More

  ವಯನಾಡಿನಿಂದ ಪ್ರಿಯಾಂಕಾ ಗಾಂಧಿ ಸ್ಪರ್ಧೆ; ಪಕ್ಷದ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್​ ಹೇಳಿದ್ದೇನು?

  ಲೋಕಸಭೆ ಚುನಾವಣೆಯಲ್ಲಿ ಕೇರಳದ ವಯನಾಡು ಮತ್ತು ಉತ್ತರಪ್ರದೇಶದ ರಾಯಬರೇಲಿ ಕ್ಷೇತ್ರದಿಂದ ರಾಹುಲ್​ ಗಾಂಧಿ ಗೆಲುವು ಸಾಧಿಸಿದ್ದರು. ಈಗ ರಾಹುಲ್ ವಯನಾಡು ಕ್ಷೇತ್ರವನ್ನು ತೊರೆಯಲು ನಿರ್ಧರಿಸಿದ್ದು, ರಾಯಬರೇಲಿಯ ಸಂಸದರಾಗಿ ಉಳಿಯಲಿದ್ದಾರೆ. ವಯನಾಡಿನಿಂದ ಉಪಚುನಾವಣೆಯಲ್ಲಿ ಪ್ರಿಯಾಂಕಾ ಗಾಂಧಿ ಅವರನ್ನು ಕಣಕ್ಕಿಳಿಸಲು ಕಾಂಗ್ರೆಸ್ ನಿರ್ಧರಿಸಿದೆ. ಇದರೊಂದಿಗೆ ಗಾಂಧಿ ಕುಟುಂಬದ ಮತ್ತೊಬ್ಬರು ದಕ್ಷಿಣದಿಂದ ಚುನಾವಣಾ ರಾಜಕೀಯಕ್ಕೆ ಬರಲಿದ್ದಾರೆ. ಇದೇ ವೇಳೆ ಕಾಂಗ್ರೆಸ್ ಪಕ್ಷದ ಪ್ರಧಾನ ಕಾರ್ಯದರ್ಶಿ (ಸಂಘಟನೆ) ಕೆ.ಸಿ.ವೇಣುಗೋಪಾಲ್ ಅವರು ಪಕ್ಷದ ಈ ನಿರ್ಧಾರಕ್ಕೆ ಕಾರಣ ಏನೆಂಬುದನ್ನು ತಿಳಿಸಿದ್ದಾರೆ.

  ಇದನ್ನು ಓದಿ: ವಿದ್ಯಾರ್ಥಿಗಳ ಭವಿಷ್ಯಕ್ಕೆ ಧಕ್ಕೆಯಾದರು ಪ್ರಧಾನಿ ಮೋದಿ ಮೌನವೇಕೆ?; ರಾಹುಲ್​ ಗಾಂಧಿ ಕಿಡಿ

  ರಾಯಬರೇಲಿ ಇಂದಿರಾ ಗಾಂಧಿ ಮತ್ತು ಸೋನಿಯಾ ಗಾಂಧಿಯವರ ಸ್ಥಾನ. ಇದು ನೆಹರೂ-ಗಾಂಧಿ ಕುಟುಂಬದ ಭದ್ರಕೋಟೆಯಾಗಿದ್ದು, ಈ ಸ್ಥಾನ ಪಕ್ಷದ ಆಯ್ಕೆಯಾಗಿದೆ. ಕೇರಳ ಮತ್ತು ವಯನಾಡಿನ ಜನರು ರಾಹುಲ್​ರಂತೆ ಪ್ರಿಯಾಂಕಾ ಗಾಂಧಿ ಅವರನ್ನು ಇಷ್ಟಪಡುತ್ತಾರೆ. ಅಲ್ಲದೆ ರಾಹುಲ್ ಗಾಂಧಿಯನ್ನು ಬೆಂಬಲಿಸಿದಂತೆಯೇ ಜನರು ಪ್ರಿಯಾಂಕಾ ಗಾಂಧಿಯನ್ನೂ ಬೆಂಬಲಿಸುತ್ತಾರೆ ಎಂದು ಅವರು ಹೇಳಿದರು.

  ವಯನಾಡಿನ ಜನರು ರಾಹುಲ್​ ಗಾಂಧಿಯನ್ನು ಮಿಸ್​​ ಮಾಡಿಕೊಳ್ಳಲು ಬಿಡುವುದಿಲ್ಲ. ವಯನಾಡಿನಿಂದ ಸ್ಪರ್ಧಿಸುತ್ತಿರುವುದು ನನಗೆ ತುಂಬಾ ಸಂತೋಷವಾಗಿದೆ. ಕಷ್ಟಪಟ್ಟು ಕೆಲಸ ಮಾಡುತ್ತೇನೆ. ಉತ್ತಮ ಪ್ರತಿನಿಧಿಯಾಗಲು ನನ್ನ ಕೈಲಾದ ಪ್ರಯತ್ನ ಮಾಡುತ್ತೇನೆ ಎಂದು ಪ್ರಿಯಾಂಕಾ ಗಾಂಧಿ ಹೇಳಿದರು. (ಏಜೆನ್ಸೀಸ್​​)

  ಒಂದು ಸಣ್ಣ ತಪ್ಪು ಸರ್ಕಾರವನ್ನು ಪತನಗೊಳಿಸಬಹುದು ಎಂದಿದ್ದೇಕೆ ಕಾಂಗ್ರೆಸ್​​ ನಾಯಕ ರಾಹುಲ್​ ಗಾಂಧಿ

  See also  ವಯನಾಡಿನಲ್ಲಿ ಕರ್ನಾಟಕ ಮೂಲದ ಇಬ್ಬರು ನಕ್ಸಲರ ಬಂಧನ

  ಸಿನಿಮಾ

  ಲೈಫ್‌ಸ್ಟೈಲ್

  ಟೆಕ್ನಾಲಜಿ

  Latest Posts