More

    ಸಿಇಟಿ-2023: ಆನ್​​ಲೈನ್​ನಲ್ಲಿ ಪಿಯು ಅಂಕ ದಾಖಲಿಸಲು ಕೆಇಎ ಸೂಚನೆ

    ಬೆಂಗಳೂರು: ಕರ್ನಾಟಕ ಪಿಯು ಬೋರ್ಡ್ ನಡೆಸುವ ದ್ವಿತೀಯ ಪಿಯುಸಿ ಪರೀಕ್ಷೆಯನ್ನು 2023ಕ್ಕಿಂತ ಮುಂಚೆ ಪಾಸಾಗಿರುವವರು ಮತ್ತು 12ನೇ ತರಗತಿಯನ್ನು ಸಿಬಿಎಸ್‌ಇ, ಸಿಐಎಸ್‌ಸಿಇ, 10+2, ಐಜಿಸಿಎಸ್‌ಇ (ಜಮ್ಮು ಮತ್ತು ಕಾಶ್ಮೀರ ಸೇರಿದಂತೆ) ಮತ್ತಿತರ ಬೋರ್ಡ್​​ಗಳ ಪರೀಕ್ಷೆಯನ್ನು 2023ರಲ್ಲಿ ಪೂರೈಸಿರುವ ಎಲ್ಲ ಅಭ್ಯರ್ಥಿಗಳು ಕಡ್ಡಾಯವಾಗಿ ತಮ್ಮ 12ನೇ ತರಗತಿಯ ಅಂಕಗಳನ್ನು ಆನ್​ಲೈನ್ ಮೂಲಕ ಮೇ 31ರ ಒಳಗೆ ದಾಖಲಿಸುವಂತೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ಬುಧವಾರ ಸೂಚಿಸಿದೆ.

    ಪ್ರಾಧಿಕಾರದ ವೆಬ್‌ಸೈಟಿನಲ್ಲಿ ಕೆಇಎ ಪೋರ್ಟಲ್​ನ ನಿಗದಿತ ಲಿಂಕ್‌ ಬಳಸಿಕೊಂಡು ಅಭ್ಯರ್ಥಿಗಳು ಅಂಕಗಳನ್ನು ಮೇ 31ರೊಳಗೆ ದಾಖಲಿಸಬೇಕು ಎಂದು ಕೆಇಎ ವ್ಯವಸ್ಥಾಪಕ ನಿರ್ದೇಶಕಿ ಎಸ್. ರಮ್ಯಾ ತಿಳಿಸಿದ್ದಾರೆ. ರಾಜ್ಯ ಪಠ್ಯಕ್ರಮದಲ್ಲಿ 2023ರಲ್ಲಿ ದ್ವಿತೀಯ ಪಿಯುಸಿ ಓದಿದವರ ಅಂಕಗಳನ್ನು ಪ್ರಾಧಿಕಾರ ನೇರವಾಗಿ ಪದವಿಪೂರ್ವ ಶಿಕ್ಷಣ ಇಲಾಖೆಯಿಂದ ಪಡೆದುಕೊಳ್ಳಲಿದೆ ಎಂದು ಅವರು ಹೇಳಿದ್ದಾರೆ.

    ಇದನ್ನೂ ಓದಿ: ಶಾಸಕ ಹರೀಶ್​ ಪೂಂಜಾ ವಿರುದ್ಧ ಎಫ್​ಐಆರ್​; ಕಾಂಗ್ರೆಸ್​ನ ನಮಿತಾ ದೂರಿನ ಹಿನ್ನೆಲೆಯಲ್ಲಿ ಕ್ರಮ

    ಕರ್ನಾಟಕ ದ್ವಿತೀಯ ಪಿಯುಸಿ ಪರೀಕ್ಷೆಯನ್ನು ಪುನಃ ತೆಗೆದುಕೊಂಡಿರುವ ಅಭ್ಯರ್ಥಿಗಳು (ರಿಪೀಟರ್ಸ್) ಕೂಡ ಅಂಕಗಳನ್ನು ದಾಖಲಿಸಬೇಕು. ಅರ್ಹತಾ ಕಂಡಿಕೆ’ ‘Clause-Y’ ಆಯ್ಕೆ ಮಾಡಿರುವ ಅಭ್ಯರ್ಥಿಗಳೂ ಅಂಕಗಳನ್ನು ಪೋರ್ಟಲ್‌ನಲ್ಲಿ ದಾಖಲಿಸಬೇಕು.

    ಆರ್ಕಿಟೆಕ್ಚರ್ ಕೋರ್ಸುಗಳ ಪ್ರವೇಶಕ್ಕಾಗಿ ಅಭ್ಯರ್ಥಿಗಳು 2023ರ ‘ನಾಟಾ’ (NATA-2023) ಪರೀಕ್ಷೆಯ ಅಂಕಗಳನ್ನು ಅರ್ಹತೆಗೆ ಅನುಗುಣವಾಗಿ ದಾಖಲಿಸಬಹುದು. ವಿವರಗಳಿಗಾಗಿ ಅಭ್ಯರ್ಥಿಗಳು ಪ್ರಾಧಿಕಾರದ ವೆಬ್‌ಸೈಟ್ http://kea.kar.nic.in ಗೆ ಭೇಟಿ ನೀಡಬಹುದು.

    ದಂಪತಿ ಮಧ್ಯೆ ಪ್ರೀತಿ ಇದ್ದರೂ ದಾಂಪತ್ಯ ದ್ರೋಹ; ವಿವಾಹೇತರ ಸಂಬಂಧದ ಬಗ್ಗೆ ಇಲ್ಲ ಪಶ್ಚಾತ್ತಾಪ: ಏನಿದು ಅಧ್ಯಯನ?

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts