ಇಂದು ಸಿಇಟಿ ಫಲಿತಾಂಶ ಪ್ರಕಟ

ಬೆಂಗಳೂರು: ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ನಡೆಸಿದ್ದ 2019-20 ಸಾಲಿನ ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ) ಫಲಿತಾಂಶ ಶನಿವಾರ ಪ್ರಕಟವಾಗಲಿದೆ.

ಇಂಜಿನಿಯರಿಂಗ್ ಸೇರಿ ವಿವಿಧ ವೃತ್ತಿಪರ ಕೋರ್ಸ್​ಗಳ ಪ್ರವೇಶಕ್ಕಾಗಿ ಕೆಇಎ ಏ. 29 ಮತ್ತು 30 ರಂದು ಸಾಮಾನ್ಯ ಪ್ರವೇಶ ಪರೀಕ್ಷೆ ನಡೆಸಿತ್ತು. 1,94,311 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದರು. ಕೆಇಎ ಪ್ರಾಧಿಕಾರ ಸಭಾಂಗಣದಲ್ಲಿ ಬೆಳಗ್ಗೆ 10.50ಕ್ಕೆ ಸಚಿವ ಜಿ.ಟಿ. ದೇವೇಗೌಡ ಫಲಿತಾಂಶ ಬಿಡುಗಡೆ ಮಾಡಲಿದ್ದಾರೆ.

ಮಧ್ಯಾಹ್ನ 1 ಗಂಟೆಯಿಂದ ಪ್ರಾಧಿಕಾರದ ವೆಬ್​ಸೈಟ್ http://kea.kar.nic.inನಲ್ಲಿ ಫಲಿತಾಂಶ ವೀಕ್ಷಿಸಬಹುದು. http/cet.kar.nic.in., http://karresults.nic.in ವೆಬ್​ಸೈಟ್​ಗಳಲ್ಲೂ ಫಲಿತಾಂಶ ಸಿಗಲಿದೆ. ಅರ್ಹ ಅಭ್ಯರ್ಥಿಗಳು ಕರ್ನಾಟಕದ ಕಾಲೇಜುಗಳಲ್ಲಿ ಇಂಜಿನಿಯರಿಂಗ್, ಮೆಡಿಕಲ್, ಡೆಂಟಲ್, ಹೋಮಿಯೋಪಥಿ, ಆಯುರ್ವೆದ, ಯೋಗ, ಮೆಡಿಸಿನ್, ನ್ಯಾಚುರೋಪಥಿ, ಆರ್ಕಿಟೆಕ್ಚರ್, ಬಿ.ಫಾರ್ವ, ಡಿ.ಫಾರ್ವ, ಅಗ್ರಿಕಲ್ಚರ್, ಗೃಹ ವಿಜ್ಞಾನ ಕೋರ್ಸ್​ಗಳಿಗೆ ಪ್ರವೇಶ ಪಡೆಯಲಿದ್ದಾರೆ.

Leave a Reply

Your email address will not be published. Required fields are marked *