More

    ಜನರಿಗೆ ಶುದ್ಧ ನೀರು ಪೂರೈಸಿ

    ಕೂಡ್ಲಿಗಿ: ಪಟ್ಟಣದ ತಾಪಂ ಸಭಾಂಗಣದಲ್ಲಿ ಕೆಡಿಪಿ ಸಭೆಯಲ್ಲಿ ಬಡೇಲಡಕು ಗ್ರಾಮದಲ್ಲಿನ ದೊಡ್ಡ ಗೊಲ್ಲರಹಟ್ಟಿಯಲ್ಲಿ ವಾಂತಿ-ಭೇದಿ ಪ್ರಕರಣ ಪ್ರತಿಧ್ವನಿಸಿತು.

    ಆಡಳಿತಾಧಿಕಾರಿ ಎಂ.ಆರ್.ವಿಜಯಕುಮಾರ, ಕಲುಷಿತ ನೀರು ಕುಡಿದು 30 ಕ್ಕೂ ಹೆಚ್ಚು ಜನ ಅಸ್ವಸ್ಥರಾಗಿದ್ದರು. ಈ ಕುರಿತು ಯಾವ ಕ್ರಮ ಕೈಗೊಂಡಿದ್ದೀರಿ ಎಂದು ಟಿಎಚ್‌ಒ ಅವರನ್ನು ಪ್ರಶ್ನಿಸಿದರು.

    ಟಎಚ್‌ಒ ಪ್ರದೀಪ ಕುಮಾರ, ಜನರು ಶುದ್ಧ ನೀರಿನ ಘಟಕವಿದ್ದರೂ ಬಳಕೆ ಮಾಡಲು ಹಿಂದೇಟು ಹಾಕುತ್ತಿದ್ದಾರೆ. ಹೀಗಾಗಿ ಸಮಸ್ಯೆ ಉಂಟಾಗಿತ್ತು. ಗ್ರಾಮದಲ್ಲಿ ತಾತ್ಕಾಲಿಕ ಆರೋಗ್ಯ ಕೇಂದ್ರವನ್ನು ತೆರೆದು ಗ್ರಾಮಸ್ಥರ ಆರೋಗ್ಯ ತಪಾಸಣೆ ಮಾಡಲಾಗಿದೆ. ಈಗ ಯಾವುದೇ ವಾಂತಿ-ಭೇದಿ ಪ್ರಕರಣಗಳ ಕಂಡು ಬಂದಿಲ್ಲ. ಶುದ್ಧ ನೀರಿನ ಘಟಕ ಜಲವನ್ನು ಬಳಸುವಂತೆ ಜನರಿಗೆ ಸೂಚಿಸಲಾಗಿದೆ ಎಂದರು.
    ಪ್ರಭಾರಿ ಬಿಇಒ ಸಿ.ಬಸವರಾಜ, ತಾಲೂಕಿನ ಎಲ್ಲ ಸರ್ಕಾರಿ ಪ್ರಾಥಮಿಕ ಹಾಗೂ ಪೌಢಶಾಲೆಗಳಿಗೆ ಪಠ್ಯ ಪುಸ್ತಕ ಹಾಗೂ ಸಮವಸ್ತ್ರಗಳನ್ನು ಪೂರೈಕೆ ಮಾಡಲಾಗಿದೆ. 2023ನೇ ಶೈಕ್ಷಣಿಕ ವರ್ಷದ ಎಸ್ಸೆಸ್ಸೆಲ್ಸಿ ಫಲಿತಾಂಶದಲ್ಲಿ ತಾಲೂಕಿನ ವಿಭಾಗದಲ್ಲಿ ರಾಜ್ಯಕ್ಕೆ ಐದನೇ ಸ್ಥಾನದಲ್ಲಿ ಬಂದಿದೆ ಎಂದು ತಿಳಿಸಿದರು.

    ತಾಲೂಕಿಗೆ ಕೀರ್ತಿ ತಂದ ವಿದ್ಯಾರ್ಥಿಗಳಿಗೆ ಅಭಿನಂದನೆ

    ಅಧಿಕಾರಿ ವಿಜಯಕುಮಾರ್ ಮಾತನಾಡಿ, ತಾಲೂಕಿಗೆ ಕೀರ್ತಿ ತಂದ ವಿದ್ಯಾರ್ಥಿಗಳಿಗೆ ಅಭಿನಂದನೆ. ಅಲ್ಲದೆ ಮುಂದಿನ ವರ್ಷದಲ್ಲಿ ಫಲಿತಾಂಶದಲ್ಲಿ ಮತ್ತಷ್ಟು ಪ್ರಗತಿ ಸಾಧಿಸಿಬೇಕು. ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಪಡೆದ ಮೂವರು ವಿಧ್ಯಾರ್ಥಿಗಳನ್ನು ಸ್ವಾತಂತ್ರೃ ದಿನಾಚರಣೆಯಲ್ಲಿ ಸನ್ಮಾನಿಸುವಂತೆ ಸೂಚನೆ ನೀಡಿದರು.

    ವಿದ್ಯುತ್ ಸಮರ್ಪಕವಾಗಿ ಪೂರೈಸಿ

    ಅಧಿಕಾರಿ ವಿಜಯಕುಮಾರ, ಮಳೆಗಾಲದ ಕಾರಣ ಪದೇ ಪದೇ ವಿದ್ಯುತ್ ಸಮಸ್ಯೆ ಎದುರಾಗದಂತೆ ಕ್ರಮವಹಿಸಿ ಎಂದರು.
    ಜೆಸ್ಕಾಂ ಎಇಇ ಪ್ರಕಾಶ ಪತ್ತೇನೂರು, ಗಾಳಿ ಮತ್ತು ಮಳೆಗೆ ತಾಲೂಕಿನ ಕೆಲವು ಗ್ರಾಮಗಳಲ್ಲಿ ಮೇ ಮತ್ತು ಜೂನ್‌ನಲ್ಲಿ ಸಮಸ್ಯೆ ತಲೆದೋರಿತ್ತು. ಈಗಾಗಲೇ ಸಿಬ್ಬಂದಿ ಸಮಸ್ಯೆಯನ್ನು ಸರಿಪಡಿಸಿದ್ದಾರೆ. ವಿದ್ಯುತ್ ಪರಿವರ್ತಕಗಳು ಕೂಡ ಸುಸ್ಥಿತಿಯಲ್ಲಿ ಇರುವಂತೆ ಕ್ರಮವಹಿಸಿದ್ದಾರೆ. ಹೊಸಹಳ್ಳಿ ಹೋಬಳಿಯಲ್ಲಿ ವಿದ್ಯುತ್ ಪೂರೈಕೆಯಲ್ಲಿ ಸಮಸ್ಯೆ ಇತ್ತು. ಅದನ್ನು ಈಗ ಸರಿಪಡಿಸಲಾಗಿದೆ ಎಂದು ಸಭೆಗೆ ಮಾಹಿತಿ ನೀಡಿದರು.
    ಗ್ರಾಮೀಣ ಕುಡಿಯುವ ನೀರ ಹಾಗೂ ನೈರ್ಮಲ್ಯ ಇಲಾಖೆಯ ಎಇಇ ಪ್ರಸನ್ನ, ತಾಲೂಕಿನಲ್ಲಿ ಕುಡಿಯುವ ನೀರಿನ ತೊಂದರೆ ಕಂಡು ಬಂದಿಲ್ಲ. ಹಿಂದಿನ ವರ್ಷದಲ್ಲಿ ಉತ್ತಮ ಮಳೆಯಾಗಿದ್ದರಿಂದ ಕೆರೆಗಳು ಭರ್ತಿಯಾಗಿ ಅಂತರ್ಜಲಮಟ್ಟ ಹೆಚ್ಚಳವಾಗಿತ್ತು. ಹೀಗಾಗಿ ಜಲಮೂಲಗಳಲ್ಲಿ ನೀರಿನ ಅಭಾವವಿಲ್ಲ ಎಂದರು

    ಇದನ್ನೂ ಓದಿ: ಪತಿ ವಿರುದ್ಧ ದೂರು ಕೊಡೋಳು ಇವಳೇ, ಬಳಿಕ ಜಾಮೀನು ಕೊಡಿಸೋಳು ಕೂಡ ಈಕೆನೇ; ಹೀಗ್ಯಾಕೆ ಎಂದ ನೆಟ್ಟಿಗರು

    ಸರ್ಕಾರದ ಜಲ ಜೀವನ್ ಮಿಷನ್ ಕಾಮಗಾರಿ ಆರಂಭವಾಗಿದೆ. ತಾಲೂಕಿನ ಬಹುತೇಕ ಹಳ್ಳಿಗಳ ಜನರಿಗೆ ಕುಡಿಯುವ ನೀರಿನ ತೊಂದರೆ ಮುಂದಿನ ದಿನಗಳಲ್ಲಿ ಎದುರಾಗದು ಎಂದು ಮಾಹಿತಿ ನೀಡಿದರು.
    ಕೃಷಿ, ತೋಟಗಾರಿಕೆ, ರೇಷ್ಮೆ ಇಲಾಖೆ ಸೇರಿ ಎಲ್ಲ ಇಲಾಖೆಗಳ ಪ್ರಗತಿ ಪರಿಶೀಲನೆ ನಡೆಯಿತು. ತಾಪಂ ಇಒ ವೈ. ರವಿಕುಮಾರ್, ತಾಪಂ ಸಿಬ್ಬಂದಿ ವೈ.ಅಶ್ವಥ್ ಕುಮಾರ್, ವೆಂಕಟೇಶ್ ಇನ್ನಿತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts