ಎರಡನೇ ಬಾರಿ ತೆಲಂಗಾಣದ ಮುಖ್ಯಮಂತ್ರಿಯಾಗಿ ಕೆಸಿಆರ್​ ಪ್ರದಗ್ರಹಣ

ಹೈದರಾಬಾದ್​: ವಿಧಾನಸಬಾ ಚುನಾವಣೆಯಲ್ಲಿ ಸ್ಪಷ್ಟ ಬಹುಮತದಿಂದ ಗೆಲುವು ಸಾಧಿಸಿದ ತೆಲಂಗಾಣ ರಾಷ್ಟ್ರ ಸಮಿತಿಯ ಮುಖ್ಯಸ್ಥ ಕೆ.ಚಂದ್ರಶೇಖರ ರಾವ್​ ಎರಡನೇ ಬಾರಿಗೆ ತೆಲಂಗಾಣ ಮುಖ್ಯಮಂತ್ರಿಯಾಗಿ ಗುರುವಾರ ಪ್ರಮಾಣವಚನ ಸ್ವೀಕರಿಸಿದರು.

119 ವಿಧಾನಸಭಾ ಕ್ಷೇತ್ರಗಳ ಪೈಕಿ ಟಿಆರ್‌ಎಸ್‌ 88 ಕ್ಷೇತ್ರಗಳಲ್ಲಿ ಗೆದ್ದು ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಿದ್ದರೆ, ಕಾಂಗ್ರೆಸ್‌-ಚಂದ್ರಬಾಬು ನಾಯ್ಡು ನೇತೃತ್ವದ ಮೈತ್ರಿ ಕೂಟ 17, ಬಿಜೆಪಿ 1 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿತ್ತು.

ತವರು ಕ್ಷೇತ್ರ ಟರ್ಫ್​ ಗಜ್ವೇಲ್​ನಿಂದ ಸ್ಪರ್ಧಿಸಿ ಗೆದ್ದಿರುವ ನೂತನ ಮುಖ್ಯಮಂತ್ರಿ ಕೆಸಿಆರ್​, 1985ರಿಂದ ಸ್ಪರ್ಧಿಸಿರುವ ಎಲ್ಲ ಚುನಾವಣೆಗಳಲ್ಲೂ ಜಯ ಕಂಡಿದ್ದಾರೆ.

2014ರ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್‌ 21, ಟಿಡಿಪಿ 15, ಆಲ್‌ ಇಂಡಿಯಾ ಮಜ್ಲಿಸ್‌ ಇ ಇತ್ತೆಹಾದುಲ್‌ ಮುಸ್ಲಿಮೀನ್‌ 7, ಬಿಜೆಪಿ 5, ವೈಎಸ್‌ಆರ್‌ ಕಾಂಗ್ರೆಸ್‌ ಪಕ್ಷ 3, ಬಿಎಸ್‌ಪಿ 2, ಸಿಪಿಐ, ಸಿಪಿಎಂ ಮತ್ತು ಇತರೆ ತಲಾ 1 ಸ್ಥಾನಗಳಲ್ಲಿ ಗೆಲುವು ಸಾಧಿಸಿದ್ದವು. (ಏಜೆನ್ಸೀಸ್)