ಕೈಗಾರಿಕಾ ಸಂಸ್ಥೆಗಳ ಸಮಸ್ಯೆ ನಿವಾರಣೆಗೆ ಕೆಸಿಸಿಐ ಸಹಕಾರ : ಕೆಸಿಸಿಐ ಅಧ್ಯಕ್ಷ ಆನಂದ ಪೈ ಭರವಸೆ

mng-19oct-kcci
Published on


ಮಂಗಳೂರು : ಜಿಲ್ಲೆಯಲ್ಲಿ ಕಾರ್ಯಾಚರಿಸುತ್ತಿರುವ ವಿವಿಧ ವಾಣಿಜ್ಯ, ಕ್ಯೆಗಾರಿಕಾ ಸಂಸ್ಥೆಗಳು ತಮ್ಮ ದೈನಂದಿನ ಆಡಳಿತ ಮತ್ತು ಮಾರಾಟ ವ್ಯವಹಾರದಲ್ಲಿ ಕೆಲವು ಮೂಲಭೂತ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಸರಕು ಮತ್ತು ಸೇವಾ ತೆರಿಗೆ, ಆದಾಯ ತೆರಿಗೆ ಹಾಗೂ ಸರ್ಕಾರಿ ನಿಯಮ ಮತ್ತು ನಿಬಂಧನೆಗಳಲ್ಲಿ ಕಂಡು ಬರುವ ಸಮಸ್ಯೆಗಳನ್ನು ಬಗೆಹರಿಸಲು ಕೆನರಾ ವಾಣಿಜ್ಯ ಮತ್ತು ಕ್ಯೆಗಾರಿಕಾ ಸಂಸ್ಥೆ (ಕೆಸಿಸಿಐ) ಸಹಕರಿಸುತ್ತಿದೆ ಎಂದು ಸಂಸ್ಥೆಯ ನೂತನ ಅಧ್ಯಕ್ಷ ಆನಂದ ಪೈ ಹೇಳಿದರು.
ರೋಟರಿ ಮಂಗಳೂರು ಸೆಂಟ್ರಲ್ ಸಂಸ್ಥೆಯ ವತಿಯಿಂದ ನಗರದ ಹೋಟೆಲ್ ಮೋತಿಮಹಲ್ ಸಭಾಂಗಣದಲ್ಲಿ ಜರಗಿದ ಕಾರ್ಯಕ್ರಮದಲ್ಲಿ ಅವರು ಆರ್ಥಿಕ ಮತ್ತು ಸಮುದಾಯ ಬೆಳವಣಿಗೆ ಬಗ್ಗೆ ಅತಿಥಿ ಉಪನ್ಯಾಸ ನೀಡಿದರು.
ಸರಕು ಸಾರಿಗೆ, ವಿಮಾನಯಾನ, ರೈಲ್ವೆ ಯಾನ ಮತ್ತು ಬಂದರು ಅಭಿವೃದ್ದಿಗೆ ಕೆಸಿಸಿಐ ಶ್ರಮಿಸುತ್ತಿದೆ ಎಂದು ಅವರು ಹೇಳಿದರು.
ಇದೇ ಸಂದರ್ಭ ಕೆಸಿಸಿಐ ಅಧ್ಯಕ್ಷ ಆನಂದ ಪೈ ಅವರನ್ನು ರೋಟರಿ ಸಂಸ್ಥೆಯ ಪರವಾಗಿ ಸನ್ಮಾನಿಸಲಾಯಿತು.
ಭಾರತ್ ಲಾಜಿಸ್ಟಿಕ್ಸ್ ಸಂಸ್ಥೆಯ ಆಡಳಿತ ನಿರ್ದೇಶಕ ಸತೀಶ್ ಪೈ, ಕೆನರಾ ವರ್ಕ್‌ಶಾಪ್ ಸಂಸ್ಥೆಯ ಆಡಳಿತ ನಿರ್ದೇಶಕ ಪ್ರೇವನಾಥ ಕುಡ್ವ, ಲೆಕ್ಕ ಪರಿಶೋಧಕ ಎಸ್.ಎಸ್. ನಾಯಕ್, ರೋಟರಿ ಸಂಸ್ಥೆಯ ಮಾಜಿ ಆಧ್ಯಕ್ಷ ರಾಜೇಶ್ ಶೆಟ್ಟಿ ಉಪಸ್ಥಿತರಿದ್ದರು. ರೋಟರಿ ಮಂಗಳೂರು ಸೆಂಟ್ರಲ್ ಅಧ್ಯಕ್ಷ ಬ್ರಿಯನ್ ಪಿಂಟೊ ಸ್ವಾಗತಿಸಿದರು. ಕಾರ್ಯದರ್ಶಿ ರಾಜೇಶ್ ಸೀತಾರಾಮ ವರದಿ ಮಂಡಿಸಿದರು. ರೋಟರಿ ಸಂಸ್ಥೆಯ ಮಾಜಿ ಗವರ್ನರ್ ಡಾ.ದೇವದಾಸ್ ರೈ ವಂದಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net