ಪಿಜಿ ನೀಟ್ ನೋಂದಣಿಗೆ ಅವಧಿ ವಿಸ್ತರಣೆ: ಕೆಇಎ ಕಚೇರಿಗೆ ಖುದ್ದು ಹಾಜರಾಗಲು ಸೂಚನೆ

medical
Published on

ಬೆಂಗಳೂರು ಕರ್ನಾಟಕ ಪರೀಕ್ಷಾ ಪ್ರಾಧಿಕಾರವು (ಕೆಇಎ) ರಾಜ್ಯದಲ್ಲಿ ಸ್ನಾತಕೋತ್ತರ ವೈದ್ಯಕೀಯ ಕೋರ್ಸುಗಳ ಪ್ರವೇಶಕ್ಕಾಗಿ ಪಿಜಿನೀಟ್-2024ಕ್ಕೆ ಪ್ರಾಧಿಕಾರದಲ್ಲಿ ಆನ್‌ಲೈನ್ ಮೂಲಕ ನೋಂದಣಿ ಮಾಡಿಕೊಳ್ಳಲು ಅ. 7ರ ಮಧ್ಯಾಹ್ನ 2.00 ರವರೆಗೆ ಕಾಲಾವಕಾಶವನ್ನು ವಿಸ್ತರಣೆಗೊಳಿಸಿದೆ.

ಇದುವರೆಗೆ ನೋಂದಣಿ ಮಾಡದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಿ ಶುಲ್ಕ ಪಾವತಿಸಿ ಪ್ರಕ್ರಿಯೆ ಪೂರ್ಣಗೊಳಿಸಬಹುದು. ಶುಲ್ಕ ಪಾವತಿಸದಿರುವ ಅಭ್ಯರ್ಥಿಗಳು ಕೂಡ ಶುಲ್ಕ ಪಾವತಿಸಿ ಅರ್ಜಿ ಸಲ್ಲಿಸುವ ಪ್ರಕ್ರಿಯೆ ಪೂರ್ಣಗೊಳಿಸಲು ಅವಕಾಶವಿದೆ. ನೋಂದಣಿ ಮಾಡಲು ಅಥವಾ ಶುಲ್ಕ ಪಾವತಿಸಲು ಮತ್ತೊಮ್ಮೆ ದಿನಾಂಕವನ್ನು ವಿಸ್ತರಿಸುವುದಿಲ್ಲ ಎಂದು ಸ್ಪಷ್ಟಪಡಿಸಿದೆ.

ಎನ್‌ಎಂಸಿ ಅವರ ಸೂಚನೆಯಂತೆ ರಾಜ್ಯದಲ್ಲಿನ ಸ್ನಾತಕೋತ್ತರ ವೈದ್ಯಕೀಯ ಕೋರ್ಸುಗಳಿಗೆ ಪ್ರವೇಶ ಪಡೆಯುವುದಕ್ಕೆ ಅರ್ಹರಾಗಲು ಕೆಇಎನಲ್ಲಿ ಆನ್‌ಲೈನ್ ಮೂಲಕ ನೋಂದಾಯಿಸಿ, ದಾಖಲೆಗಳ ಪರಿಶೀಲನಾ ಪ್ರಕ್ರಿಯೆಯನ್ನು ಪೂರ್ಣಗೊಳಿಸುವುದು ಕಡ್ಡಾಯವಾಗಿರುತ್ತದೆ.

ಮಾಹಿತಿ ತಿದ್ದುಪಡಿಗೆ ಅವಕಾಶ

ಈಗಾಗಲೇ ಅರ್ಜಿ ಸಲ್ಲಿಸಿ ಶುಲ್ಕ ಪಾವತಿಸಿರುವ ಅಭ್ಯರ್ಥಿಗಳು ಅ.7ರ ಸಂಜೆ 6 ರವರೆಗೆ ಅರ್ಹತೆಗೆ ಅನುಗುಣವಾಗಿ ಅರ್ಜಿಯಲ್ಲಿನ ಮಾಹಿತಿಗಳನ್ನು ತಿದ್ದುಪಡಿ ಮಾಡಿಕೊಳ್ಳಲು ಅವಕಾಶ ನೀಡಲಾಗಿದೆ.

ಪಿಜಿನೀಟ್-2024 ಅರ್ಜಿಯಲ್ಲಿ ಡಿಕ್ಲರೇಷನ್ ಮಾಡಿರುವ ಹಾಗೂ ಶುಲ್ಕ ಪಾವತಿ ಮಾಡದಿರುವ ಅಭ್ಯರ್ಥಿಗಳು ನಿಗದಿತ ಶುಲ್ಕ ಪಾವತಿಸಿ ನಂತರ ತಿದ್ದುಪಡಿ ಮಾಡಿಕೊಳ್ಳಬಹುದಾಗಿದೆ.

ಅರ್ಹರಾದವರು ಹಾಗೂ ಕೆಇಎ ನಲ್ಲಿ ಶುಲ್ಕ ಪಾವತಿಸಿ ನೋಂದಣಿ ಮಾಡಿಕೊಂಡಿರುವ ಅಭ್ಯರ್ಥಿಗಳ ಮೂಲ ದಾಖಲೆಗಳ ಪರಿಶೀಲನೆ ಅ.7ರಿಂದ 18ರವರೆಗೆ ಇಲ್ಲಿನ ಕೆಇಎ ಕಚೇರಿಯಲ್ಲಿ ನಡೆಯಲಿದೆ. ಅಭ್ಯರ್ಥಿಗಳು ಖುದ್ದು ಹಾಜರಾಗಬೇಕು. ಈ ಪ್ರಕ್ರಿಯೆ ಮುಗಿಸದೇ ಇದ್ದರೆ ಸೀಟು ಹಂಚಿಕೆ ಪ್ರಕ್ರಿಯೆಗೆ ಅರ್ಹರಾಗುವುದಿಲ್ಲ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net