

ಬೆಂಗಳೂರು: ಇಂದು ಬೆಳಗ್ಗೆ 9.30ಕ್ಕೆ CET ಫಲಿತಾಂಶ ಪ್ರಕಟವಾಗಲಿದೆ.
ಬೆಂಗಳೂರಿನ ಮಲ್ಲೇಶ್ವರ 18ನೇ ಕ್ರಾಸ್ನಲ್ಲಿ ಇರುವ ಕೆಇಎ ಬೋಡ್೯ ನಲ್ಲಿ ಸುದ್ದಿಗೋಷ್ಟಿ ನಡೆಯಲಿದ್ದು ಈ ಸಂದರ್ಭ ಉನ್ನತ ಶಿಕ್ಷಣ ಸಚಿವ ಡಾ.ಎಂ ಸಿ ಸುಧಾಕರ್ ಮಾಹಿತಿಯನ್ನು ನೀಡಲಿದ್ದಾರೆ.
ಮೇ 21 , 22 ರಂದು ನಡೆದಿದ್ದ ಸಿಇಟಿ ಪರೀಕ್ಷೆ ನಡೆದಿದ್ದು 2 ಲಕ್ಷ 39 ಸಾವಿರದ 716 ಜನ ವಿದ್ಯಾರ್ಥಿಗಳು ಪರೀಕ್ಷೆಯಲ್ಲಿ ಭಾಗವಹಿಸಿದ್ದರು. ಬೆಂಗಳೂರಿನ 121 ಕೇಂದ್ರಗಳು ಸೇರಿದಂತೆ ರಾಜ್ಯದಲ್ಲಿ ಒಟ್ಟು 592 ಕೇಂದ್ರಗಳಲ್ಲಿ ಪರೀಕ್ಷೆ ನಡೆದಿತ್ತು.
ಒಟ್ಟು ನೋಂದಾಯಿಸಿದ್ದ 2,61,610 ವಿದ್ಯಾರ್ಥಿಗಳ ಪೈಕಿ ಜೀವಶಾಸ್ತ್ರ ಪರೀಕ್ಷೆಗೆ 2,00,457 (82.53%) ಹಾಗೂ ಗಣಿತ ಪರೀಕ್ಷೆಗೆ 2,39,716 (93.78%) ವಿದ್ಯಾರ್ಥಿಗಳು ಹಾಜರಾಗಿದ್ದರು ಎನ್ನಲಾಗಿದೆ. ಭೌತಶಾಸ್ತ್ರ ಮತ್ತು ರಸಾಯನಶಾಸ್ತ್ರ ವಿಷಯಕ್ಕೆ ಒಟ್ಟು ನೋಂದಾಯಿಸಿದ್ದ 2,61,610 ವಿದ್ಯಾರ್ಥಿಗಳ ಪೈಕಿ ಭೌತಶಾಸ್ತ್ರ ಮತ್ತು ರಸಾಯನಶಾಸ್ತ್ರ ಪರೀಕ್ಷೆಗಳಿಗೆ ತಲಾ 2,39,716 (93.16%) ವಿದ್ಯಾರ್ಥಿಗಳು ಹಾಜರಾಗಿದ್ದರು. ಕೀ ಉತ್ತರಗಳನ್ನ ಪ್ರಕಟ ಕೆಇಎ ಮಾಡಿದೆ.