ಎರಡನೇ ಅವಧಿಗೆ ತೆಲಂಗಾಣದ ಮುಖ್ಯಮಂತ್ರಿಯಾಗಿ ನಾಳೆ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ಕೆಸಿಆರ್​

ಹೈದರಾಬಾದ್​: ತೆಲಂಗಾಣದ ಮುಖ್ಯಮಂತ್ರಿಯಾಗಿ ಚಂದ್ರಶೇಖರ್​ ರಾವ್​ ಅವರು ಗುರುವಾರ ಪ್ರಮಾಣ ವಚನ ಸ್ವೀಕರಿಸುವ ಸಾಧ್ಯತೆಗಳಿವೆ.

ಮಂಗಳವಾರ ಪ್ರಕಟವಾದ ಚುನಾವಣಾ ಫಲಿತಾಂಶದಲ್ಲಿ ಪ್ರಚಂಡ ಜಯ ಸಾಧಿಸಿದ್ದ ಕೆಸಿಆರ್​ ನೇತೃತ್ವದ ಟಿಆರ್​ಎಸ್​, 119 ಸ್ಥಾನಗಳ ಪೈಕಿ 88 ಸ್ಥಾನಗಳನ್ನು ಗೆದ್ದು ಬೀಗಿತ್ತು. ಅದರ ಬೆನ್ನಿಗೇ, ಕೆಸಿಆರ್​ ಅವರು ಬುಧವಾರ ಪ್ರಮಾಣವಚನ ಸ್ವೀಕರಿಸಲಿದ್ದಾರೆ ಎಂದು ಹೇಳಲಾಗಿತ್ತು. ಆದರೆ, ಅವರು ಗುರವಾರಕ್ಕೆ ಪ್ರಮಾಣವಚನವನ್ನು ಪ್ರಮಾಣವಚನವನ್ನು ಮುಂದೂಡಿದ್ದಾರೆ ಎಂದು ತಿಳಿದು ಬಂದಿದೆ.

ತೆಲಂಗಾಣದಲ್ಲಿ ಕಾಂಗ್ರೆಸ್​-ಟಿಡಿಪಿಯ ಪ್ರಜಾಕೂಟಮಿ ಮೈತ್ರಿಕೂಟ 21 ಸ್ಥಾನಗಳನ್ನು ಗೆದ್ದಿದೆ. ಬಿಜೆಪಿ ಒಂದು ಸ್ಥಾನದಲ್ಲಿ ಗೆದ್ದಿದೆ. ಎಐಎಂಐಎಂ ಪಕ್ಷ 7 ಸ್ಥಾನಗಳಲ್ಲಿ ಗೆದ್ದಿದೆ.