್ರೆಸ್ ಮುಖಂಡರ ಅಮಾನತು

  ಸಿನಿಮಾ

  ಲೈಫ್‌ಸ್ಟೈಲ್

  ಟೆಕ್ನಾಲಜಿ

  Latest Posts