More

    ಕರ್ನಾಟಕ ಸಿಇಟಿ ಪರೀಕ್ಷೆ 2023: ಪ್ರವೇಶ ಪತ್ರ ಬಿಡುಗಡೆ

    ಬೆಂಗಳೂರು: ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ನಡೆಸುವ ವೃತ್ತಿಪರ ಕೋರ್ಸ್​ಗಳ ಪ್ರವೇಶಾತಿ ಸಿಇಟಿ ಪರೀಕ್ಷೆಯ ಅಭ್ಯರ್ಥಿಗಳಿಗೆ ಮಹತ್ವದ ಮಾಹಿತಿಯೊಂದನ್ನು ನೀಡಿದೆ. ಮೇ 20 ಮತ್ತು 21ರಂದು ಈ ಸಿಇಟಿ ಪರೀಕ್ಷೆ ನಡೆಯಲಿದೆ.

    ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಸಿಇಟಿ ಪರೀಕ್ಷೆ- 2023 ಪ್ರವೇಶ ಪತ್ರವನ್ನು ಬಿಡುಗಡೆ ಮಾಡಿದ್ದು, ಕೆಇಎ ವೆಬ್‌ಸೈಟ್‌ ಭೇಟಿ ನೀಡಿ ಡೌನ್‌ಲೋಡ್ ಮಾಡಿಕೊಳ್ಳುವಂತೆ ಸೂಚನೆ ನೀಡಿದೆ. ಸರ್ಕಾರದ ನಿರ್ದೇಶನದಂತೆ 2023ನೇ ಸಾಲಿನ ಇಂಜಿನಿಯರಿಂಗ್, ಕೃಷಿ ವಿಜ್ಞಾನ, ವೆಟರ್ನರಿ, ಬಿಎಸ್ಸಿ (ನರ್ಸಿಂಗ್) ಮುಂತಾದ ವೃತ್ತಿಪರ ಕೋರ್ಸ್‌ಗಳ ಪ್ರವೇಶಾತಿಗಾಗಿ ಈ ಪರೀಕ್ಷೆ ನಡೆಯಲಿದೆ.

    ಇದನ್ನೂ ಓದಿ: ದಿ ಕೇರಳ ಸ್ಟೋರಿ ಸಿನಿಮಾಗೆ ಉತ್ತರ ಪ್ರದೇಶ ಬೆಂಬಲ: ತೆರಿಗೆ ವಿನಾಯಿತಿ ಘೋಷಿಸಿದ ಸರ್ಕಾರ

    ಈ ಕುರಿತು ಪ್ರಕಟಣೆಯನ್ನು ಹೊರಡಿಸಿರುವ ಕೆಇಎ, ಅರ್ಹ ಅಭ್ಯರ್ಥಿಗಳು ಪ್ರಾಧಿಕಾರದ ಅಧಿಕೃತ ವೆಬ್‌ಸೈಟ್ http://kea.kar.nic.inಗೆ ಭೇಟಿ ನೀಡಿ ಅರ್ಜಿ ಸಂಖ್ಯೆ ಹಾಗೂ ಅಭ್ಯರ್ಥಿಯ ಹೆಸರನ್ನು ನಮೂದಿಸಿ ಪ್ರವೇಶ ಪತ್ರವನ್ನು ಡೌನ್‌ಲೋಡ್ ಮಾಡಿಕೊಳ್ಳುವಂತೆ ಸೂಚಿಸಿದೆ. ಅಭ್ಯರ್ಥಿಗಳು ಪರೀಕ್ಷೆ ಸಂಬಂಧ ನೀಡಿರುವ ಸೂಚನೆಗಳನ್ನು ಕಟ್ಟು ನಿಟ್ಟಾಗಿ ಪಾಲಿಸತಕ್ಕದ್ದು ಎಂದು ತಿಳಿಸಲಾಗಿದೆ.(ಏಜೆನ್ಸೀಸ್​)

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts