ಹೈದರಾಬಾದ್: ವರ್ಷಾಂತ್ಯದಲ್ಲಿ ವಿಧಾನಸಭೆ ಚುನಾವನೆ ನಡೆಯಲಿರುವ ತೆಲಂಗಾಣದಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿದ್ದು, ಗದ್ದುಗೆಗಾಗಿ ಆಡಳಿತರೂಢ ಬಿಆರ್ಎಸ್, ಕಾಂಗ್ರೆಸ್ ಹಾಗೂ ಬಿಜೆಪಿ ನಡುವೆ ತ್ರಿಕೋನ ಸ್ಪರ್ಧೆ ಏರ್ಪಟ್ಟಿದೆ.
ಚುನಾವಣೆ ದಿನಾಂಕ ಘೋಷಣೆಗೂ ಮುನ್ನವೇ ಆರು ಗ್ಯಾರಂಟಿಗಳನ್ನು ಘೋಷಿಸಿ ರಣಕಹಳೆ ಉದಿದ್ದ ಕಾಂಗ್ರೆಸ್ಗೆ ಸೆಡ್ಡು ಹೊಡೆಯುವ ನಿಟ್ಟಿನಲ್ಲಿ ಮುಖ್ಯಮಂತ್ರಿ ಕೆಸಿಆರ್ ನೇತೃತ್ವದ ಭಾರತ ರಾಷ್ಟ್ರ ಸಮಿತಿ ಪಕ್ಷ ಇಂದು ತನ್ನ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದ್ದು, ಭರ್ಜರಿ ಘೋಷಣೆಗಳನ್ನು ಮಾಡಿದೆ.
ಇದನ್ನೂ ಓದಿ: ಅಫ್ಘಾನಿಸ್ತಾನದಲ್ಲಿ ಮತ್ತೊಮ್ಮೆ ಪ್ರಬಲ ಭೂಕಂಪ; 6.3 ತೀವ್ರತೆ ದಾಖಲು
ತೆಲಂಗಾಣದಲ್ಲಿ ಬಿಆರ್ಎಸ್ ಪಕ್ಷ ಮತ್ತೊಮ್ಮೆ ಅಧಿಕಾರಕ್ಕೆ ಬಂದಲ್ಲಿ ಅರ್ಹ ಕುಟುಂಬಗಳಿಗೆ 400 ರೂಪಾಯಿಗೆ ಎಲ್ಪಿಜಿ ಸಿಲಿಂಡರ್, ಸರ್ಕಾರದ ವತಿಯಿಂದ 15 ಲಕ್ಷ ರೂಪಾಯಿ ವರೆಗಿನ ಆರೋಗ್ಯ ವಿಮೆ, ರೈತಬಂಧು ಯೋಜನೆಯಡಿ ರೈತರ ಖಾತೆಗಳಿಗೆ ಪ್ರತಿವರ್ಷ 16 ಸಾವಿರ ರೂಪಾಯಿ ಹಣ, ದಿವ್ಯಾಂಗರಿಗೆ ಮಾಸಿಕ ಆರು ಸಾವಿರ ರೂಪಾಯಿ ಪಿಂಚಣಿ, 93 ಲಕ್ಷ ಬಿಪಿಎಲ್ ಕುಟುಂಬಗಳಿಗೆ ಕೆಸಿಆರ್ ಬಿಮಾ ಯೋಜನೆಯಲ್ಲಿ ರೂ 5 ಲಕ್ಷ ವಿಮೆ, ದಲಿತಗ ಬಂಧು ಯೋಜನೆಯಡಿಯಲ್ಲಿ ಕುಟುಂಬಕ್ಕೆ 10 ಲಕ್ಷ ರೂಪಾಯಿ ಹಣ ಸೇರಿದಂತೆ ಪ್ರಣಾಳಿಕೆಯಲ್ಲಿ ಹಲವು ಘೊಷಣೆಗಳನ್ನು ಮಾಡಲಾಗಿದೆ.
119 ಸದಸ್ಯಬಲದ ತಲಂಗಾಣ ವಿಧಾನಸಭೆಗೆ ನವೆಂಬರ್ 30ರಂದು ಮತದಾನ ನಡೆಯಲಿದ್ದು, ಡಿಸೆಂಬರ್ 3ಕ್ಕೆ ಫಲಿತಾಂಶ ಪ್ರಕಟವಾಗಲಿದೆ. ಹ್ಯಾಟ್ರಿಕ್ ಗೆಲುವಿನ ನಿರೀಕ್ಷೆಯಲ್ಲಿರುವ ಬಿಆರ್ಎಸ್ ಪಾರ್ಟಿಗೆ ಕಾಂಗ್ರೆಸ್ ಹಾಗೂ ಬಿಜೆಪಿ ತೊಡಕಾಗಿದ್ದು, ಪ್ರಬಲ ಪೈಪೋಟಿ ನೀಡುತ್ತಿವೆ. ಅಂತಿಮವಾಗಿ ವಿಜಯಲಕ್ಷ್ಮಿ ಯಾರ ಕಡೆ ಒಲಿಯಲಿದ್ದಾಳೆ ಎಂಬುದು ಡಿಸೆಂಬರ್ 3ರಂದು ತಿಳಿಯಲಿದೆ.