ಬೆಂಗಳೂರು: ವಿವಿಧ ವೃತ್ತಿಪರ ಕೋರ್ಸ್ಗಳ ಪ್ರವೇಶಕ್ಕಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ಆಯೋಜಿಸುವ ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ) ಮುಂದೂಡಲ್ಪಟ್ಟಿದೆ.
ಕೆಇಎಯ ಕಾರ್ಯಕಾರಿ ನಿರ್ದೇಶಕರು ಈ ಬಗ್ಗೆ ಮಾಹಿತಿ ನೀಡಿದ್ದಾರೆ. ಕರೊನಾ ವೈರಸ್ ಸೋಂಕಿನ ಹಿನ್ನೆಲೆಯಲ್ಲಿ ರಾಷ್ಟ್ರಾದ್ಯಂತ ಲಾಕ್ಡೌನ್ ಘೋಷಿಸಿರುವುದರಿಂದ, ಪರೀಕ್ಷೆಗಳನ್ನು ಮುಂದೂಡಿರುವುದಾಗಿ ತಿಳಿಸಿದ್ದಾರೆ.
ಪರೀಕ್ಷೆಗಳನ್ನು ಮರುನಿಗದಿಪಡಿಸಿ ಸಿದ್ಧಪಡಿಸಲಾಗುವ ವೇಳಾಪಟ್ಟಿಯನ್ನು ಶ್ರೀಘ್ರದಲ್ಲೇ http://kea.kar.nic.in ವೆಬ್ಸೈಟ್ನಲ್ಲಿ ಪ್ರಕಟಿಸುವುದಾಗಿಯೂ ಹೇಳಿದ್ದಾರೆ.