More

    ರಾಷ್ಟ್ರೀಯ ಹೆದ್ದಾರಿ ಆಗಲಿದೆ ಚತುಷ್ಪಥ

    ತರೀಕೆರೆ: ಪಟ್ಟಣದಲ್ಲಿ ಹಾದುಹೋಗಿರುವ ರಾಷ್ಟ್ರೀಯ ಹೆದ್ದಾರಿಯನ್ನು ಚತುಷ್ಪಥವಾಗಿಸಲು ಕೆಎಸ್‌ಎಚ್‌ಡಿಪಿಯಿಂದ 20 ಕೋಟಿ ರೂ., ರಸ್ತೆ ಅಭಿವೃದ್ಧಿ ನಿಗಮದ 10 ಕೋಟಿ ರೂ. ಸೇರಿ ಒಟ್ಟು 50 ಕೋಟಿ ರೂ. ನಿಗದಿಪಡಿಸಲಾಗಿದೆ. ಕಾಮಗಾರಿಗೆ ಶೀಘ್ರ ಟೆಂಡರ್ ಕರೆಯಲಾಗುವುದು ಎಂದು ಶಾಸಕ ಜಿ.ಎಚ್.ಶ್ರೀನಿವಾಸ್ ಹೇಳಿದರು.
    ಪಟ್ಟಣದ ತಾಪಂ ಸಭಾಂಗಣದಲ್ಲಿ ಮಂಗಳವಾರ ತ್ರೈಮಾಸಿಕ ಕೆಡಿಪಿ ಸಭೆಯಲ್ಲಿ ಮಾತನಾಡಿದ ಅವರು, ನಗರಾಭಿವೃದ್ಧಿ ಸಚಿವ ಭೈರತಿ ಸುರೇಶ್ ವಿಶೇಷ ಆಸಕ್ತಿಯಿಂದ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣ ಮತ್ತು ಪಾದಚಾರಿ ಮಾರ್ಗ ನಿರ್ಮಾಣಕ್ಕೆ ಹಣ ಬಿಡುಗಡೆಯಾಗಿದೆ ಎಂದರು.
    7 ಕಿ.ಮೀ. ಉದ್ದ ಪಟ್ಟಣದ ಹೆದ್ದಾರಿಯನ್ನು ಮೊದಲ ಹಂತದಲ್ಲಿ 3 ಕಿ.ಮೀ. ಮಾತ್ರ ಅಭಿವೃದ್ಧಿಪಡಿಸಲಾಗುವುದು. ಪಟ್ಟಣದ ಪ್ರಮುಖ ಮೂರು ಪ್ರದೇಶಗಳನ್ನು ಅಪಘಾತ ವಲಯ ಎಂದು ಗುರುತಿಸಿರುವುದರಿಂದ ರಸ್ತೆ ಅಭಿವೃದ್ಧಿಪಡಿಸುವ ಅಗತ್ಯವಿದೆ ಎಂದು ತಿಳಿಸಿದರು.
    ಪಿಡಬ್ಲುೃಡಿ ಎಇಇ ನಾಗೇಂದ್ರಪ್ಪ ಮಾತನಾಡಿ, ಗುತ್ತಿಗೆದಾರ ಸಿ.ಎಚ್.ವಿ.ಎನ್.ರೆಡ್ಡಿ ಎಂಬುವವರು ತಾಲೂಕಿನಲ್ಲಿ ಕೈಗೊಂಡಿರುವ ಕಾಮಗಾರಿಗಳು ಅಪೂರ್ಣವಾಗಿವೆ. ಅನೇಕ ಬಾರಿ ನೋಟಿಸ್ ನೀಡಿದರೂ ಕಾಮಗಾರಿ ಪೂರ್ಣಗೊಳಿಸುವ ಕಡೆ ಗಮನಹರಿಸುತ್ತಿಲ್ಲ ಎಂದು ಗಮನಕ್ಕೆ ತಂದರು.
    ಜಿ.ಎಚ್.ಶ್ರೀನಿವಾಸ್ ಮಾತನಾಡಿ, ಮತ್ತೊಮ್ಮೆ ನೋಟಿಸ್ ಜಾರಿಗೊಳಿಸಿ ವಾರದೊಳಗೆ ಸಮರ್ಪಕ ಉತ್ತರ ನೀಡದಿದ್ದಲ್ಲಿ ಅವರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು. ಅವರನ್ನು ಕಪ್ಪುಪಟ್ಟಿಗೆ ಸೇರಿಸಲು ಶಿಾರಸು ಮಾಡಬೇಕು ಎಂದು ಸೂಚಿಸಿದರು.
    ಎಂಎಲ್‌ಸಿ ಎಸ್.ಎಲ್.ಬೋಜೇಗೌಡ ಮಾತನಾಡಿ, ಸಭೆಗೆ ಬರುವ ವಿವಿಧ ಇಲಾಖೆ ಅಧಿಕಾರಿಗಳು ಸಮಗ್ರ ಮಾಹಿತಿ ತರಬೇಕು. ಸರ್ಕಾರ ಜನಪರ ಯೋಜನೆ ಅನುಷ್ಠಾನಗೊಳಿಸುತ್ತಿದ್ದು ಅವೆಲ್ಲವೂ ಜನರಿಗೆ ತಲುಪಿಸಬೇಕಿದೆ. ವಿಶೇಷವಾಗಿ ಸಲ್ ಬಿಮಾ ಯೋಜನೆಯಿಂದ ರೈತರಿಗೆ ಅನುಕೂಲವಾಗಿದೆ ಎಂದರು. ನೋಡಲ್ ಅಧಿಕಾರಿಗಳಾದ ಆನಂದ್, ರಮೇಶ್‌ಬಾಬು, ತರೀಕೆರೆ ತಹಸೀಲ್ದಾರ್ ವಿ.ಎಸ್.ರಾಜೀವ್, ಅಜ್ಜಂಪುರ ತಹಸೀಲ್ದಾರ್ ಶಿವಶರಣಪ್ಪ ಕಟ್ಟೋಳಿ, ತಾಪಂ ಇಒ ಟಿ.ಎಸ್.ಗಣೇಶ್ ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts