More

    ಕೆಇಎ ತಾತ್ಕಾಲಿಕ ಮೆರಿಟ್ ಪಟ್ಟಿ ಪ್ರಕಟ; ಅಂಕ ಪರಿಗಣನೆ ವಿಧಾನ ಇಂತಿದೆ..

    ಬೆಂಗಳೂರು: ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ಸಹಾಯಕ ಪ್ರಾಧ್ಯಾಪಕ ಹುದ್ದೆಗಳ ತಾತ್ಕಾಲಿಕ ಮೆರಿಟ್ ಪಟ್ಟಿ ಬಿಡುಗಡೆ ಮಾಡಿದ್ದು, ಇದಕ್ಕೆ ಅಂಕಗಳನ್ನು ಪರಿಗಣನೆ ಮಾಡಿರುವ ವಿಧಾನವನ್ನು ವಿವರಿಸಿದೆ. ನೇಮಕಾತಿ ನಿಯಮದ ಪ್ರಕಾರ ಎರಡು ಅಥವಾ ಅದಕ್ಕಿಂತ ಹೆಚ್ಚಿನ ಅಭ್ಯರ್ಥಿಗಳು ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಗಳಿಸಿದ ಒಟ್ಟು ಅಂಕಗಳ ಶೇಕಡವಾರು ಸಮಾನವಾಗಿದ್ದಲ್ಲಿ, ಅಂತಹ ಅಭ್ಯರ್ಥಿಗಳಿಗೆ ಸಂಬಂಧಿಸಿದಂತೆ ಅರ್ಹತೆಯ ಕ್ರಮವನ್ನು ಅವರ ವಯಸ್ಸಿನ ಆಧಾರದ ಮೇಲೆ ನಿಗದಿ ಪಡಿಸಲಾಗುತ್ತದೆ.

    ವಯಸ್ಸಿನಲ್ಲಿ ಹಿರಿಯನಾದ ವ್ಯಕ್ತಿಯನ್ನು ಅರ್ಹತೆಯ ಕ್ರಮದಲ್ಲಿ ಉನ್ನತ ಸ್ಥಾನಕ್ಕೆ ಪರಿಗಣಿಸಲಾಗಿದೆ. ಇದಲ್ಲದೆ, ಇಬ್ಬರು ಅಥವಾ ಅದಕ್ಕಿಂತ ಹೆಚ್ಚು ಅಭ್ಯರ್ಥಿಗಳ ಅಂಕಗಳು ಮತ್ತು ಹುಟ್ಟಿದ ದಿನಾಂಕ ಸಮಾನಾಗಿರುವ ಸಂದರ್ಭದಲ್ಲಿ ಅರ್ಹತೆಯ ಕ್ರಮ ನಿರ್ಧರಿಸಲು ಸರ್ಕಾರದಿಂದ ಸ್ಪಷ್ಟೀಕರಣ ಕೋರಲಾಗಿದೆ ಎಂದು ಕೆಇಎ ಕಾರ್ಯನಿರ್ವಾಹಕ ನಿರ್ದೇಶಕರು ತಿಳಿಸಿದ್ದಾರೆ.

    ಆನ್‌ಲೈನ್‌ನಲ್ಲಿ ಪ್ರಮಾಣಪತ್ರ ಸಲ್ಲಿಸಿ: ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ಸಿಇಟಿ-2022ರ ವಿದ್ಯಾರ್ಥಿಗಳ ದಾಖಲಾತಿ ಪರಿಶೀಲನೆಯನ್ನು ಆನ್‌ಲೈನ್ ಮಾಡಿದ್ದು, ಈ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳಿಗೆ ಪ್ರಮಾಣಪತ್ರಗಳನ್ನು ಅಪ್‌ಲೋಡ್ ಮಾಡಲು ವೇಳಾಪಟ್ಟಿ ಬಿಡುಗಡೆ ಮಾಡಿದೆ.

    ವಿದ್ಯಾರ್ಥಿಗಳು ಕನ್ನಡ ಮಾಧ್ಯಮದಲ್ಲಿ ವ್ಯಾಸಂಗ ಮಾಡಿದ ಮತ್ತು ಗ್ರಾಮೀಣ ಪ್ರದೇಶದಲ್ಲಿ ವ್ಯಾಸಂಗ ಮಾಡಿದ ಪ್ರಮಾಣಪತ್ರಗಳನ್ನು ವೇಳಾಪಟ್ಟಿ ಪ್ರಕಾರ ಅಪ್‌ಲೋಡ್ ಮಾಡಬೇಕಿದೆ. ಆ.22ರಿಂದ ಸಿಇಟಿ 1ನೇ ರ‌್ಯಾಂಕ್‌ನಿಂದ 5000 ರ‌್ಯಾಂಕ್‌ವರೆಗೆ ಅಪ್‌ಲೋಡ್ ಮಾಡಬಹುದು. ಸೆ.7ರವರೆಗೆ ನಡೆಯಲಿದೆ.
    ವಿವಿಧ ವ್ಯಾಸಂಗ ಪ್ರಮಾಣಪತ್ರಗಳ ಪರಿಶೀಲನೆಗಾಗಿ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿಗೆ ಭೇಟಿ ನೀಡುವ ಮೊದಲು ಆನ್‌ಲೈನ್ ದಾಖಲಾತಿ ಪರಿಶೀಲನೆಯ ಬಗ್ಗೆ ಪ್ರಾಧಿಕಾರದ ವೆಬ್‌ಸೈಟ್‌ನಲ್ಲಿ ಅಪ್‌ಲೋಡ್ ಮಾಡಲಾಗಿರುವ ಸೂಚನೆ ಮತ್ತು ಮಾರ್ಗದರ್ಶನಗಳನ್ನು ಅಭ್ಯರ್ಥಿಗಳು ಓದಿಕೊಳ್ಳುವಂತೆ ಕೆಇಎ ಸೂಚಿಸಿದೆ. ಹೆಚ್ಚಿನ ಮಾಹಿತಿಗಾಗಿ ಠಿಠಿ:/ಛಿ.ಚ್ಟ.್ಞಜ್ಚಿ.ಜ್ಞಿ ನೋಡಬಹುದು.

    ಕ್ಲಾಸಲ್ಲಿ ಹುಡುಗ-ಹುಡುಗಿ ಒಟ್ಟಿಗೆ ಕುಳಿತುಕೊಳ್ಳುವುದು ಅಪಾಯಕಾರಿ: ಮುಸ್ಲಿಂ ಸಂಘಟನೆ ಮುಖ್ಯಸ್ಥನ ಹೇಳಿಕೆ..

    ಸಾವರ್ಕರ್ ಫ್ಲೆಕ್ಸ್ ಸಂಘರ್ಷ ಮುಂದುವರಿಕೆ: ಅಲ್ಪಸಂಖ್ಯಾತ ಮುಖಂಡ ಹಾಕಿದ್ದ ಫ್ಲೆಕ್ಸ್ ತೆರವು..

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts